ಕನ್ನಡಪ್ರಭ ವಾರ್ತೆ ಚೆಟ್ಟಳ್ಳಿ
ಕೊಳಂಬೆ ವಿನು ಬೆಳ್ಯಪ್ಪ(53) ಮೃತ ದುರ್ದೈವಿ. ನಂಜರಾಯಪಟ್ಟಣದಲ್ಲಿ ವಾಸವಾಗಿದ್ದ ಬೆಳೆಗಾರ ಕೊಳಂಬೆ ವಿನು, ಅಭ್ಯತ್ ಮಂಗಲದಲ್ಲಿ ಹೊಂದಿರುವ ತೋಟದ ಗೋದಾಮಿನಲ್ಲಿ ಪೈಪುಗಳ ಪರಿಶೀಲನೆಗೆ ತೆರಳಿದ ಸಂದರ್ಭ ಅಪರಿಚಿತರು ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ.
ಗುಂಡಿನ ಸದ್ದು ಕೇಳಿ ಕಾರ್ಮಿಕರು ಸ್ಥಳಕ್ಕಾಗಮಿಸಿದ ಸಂದರ್ಭ ಕೊಳಂಬೆ ವಿನು ರಕ್ತದ ಮಡುವಿನಲ್ಲಿ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕೃತ್ಯಕ್ಕೆ ಆಸ್ತಿ ವೈಷಮ್ಯ ಕಾರಣ ಎಂದು ಹೇಳಲಾಗುತ್ತಿದ್ದು, ಪೊಲೀಸ್ ತನಿಖೆಯಿಂದ ನಿಜಾಂಶ ಹೊರ ಬರಬೇಕಿದೆ.
ಅರ್ಜಿ ಆಹ್ವಾನ
ಈ ಸಂಬಂಧ ಹತ್ತಿರದ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿಯೇ ಖುದ್ದಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಪ್ರಾಚಾರ್ಯರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪೊನ್ನಂಪೇಟೆ ಇವರನ್ನು ಕೆಲಸದ ವೇಳೆಯಲ್ಲಿ ಅಥವಾ ದೂ.ಸಂ. 08274-200221 ಮತ್ತು 9036796935, 9880234243, 9945635160 ಹಾಗೂ 8971358220 ನ್ನು ಸಂಪರ್ಕಿಸಬಹುದು ಎಂದು ಪೊನ್ನಂಪೇಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾರ್ಚಾಯರು ತಿಳಿಸಿದ್ದಾರೆ.