ಕನ್ನಡಪ್ರಭ ವಾರ್ತೆ ಚಾಮರಾಜನಗರಬಡವರ ಪರ ಕೆಲಸ ಮಾಡದ ಶಾಸಕರು ಎಂದು ಎ.ಆರ್.ಕೃಷ್ಣಮೂರ್ತಿ ವಿರುದ್ಧ ಮಾಯಸಂದ್ರ ಮುನಿಯಪ್ಪ ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು ಹೇಳಿದರು.ಪತ್ರಿಕಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಳ್ಳೇಗಾಲದಲ್ಲಿ ಸಮಾನ ಮನಸ್ಕರ ವೇದಿಕೆ ಹಮ್ಮಿಕೊಂತಿಡಿದ್ದ ಚಿಂತನ ಸಭೆಯ ಕಾರ್ಯಕ್ರಮವೊಂದರಲ್ಲಿ ಮಾಯಸಂದ್ರ ಮುನಿಯಪ್ಪ ತಮ್ಮ ಹಿಂಬಾಲಕರ ಪ್ರಚೋದನೆಯಿಂದ ತಪ್ಪುಗ್ರಹಿಕೆ ಮಾಡಿಕೊಂಡು ಶಾಸಕ ಎ.ಆರ್.ಕೃಷ್ಣಮೂರ್ತಿ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದ್ದಾರೆ ಇದು ಖಂಡನೀಯ ಎಂದರು. ಕೃಷ್ಣಮೂರ್ತಿ ಬಡವರ ಪರ ಕೆಲಸ ಮಾಡುತ್ತಿದ್ದಾರೆ. ಶಾಸಕರಾದ ನಂತರ ಬೆಂಗಳೂರಿಗೆ ಹೋದಾಗ ಹೊರತುಪಡಿಸಿ ಪ್ರತಿದಿನ ಕ್ಷೇತ್ರದಲ್ಲಿ ಸಂಚರಿಸಿ ಜನಸಂಪರ್ಕ ಸಭೆ ನಡೆಸಿ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿದ್ದಾರೆ. ಸದನದ ಒಳಗಡೆಂಯೂ ಕ್ಷೇತ್ರದ ಅಭಿವೃದ್ಧಿ ಪರ ಶಾಸಕರು ಮಾತನಾಡುತ್ತಾರೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರ ವಿರುದ್ಧ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿದೆ, ಜಿಲ್ಲೆಯಲ್ಲಿ ಸಚಿವ ಸಂಪುಟದ ಸಭೆ ನಡೆಸಲು ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಕಾರಣರಾಗಿದ್ದಾರೆ, ಪ್ರಬುದ್ಧ ರಾಜಕಾರಣಿಯಾಗಿರುವ ಮಾಯಸಂದ್ರ ಮುನಿಯಪ್ಪ ಈ ರೀತಿ ಹೇಳಿಕೆ ನೀಡವುದು ಸರಿಯಲ್ಲ ಎಂದರು. ಸಂಸದರು ಬಿಳಿಗಿರಿ ರಂಗನಬೆಟ್ಟ ರಸ್ತೆ ಅಭಿವೃದ್ದಿಗೆ ಕೇಂದ್ರದ ಅನುದಾನದಲ್ಲಿ 20 ಕೋಟಿ ನೀಡಿದ್ದಾರೆ, ರೈಲ್ವೆ ಯೋಜನೆಗೆ ಬೆಂಬಿಡದೇ ಬರಿತ್ತಿದ್ದಾರೆ ಎಂದು ಕೇಂದ್ರ ಸಚಿವ ಸೋಮಣ್ಣ ಅವರೇ ಹೇಳಿದ್ದಾರೆ, ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ, ಮಾಯಸಂದ್ರ ಮುನಿಯಪ್ಪ ಮುಂದಿನ ಚುನಾವಣೆಯಲ್ಲಿ ಕೊಳ್ಳೇಗಾಲ ಮೀಸಲು ಕ್ಷೇತ್ರಕ್ಕೆ ಬರುವ ಹುನ್ನಾರ ಮಾಡಿಕೊಂಡು ಈ ರೀತಿಯ ಹೇಳಿಕೆ ನೀಡುತ್ತಿರಬಹುದು ಎಂದು ಕುಟುಕಿದರು.
ಪತ್ರಿಕಾಗೋಷ್ಟಿಯಲ್ಲಿ ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಟರ್, ಚಾ.ನಗರ ನಗರಸಭಾ ನಾಮ ನಿರ್ದೇಶಿತ ಸದಸ್ಯ ಸ್ವಾಮಿ, ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಮುಖಂಡರಾದ ಆರ್.ಮಹದೇವ್, ಕಂದಹಳ್ಳಿ ನಂಜುಂಡಸ್ವಾಮಿ, ರವಿ ಇದ್ದರು.