ಕನ್ನಡಪ್ರಭ ವಾರ್ತೆ ಬೇಲೂರು
ಪಟ್ಟಣದ ಪುರಸಭೆಯ ವೇಲಾಪುರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅನುಷ್ಠಾನ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ವಾರ್ಡ್‌ಗಳಿಗೆ ಪುರಸಭಾ ಸಿಬ್ಬಂದಿ ತೆರಳಿ ನಿವೇಶನ, ವಸತಿ ರಹಿತರು, ಜೋಪಡಿ ಮನೆಗಳ ನಿವಾಸಿಗರನ್ನು ಗುರುತಿಸಿ ಮೊಬೈಲ್ ಆ್ಯಪ್‌ನಲ್ಲಿ ವಿವರವನ್ನು ನೋಂದಾಯಿಸಬೇಕು ಎಂದು ಸೂಚಿಸಿದರು.
ಈಗಾಗಲೇ ಗ್ರಾಮೀಣ ಭಾಗದಲ್ಲಿ ಆಯಾ ಗ್ರಾಪಂಗಳಿಂದ ಸಮೀಕ್ಷೆ ನಡೆಸಲಾಗುತ್ತಿದೆ. ಪ್ರತಿ ತಾಲೂಕಿನಲ್ಲೂ ವಸತಿ ರಹಿತರನ್ನು ಗುರುತಿಸುವ ಕಾರ್ಯ ಮೊದಲಿಗೆ ಆಗಬೇಕು ಎಂದರು.ನಮ್ಮ ಜಿಲ್ಲೆಯಲ್ಲಿ ಎಷ್ಟು ವಸತಿ ರಹಿತರು ಇದ್ದಾರೆ ಎಂಬ ಮಾಹಿತಿ ಕೇಂದ್ರ ಸರ್ಕಾರದ ಗಮನಕ್ಕೆ ತರುವ ಪ್ರಯತ್ನ ಇದಾಗಿದೆ. ನಂತರದಲ್ಲಿ ಸಹಾಯಧನ ನೀಡುವ ಮೂಲಕ ವಸತಿ ಯೋಜನೆಯಡಿ ಫಲಾನುಭವಿಗಳಿಗೆ ಅನುಕೂಲ ಮಾಡಿಕೊಡಲಾಗುವುದು. ಪ್ರಸ್ತುತ ಯೋಜನೆಯಡಿ ನಿವೇಶನ ರಹಿತರಿಗೆ 1.5 ಲಕ್ಷ ರು. ಪ್ರೋತ್ಸಾಹ ಧನ ನೀಡಲಾಗುತ್ತದೆ. 9 ಲಕ್ಷ ರು. ವರೆಗಿನ ಸಾಲ ಸೌಲಭ್ಯ ನೀಡಲಾಗುವುದು ಎಂದು ಹೇಳಿದರು.
ಪ್ರತಿ ವಾರ್ಡ್ ಸದಸ್ಯರ ಮಾಹಿತಿಯನ್ನು ಶೀಘ್ರದಲ್ಲೇ ಖುದ್ದಾಗಿ ನೀಡಬೇಕು. ಪುರಸಭಾ ಅಧಿಕಾರಿಗಳು ಅಥವಾ ಸಿಬ್ಬಂದಿ ತಪ್ಪು ಮಾಹಿತಿ ಸಂಗ್ರಹಿಸಿ, ದಾಖಲಿಸಿರುವ ವಿಷಯ ಕಂಡು ಬಂದಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಅಂತಹವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಖಡಕ್ ಎಚ್ಚರಿಕೆ ನೀಡಿದರು.