ಕನ್ನಡಪ್ರಭ ವಾರ್ತೆ ಅಥಣಿ
ಪುರಸಭೆಯ ಅಧ್ಯಕ್ಷ ಶಿವಲೀಲಾ ಬುಟಾಳಿ ಕನ್ನಡಪ್ರಭದೊಂದಿಗೆ ಮಾತನಾಡಿ, ಪಟ್ಟಣದ ಸ್ವಚ್ಛತೆಗಾಗಿ ಮತ್ತು ಸುಂದರಿಕರಣಕ್ಕಾಗಿ ನಮ್ಮ ಪೌರಕಾರ್ಮಿಕರು ಪ್ರತಿನಿತ್ಯ ಶ್ರಮಿಸುತ್ತಿದ್ದಾರೆ. ಕಸದ ನಿರ್ವಹಣೆ ಜೊತೆಗೆ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ನಿಯಂತ್ರಣವನ್ನು ತಡೆಗಟ್ಟುವುದು ಸವಾಲಿನ ಕೆಲಸವಾಗಿದೆ. ಪುರಸಭೆ ಆಡಳಿತದ ಜೊತೆಗೆ ಸಾರ್ವಜನಿಕ ಸಹಕಾರವು ಕೂಡ ಅಗತ್ಯವಾಗಿದೆ. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದೇ ಬಟ್ಟೆ ಚೀಲಗಳನ್ನು ಬಳಕೆ ಮಾಡುವುದರ ಜೊತೆಗೆ ಪರಿಸರ ಸಂರಕ್ಷಣೆಗೆ ಸಹಕಾರ ನೀಡಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.ಬಾಕ್ಸ್
ಇದು ಕನ್ನಡಪ್ರಭದ ಫಲಶೃತಿ "ಪ್ಲಾಸ್ಟಿಕ್ ನಿರ್ಮೂಲನೆಯಲ್ಲಿ ಪುರಸಭೆ ವಿಫಲ..! ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಲಾಗಿತ್ತು. ವರದಿಂದ ಎಚ್ಚೆತ್ತುಕೊಂಡ ಪುರಸಭೆ ಅಧಿಕಾರಿಗಳು ಪಟ್ಟಣದ ಗಲ್ಲಿ ಗಲ್ಲಿಗಳಲ್ಲಿ, ಚರಂಡಿಗಳಲ್ಲಿ, ಖಾಲಿ ನಿವೇಶನಗಳಲ್ಲಿ ಸಾರ್ವಜನಿಕರು ಹಾಕುವ ಕಸ ಮತ್ತು ಪ್ಲಾಸ್ಟಿಕ್ ತ್ಯಾಜ್ಯವನ್ನು ಸ್ವಚ್ಛಗೊಳಿಸುವಲ್ಲಿ ನಿರತರಾಗಿದ್ದಾರೆ.ಚರಂಡಿಗಳಲ್ಲಿ ಸೇರಿಕೊಂಡ ಪ್ಲಾಸ್ಟಿಕ್ ಬಾಟಲ್‌ಗಳು, ಕ್ಯಾರಿ ಬ್ಯಾಗ್ ಮುತ್ತು ಇನ್ನಿತರ ಪ್ಲಾಸ್ಟಿಕ್ ತ್ಯಾಜ್ಯಗಳು ಚರಂಡಿ ನೀರು ಸರಾಗವಾಗಿ ಹರಿಯದೆ ನೀರನ್ನು ತಡೆಯುತ್ತಿರುವುದರಿಂದ ಅಲ್ಲಲ್ಲಿ ಗಬ್ಬು ವಾಸನೆ, ಸೊಳ್ಳೆಗಳ ಕಾಟ ಅಧಿಕವಾಗಿ ಸಾಂಕ್ರಾಮಿಕ ರೋಗಗಳು ಜನರನ್ನು ಬಾಧಿಸುತ್ತಿವೆ. ಕೆಲವು ರಸ್ತೆಗಳಲ್ಲಿ ಚರಂಡಿ ನೀರು ಹರಿಯುವಂತಹ ಸನ್ನಿವೇಶಗಳು ಸಾಮಾನ್ಯವಾಗಿವೆ. ಜನ ಮತ್ತು ಜಾನುವಾರುಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಈ ಪ್ಲಾಸ್ಟಿಕ್ ಬಳಕೆ ಮತ್ತು ಅಕ್ರಮ ಮಾರಾಟವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪುರಸಭೆ ಆಡಳಿತವನ್ನು ಎಚ್ಚರಿಸಿದ ಪತ್ರಿಕೆಯ ಜವಾಬ್ದಾರಿಯುತ ಸುದ್ದಿಗೆ ಮತ್ತು ಪೌರಕಾರ್ಮಿಕರು ಪಟ್ಟಣದ ಪ್ರಮುಖ ಚರಂಡಿಗಳಲ್ಲಿನ ಪ್ಲಾಸ್ಟಿಕ್ ತ್ಯಾಜ್ಯವನ್ನ ಸ್ವಚ್ಛಗೊಳಿಸುತ್ತಿರುವ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.-----------
ಅಶೋಕ ಗುಡಿಮನಿ, ಪುರಸಭೆ ಮುಖ್ಯಾಧಿಕಾರಿ, ಅಥಣಿ.