ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದವರೆ ವರ್ಷ ಆಗಿದೆ. ಅಂದಿನಿಂದ ಇಂದಿನವರೆಗೆ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣ ಬೆಳಕಿಗೆ ಬಂದ ಮೇಲೆ ದ್ವೇಷ ರಾಜಕಾರಣ ಇನ್ನೂ ಹೆಚ್ಚಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಆರೋಪಿಗಳನ್ನು ಕಾನೂನಾತ್ಮಕವಾಗಿ ಬಂಧಿಸುವುದಕ್ಕೆ ನಾವು ಏನು ಹೇಳುವುದಿಲ್ಲ. ಮುನಿರತ್ನ ವಿರುದ್ಧ ಎರಡು ಮೊಕದ್ದಮೆ ದಾಖಲಿಸಿದ್ದಾರೆ. ನೋಟಿಸ್ ನೀಡದೆ ಬಂಧನ ಮಾಡುವುದು ಎಷ್ಟು ಸರಿ, ವೈಯಕ್ತಿಕ ಸೇಡಿನಿಂದ ರಾಜಕೀಯ ಮಾಡುವುದು ಸರಿಯಲ್ಲ ಎಂದರು.ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಆ ಕಾನೂನನ್ನೇ ಕಾಂಗ್ರೆಸ್ ಪಾಲಿಸಬೇಕು.
ಮುನಿರತ್ನ ಆಡಿಯೋ ಬಿಡುಗಡೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಾತ್ರ ಇದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಶಾಸಕರು, ಪರಾಜಿತ ಅಭ್ಯರ್ಥಿಗಳು ಹೇಳುತ್ತಾರೆ ಅಂದರೆ ಅವರಿಗೆ ಮಾಹಿತಿ ಇರಬಹುದು. ಅದರ ಬಗ್ಗೆ ಕೂಡ ಪೊಲೀಸರು ತನಿಖೆ ಮಾಡಲಿ ಎಂದು ಹೇಳಿದರು.
ಅದಕ್ಕೆ ಈ ರೀತಿ ಬೆದರಿಕೆ ಹಾಕುವುದನ್ನು ಖಂಡಿಸುತ್ತೇನೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.