ಪ್ಲಾಸ್ಟಿಕ್ ಮುಕ್ತ ಪಟ್ಟಣವನ್ನಾಗಿಸಲು ಪುರಸಭೆ ಅಧ್ಯಕ್ಷ ಪರಮೇಶ್ ಕರೆ

KannadaprabhaNewsNetwork |  
Published : Oct 13, 2023, 12:16 AM IST
ತರೀಕೆರೆ ಪುರಸಭೆಯಿಂದ 60 ಕೆ.ಜಿ.ವಿವಿಧ ಪ್ಲಾಸ್ಟಿಕ್ ಪದಾರ್ಥಗಳ ವಶ | Kannada Prabha

ಸಾರಾಂಶ

ಪ್ಲಾಸ್ಟಿಕ್ ಮುಕ್ತ ಪಟ್ಟಣವನ್ನಾಗಿಸಲು ಪುರಸಭೆ ಅಧ್ಯಕ್ಷ ಪರಮೇಶ್ ಕರೆ

ಕನ್ನಡಪ್ರಭ ವಾರ್ತೆ, ತರೀಕೆರೆ ತರೀಕೆರೆಯನ್ನು ಪ್ಸಾಸ್ಟಿಕ್ ಮುಕ್ತ ಪಟ್ಟಣವನ್ನಾಗಿಸಬೇಕೆಂದು ಪುರಸಭೆ ಅದ್ಯಕ್ಷ ಪರಮೇಶ್ ಹೇಳಿದ್ದಾರೆ. ಗುರುವಾರ ಪುರಸಭೆ ಕಾರ್ಯಾಲದಿಂದ ಪಟ್ಟಣದಲ್ಲಿ ಸುಮಾರು 60 ಕೆಜಿ ನಿಷೇಧಿತ ವಿವಿಧ ಪ್ಲಾಸ್ಟಿಕ್ ಪದಾರ್ಥಗಳನ್ನು ವಶ ಪಡಿಸಿಕೊಂಡ ಸಂದರ್ಭದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಕಳೆದ ಮೂರು ತಿಂಗಳಿನಿಂದ ನಿಷೇಧಿತ ಪ್ಲಾಸ್ಟಿಕ್ ನ್ನು ವಶ ಪಡಿಸಿಕೊಳ್ಳುವ ಅಭಿಯಾನ ಪುರಸಭೆಯಿಂದ ಪ್ರಾರಂಭಿಸಲಾಗಿದೆ. ನಿಷೇಧಿತ ಪ್ಸಾಸ್ಟಿಕ್ ಪದಾರ್ಥಗಳನ್ನು ಉಪಯೋಗಿಸಬಾರದು, ಸಾರ್ವಜನಿಕರು ಪುರಸಭೆಯೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಪುರಸಭೆ ಸದಸ್ಯ ಟಿ.ಎಂ.ಬೋಜರಾಜ್ ಮಾತನಾಡಿ ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಹಾನಿ ಯಾಗುತ್ತದೆ. ನಿಷೇಧಿತ ಪ್ಲಾಸ್ಟಿಕ್ ನ್ನು ಉಪಯೋಗಿಸದಿರಲು ಜಾಗೃತಿಗಾಗಿ ಈ ಅಭಿಯಾನ ನೆಡೆಸಲಾಗುತ್ತಿದೆ. ಪ್ಲಾಸ್ಟಿಕ್ ಬಳಕೆಯಿಂದ ಆರೋಗ್ಯಕ್ಕೂ ಹಾನಿ. ಈ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು. ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್ ಮಾತನಾಡಿ ಪುರಸಭೆ ಸದಸ್ಯರ ಸಹಕಾರದಿಂದ ಪಟ್ಟಣದಲ್ಲಿ ಸುಮಾರು 60 ಕೆಜಿ ವಿವಿಧ ನಿಷೇಧಿತ ಪ್ಲಾಸ್ಟಿಕ್ ಪದಾರ್ಥಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಉತ್ತಮ ಪರಿಸರಕ್ಕೆ ಪ್ಲಾಸ್ಟಿಕ್ ಹಾನಿಕರ. ಪ್ಲಾಸ್ಟಿಕ್ ಪದಾರ್ಥಗಳನ್ನು ಬಳಕೆ ಮಾಡಿದರೆ ದಂಡ ಹಾಕಲಾಗುತ್ತಿದೆ. ನಂತರ ಅಂಗಡಿಯ ಪರವಾನಿಗೆಯನ್ನು ಕೂಡ ರದ್ದು ಗೊಳಿಸಲಾಗುವುದು. ಆದುದರಿಂದ ಪ್ಲಾಸ್ಟಿಕ್ ನ್ನು ನಿಷೇಧಿಸಬೇಕು. ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು. ಪುರಸಭೆ ಪರಿಸರ ಅಭಿಯಂತರರಾದ ತಾಹಿರಾ ತಸ್ಮೀಮ್ ಮಾತನಾಡಿ ಕಳೆದ 3 ತಿಂಗಳಿನಿಂದ ಪಟ್ಟಣದಲ್ಲಿ ನಿಷೇಧಿತ ಪ್ಲಾಸ್ಟಿಕ್ ಪದಾರ್ಥಗಳನ್ನು ವಶ ಪಡಿಸಿಕೊಂಡು 32,700 ರು.ಗಳ ದಂಡ ವಸೂಲು ಮಾಡಲಾಗಿದೆ ಎಂದು ತಿಳಿಸಿದರು. ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕರಾದ ಮಹೇಶ್, ಪ್ರಕಾಶ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 12ಕೆಟಿಆರ್ ಕೆ12ಃ ತರೀಕೆರೆಯಲ್ಲಿ ಪುರಸಭಾ ಕಾರ್ಯಾಲಯದಿಂದ ಸುಮಾರು 60 ಕೆ.ಜಿ.ವಿಷೇಧಿತ ಪ್ಲಾಸ್ಟಿಕ್ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಯಿತು. ಪುರಸಭೆ ಅಧ್ಯಕ್ಷ ಪರಮೇಶ್, ಪುರಸಭೆ ಸದಸ್ಯ ಟಿ.ಎಂ. ಭೋಜರಾಜ್, ಮುಖ್ಯಾಧಿಕಾರಿ ಎಚ್.ಪ್ರಶಾಂತ್, ಪರಿಸರ ಅಭಿಯಂತರರಾದ ತಾಹಿರಾ ತಸ್ಮೀಮ್, ಹಿರಿಯ ಆರೋಗ್ಯ ನಿರೀಕ್ಷಕರಾದ ಮಹೇಶ್, ಪ್ರಕಾಶ್ ಮತ್ತಿತರರು ಇದ್ದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ