ಕನ್ನಡಪ್ರಭ ವಾರ್ತೆ ರಾಮನಗರ
ನಗರದ ನಗರಸಭಾ ಕಚೇರಿಯಲ್ಲಿ ಬುಧವಾರ ಪೌರಕಾರ್ಮಿಕರಿಗೆ ಸನ್ಮಾನಿಸಿ ಮಾತನಾಡಿದ ಅವರು, ವೈದ್ಯರು ರೋಗಬಂದ ಬಳಿಕ ಚಿಕಿತ್ಸೆ ನೀಡಿದರೆ ಪೌರಕಾರ್ಮಿಕರು ಸ್ವಚ್ಛತೆಯ ಮೂಲಕ ಅನಾರೋಗ್ಯ ಬರದಂತೆ ನೋಡಿಕೊಳ್ಳುತ್ತಾರೆ. ಪೌರಕಾರ್ಮಿಕರು ಇಲ್ಲದ ಪಟ್ಟಣವನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅದಕ್ಕಾಗಿ ನಾವೆಲ್ಲರೂ ಪೌರಕಾರ್ಮಿಕರನ್ನು ಗೌರವಿಸ ಬೇಕು ಎಂದರು.
ಜಿಲ್ಲೆಯಲ್ಲಿ ರಾಮನಗರ ಅತಿದೊಡ್ಡ ನಗರವಾಗಿದೆ. ಇಲ್ಲಿ ಕೈಗಾರಿಕೆ ಇದೆ. ಹೀಗಾಗಿ ತ್ಯಾಜ್ಯ ಉತ್ಪಾದನೆ ಹೆಚ್ಚಾಗಿದೆ. ಆದರೆ, ಪೌರಕಾರ್ಮಿಕರು ಅಗತ್ಯಕ್ಕಿಂತ ಅರ್ಧ ದಷ್ಟು ಕಡಿಮೆ ಇದ್ದಾರೆ. ಆದರೂ ಸ್ವಚ್ಛತಾ ಕಾರ್ಯ ಹಿಂದೆ ಉಳಿಯದಂತೆ ನೋಡಿಕೊಂಡಿದ್ದಾರೆ. ಜೊತೆಗೆ ಪೌರ ಕಾರ್ಮಿಕರ ಕೊರತೆ ನೀಗಿಸುವ ಸಂಬಂಧ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.ತಮ್ಮ ಆರೊಗ್ಯವನ್ನು ಲೆಕ್ಕಿಸದೆ ಸಮಾಜದ ಸ್ವಚ್ಛತೆಗೆ ಶ್ರಮಿಸುವ ಪೌರಕಾರ್ಮಿಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ನಡೆಸಲಾಗಿದೆ. ಪೌರಕಾರ್ಮಿಕರ ಸಾಂಸ್ಕೃತಿಕ ಕಾರ್ಯಕ್ರಮ, ಪೌರಕಾರ್ಮಿಕರಿಂದಲೇ ಪ್ರದರ್ಶನ ಗೊಂಡ ನಗೆ ನಾಟಕ ಅತ್ಯಂತ ಯಶಸ್ವಿಯಾಗಿ ಮೂಡಿಬಂದಿದೆ ಎಂದು ಪ್ರಶಂಸಿಸಿದರು.
ಪೌರಾಯುಕ್ತ ಜಯಣ್ಣ ಮಾತಾನಾಡಿ, ನಗರಸಭೆ ವತಿಯಿಂದ ಪೌರಕಾರ್ಮಿಕರಿಗೆ ಹೆಚ್ಚಿನ ಸಹಕಾರ ನೀಡಲಾಗುತ್ತಿದೆ. ಪೌರಕಾರ್ಮಿಕರಿಗೆ ಸಕಾಲದಲ್ಲಿ ವೇತನ ನೀಡಲಾಗುತ್ತಿದೆ. ನಿಮ್ಮ ಮಕ್ಕಳ ಶಿಕ್ಷಣಕ್ಕೆ ನೆರವು, ಪೌರಕಾರ್ಮಿಕರಿಗೆ ಆಗಾಗ್ಗೆ ಆರೋಗ್ಯ ತಪಾಸಣೆ ಮಾಡಿಸಲಾಗುತ್ತಿದೆ ಎಂದರು.