ಸ್ವಚ್ಛ ಭಾರತ ನಿರ್ಮಾಣಕ್ಕೆ ಪೌರ ಕಾರ್ಮಿಕರು ಕಾರಣ: ಶಾಸಕ ಕೋಳಿವಾಡ

KannadaprabhaNewsNetwork |  
Published : Sep 24, 2025, 01:01 AM IST
ಫೋಟೊ ಶೀರ್ಷಿಕೆ: ಕನ್ನಡಪ್ರಭ ವಾರ್ತೆ ರಾಣಿಬೆನ್ನೂರು ರಾಣಿಬೆನ್ನೂರು ನಗರದ ರೇಲ್ವೆ ಸ್ಟೇಷನ್ ವರ್ತಕರ ಸಂಘದ ಸಭಾಭವನದಲ್ಲಿ ಏರ್ಪಡಿಸಿದ್ದ ಪೌರ ಕಾರ್ಮಿಕರ ದಿನಾಚರಣೆಯನ್ನು ನಗರಸಭೆ ಅಧ್ಯಕ್ಷೆ ಚಂಪಕ ಬಿಸಲಹಳ್ಳಿ ಉದ್ಘಾಟಿಸಿದರು.  | Kannada Prabha

ಸಾರಾಂಶ

ಸ್ವಚ್ಛ ಭಾರತ ನಿರ್ಮಾಣಕ್ಕೆ ಪೌರ ಕಾರ್ಮಿಕರು ಕಾರಣ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ರಾಣಿಬೆನ್ನೂರು: ಸ್ವಚ್ಛ ಭಾರತ ನಿರ್ಮಾಣಕ್ಕೆ ಪೌರ ಕಾರ್ಮಿಕರು ಕಾರಣ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು. ನಗರದ ರೇಲ್ವೆ ಸ್ಟೇಷನ್ ವರ್ತಕರ ಸಂಘದ ಸಭಾಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಅವರು ಮಾತನಾಡಿದರು. ನಗರದ ಶುಚಿತ್ವದಲ್ಲಿ ನಿರತರಾಗಿರುವ ಪೌರ ಕಾರ್ಮಿಕರು ವೈಯಕ್ತಿಕ ಸ್ವಚ್ಛತೆ ಹಾಗೂ ಸುರಕ್ಷತೆ ಕಡೆಗೂ ಗಮನ ಹರಿಸಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದರು. ನಗರಸಭೆ ಅಧ್ಯಕ್ಷ ಚಂಪಕ ಬಿಸಲಹಳ್ಳಿ ಕಾರ್ಯಕ್ರಮ ಉದ್ಘಾಟಿಸಿದರು. ನಗರಸಭೆ ಉಪಾಧ್ಯಕ್ಷ ನಾಗರಾಜ ಪವಾರ ಮಾತನಾಡಿ, ನಗರದ ಸ್ವಚ್ಛತೆ ಕಾಪಾಡುವ ಪೌರಕಾರ್ಮಿಕರು ನಗರದ ಜೀವಾಳ. ಅವರ ಕಾರ್ಯಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ ಎಂದರು.ನಗರಸಭೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ ಮಾತನಾಡಿ, ಪೌರಕಾರ್ಮಿಕರಿಗೆ ಅವಕಾಶಗಳು ಹಾಗೂ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಇಲ್ಲಿನ ನಗರಸಭೆ ಮುಂದಿದೆ. ವಸತಿ ಯೋಜನೆಯಲ್ಲಿ ಒಳ್ಳೆಯ ಮನೆಗಳನ್ನು ಈಗಾಗಲೇ ನಿರ್ಮಿಸಿದೆ. ಮುಂದಿನ ದಿನಗಳಲ್ಲಿ ಮನೆಯ ನಿರ್ಮಾಣ ವೆಚ್ಚ ಹೆಚ್ಚಾಗುತ್ತಿದೆ. ಹೀಗಾಗಿ ಸರ್ಕಾರದ ವತಿಯಿಂದ 15 ಲಕ್ಷಕ್ಕೂ ಹೆಚ್ಚು ಹಣ ನೀಡಲು ಪ್ರಯತ್ನ ಕೈಗೊಳ್ಳಲಾಗುತ್ತಿದೆ ಎಂದರು.ನಗರಸಭೆ ಸದಸ್ಯರುಗಳಾದ ಪ್ರಕಾಶ ಪೂಜಾರ, ಮಲ್ಲಿಕಾರ್ಜುನ ಅಂಗಡಿ, ಗಂಗಮ್ಮ ಹಾವನೂರ ಮಾತನಾಡಿದರು. ನಗರಸಭೆ ಆಯುಕ್ತ ಎಫ್. ಐ. ಇಂಗಳಗಿ, ಸ್ಥಾಯಿ ಸಮಿತಿ ಅಧ್ಯಕ್ಷ ರಾಮಪ್ಪ ಕರಡೇಣ್ಣನವರ, ಸದಸ್ಯರುಗಳಾದ ರತ್ನಮ್ಮ ಪೂಜಾರ, ಚಂದ್ರಕಲಾ ಬಿಷ್ಟಣ್ಣನವರ, ಮಲ್ಲೇಶಪ್ಪ ಮದ್ಲೇರ, ವೀರೇಶ ಬಾಳೆಹಳ್ಳಿಮಠ, ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷ ಏಳಕೋಟೆಪ್ಪ ಗೋಣಿಬಸಮ್ಮನವರ, ಸ್ಥಳೀಯ ಶಾಖಾ ಅಧ್ಯಕ್ಷ ನಿಂಗಪ್ಪ ಮುದಿಕರಿಯಪ್ಪನವರ, ರೈತ ಮುಖಂಡ ಹನುಮಂತಪ್ಪ ಕಬ್ಬಾರ, ಮಧು ಕೋಳಿವಾಡ, ಮೈಲಪ್ಪ ಗೋಣಿಬಸಮ್ಮನವರ, ಕರಬಸಪ್ಪ ದಾಸಪ್ಪನವರ, ಮೆಣಸಿನಹಾಳ ಅತಿಥಿಗಳಾಗಿ ಆಗಮಿಸಿದ್ದರು. ಸೈಬರ್ ಅಪರಾಧಗಳ ಕುರಿತು ರಿತಿಕಾ ಮಠಪತಿ ಉಪನ್ಯಾಸ ನೀಡಿದರುಇದೇ ಸಮಯದಲ್ಲಿ ಪೌರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕ್ರೀಡಾಕೂಟದಲ್ಲಿ ವಿಜೇತರಾದ ಪೌರ ಕಾರ್ಮಿಕರಿಗೆ ಬಹುಮಾನ ವಿತರಿಸಲಾಯಿತು. ಕನ್ನಡ ಕೋಗಿಲೆ ಖ್ಯಾತಿಯ ಹುಬ್ಬಳ್ಳಿಯ ಮಹನ್ಯ ಪಾಟೀಲ ತಮ್ಮ ಗಾಯನದ ಮೂಲಕ ಎಲ್ಲರನ್ನೂ ರಂಜಿಸಿದರು.ಪರಿಸರ ವಿಭಾಗದ ಸಕಾನಿ

ಇಂಜಿನಿಯರ್ ಮಹೇಶ ಕೊಡಬಾಳ, ನಾಗರತ್ನ ಕೋರಿ, ರಾಘವೇಂದ್ರ ಗಾವಡೆ, ಮಧು ಕಂಬಳಿ, ಶ್ರುತಿ ಮಾರಣ್ಣನವರ, ನಿರ್ಮಲಾ ನಾಯಕ, ಬಿ.ವಸಂತ, ಮಧು ಸಾತೇನಹಳ್ಳಿ, ವಾಣಿಶ್ರೀ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ