ಕನ್ನಡಪ್ರಭ ವಾರ್ತೆ ಸಾಗರ
ಇಲ್ಲಿನ ನಗರಸಭೆಯಲ್ಲಿ ನಡೆದ ನಗರಸಭೆ ಅಧಿಕಾರಿ, ನೌಕರರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಿಸಿಲು ಮಳೆ ಇರುವುದರಿಂದ ಡೆಂಘೀ ಸೇರಿದಂತೆ ಬೇರೆ ಬೇರೆ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇರುವುದರಿಂದ ಸ್ವಚ್ಛತೆ ಜೊತೆಗೆ ಜನಜಾಗೃತಿ ಮೂಡಿಸಲು ಸೂಚನೆ ನೀಡಿದರು.
ಸಾರ್ವಜನಿಕರು ನಗರಸಭೆಗೆ ಒಂದೇ ಕೆಲಸಕ್ಕೆ ಹತ್ತಾರು ಬಾರಿ ಅಲೆಯುವಂತೆ ಮಾಡಬೇಡಿ. ವಿಳಂಬವಿಲ್ಲದೆ ನಾಗರಿಕರ ಕೆಲಸ ಮಾಡಿಕೊಡಿ. ಅನಗತ್ಯ ವಿಳಂಬ ಮಾಡಿದ್ದು ನನ್ನ ಗಮನಕ್ಕೆ ಬಂದರೆ ಸಂಬಂಧಪಟ್ಟವರ ಅಧಿಕಾರಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಪೌರ ಕಾರ್ಮಿಕರ ಕೊರತೆ ಹಿನ್ನೆಲೆಯಲ್ಲಿ ಗುತ್ತಿಗೆ ಕಾರ್ಮಿಕರನ್ನು ನೇಮಿಸಿಕೊಳ್ಳುವಂತೆ ಇಲ್ಲ. ಖಾಯಂ ನೌಕರರ ನೇಮಕಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಮೂಲಕ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.ಲೋಕಸಭೆ, ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ನಗರೋತ್ಥಾನ ಸೇರಿದಂತೆ ಬೇರೆಬೇರೆ ಕಾಮಗಾರಿಗಳು ವಿಳಂಬವಾಗಿದೆ. ಈಗ ಎಲ್ಲ ಕಾಮಗಾರಿಗಳು ಪುನರಾರಂಭಗೊಂಡಿದ್ದು, ನಿಗದಿತ ಅವಧಿಯಲ್ಲಿ ಕಾಮಗಾರಿ ಮುಗಿಸಲು ಸಂಬಂಧಪಟ್ಟ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದರು.
ಪರಿಸರ ವಿಭಾಗದ ಮದನ್, ಆರೋಗ್ಯ ವಿಭಾಗದ ಶೈಲೇಶ್, ವಿಠ್ಠಲ್ ಹೆಗಡೆ, ರಾಜೇಶ್, ಸಂತೋಷ್ ಕುಮಾರ್, ರಾಮಚಂದ್ರ ಸಾಗರ್ ಇನ್ನಿತರರು ಹಾಜರಿದ್ದರು.