ಮೂರ್ನಾಡು ಹಿಂದೂ ಮಲಯಾಳಿ ಸಂಘ 16ನೇ ವರ್ಷದ ಓಣಂ ಸಂಭ್ರಮ

KannadaprabhaNewsNetwork | Published : Oct 30, 2024 12:36 AM

ಸಾರಾಂಶ

ಮೂರ್ನಾಡು ಹಿಂದೂ ಮಲಯಾಳಿ ಸಂಘದ ವತಿಯಿಂದ ಮೂರ್ನಾಡು ಗೌಡ ಸಮಾಜದಲ್ಲಿ ನಡೆದ ೧೬ನೇ ವರ್ಷದ ಓಣಂ ಆಚರಣೆಯನ್ನು ವಿಧಾನಸಭೆ ಮಾಜಿ ಸ್ಪೀಕರ್ ಕೆಜಿ ಬೋಪಯ್ಯ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಮೂರ್ನಾಡು

ನಮ್ಮ ಆಚಾರ, ವಿಚಾರ, ಸಂಸ್ಕೃತಿ ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ವರ್ಗಾಯಿಸಬೇಕು. ಸಮಾಜ ಒಳ್ಳೆಯದಾದರೆ ನಾಡೂ ಸುಭದ್ರವಾಗುತ್ತದ, ಇದು ದೇಶದ ಅಖಂಡತೆಗೆ ಕಾರಣವಾಗುತ್ತದೆ ಎಂದು ವಿಧಾನಸಭೆ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಹೇಳಿದ್ದಾರೆ.

ಇಲ್ಲಿನ ಹಿಂದೂ ಮಲಯಾಳಿ ಸಂಘದ ವತಿಯಿಂದ ಮೂರ್ನಾಡು ಗೌಡ ಸಮಾಜದಲ್ಲಿ ನಡೆದ ೧೬ನೇ ವರ್ಷದ ಓಣಂ ಆಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಮಾಜಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಹಿಂದೂ ಸಮಾಜದವರು

ತಮ್ಮ ಸಂಸ್ಕೃತಿಗಳನ್ನು ಚಾಚೂ ತಪ್ಪದೆ ಪಾಲಿಸಿದಾಗ ಮಾತ್ರ ಸಮಾಜ ಗಟ್ಟಿಗೊಳ್ಳುತ್ತದೆ. ಆಚಾರ-ವಿಚಾರ ಪಾಲನೆಗಳಿಂದ ಸಮಾಜ ಒಳಿತು ಕಂಡುಕೊoಡಾಗ ದೇಶವೂ ಅಭಿವೃದ್ಧಿ ಹೊಂದುತ್ತದೆ. ಸಮಾಜ ಕಟ್ಟುವುದೊಂದಿಗೆ ದೇಶ ಕಟ್ಟುವ ಕೆಲಸ ಮಾಡಬೇಕು. ಒಗ್ಗಟ್ಟು ಪ್ರದರ್ಶಿಸಿ ಆರ್ಥಿಕವಾಗಿ ಸಬಲರಾಗುವಂತೆ ಪ್ರಯತ್ನಶೀಲರಾಗಬೇಕು ಎಂದರು.

ಹಿoದೂ ಮಲಯಾಳಿ ಸಂಘದ ಜಿಲ್ಲಾ ಸಮಿ ಮಾಜಿ ಮುಖ್ಯ ಕಾರ್ಯದರ್ಶಿ ಪಿ.ಕೆ.

ಶಶಿಕುಮಾರ್, ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿ ಮುಖ್ಯ ಕಾರ್ಯದರ್ಶಿ ಎನ್.ವಿ. ಉನ್ನಿಕೃಷ್ಣ, ಮಡಿಕೇರಿ ಹಿಂದೂ ಮಲಯಾಳಿ ಸಂಘದ ಸಲಹಾ ಸಮಿತಿ ಅಧ್ಯಕ್ಷ ವಾಸುದೇವನ್, ವಿರಾಜಪೇಟೆ ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ವಿನುತ್, ಒಂಟಿಯಂಗಡಿ ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ನಂದಕುಮಾರ್, ನಾಪೋಕ್ಲು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಅನಿಲ್, ಸೋಮವಾರಪೇಟೆ ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಪ್ರಕಾಶ್, ಕುಶಾಲನಗರ ಕೇರಳ ಸಮಾಜದ ಅಧ್ಯಕ್ಷ ಪಿ. ರವೀಂದ್ರನ್, ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎ. ಹಂಸ, ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿ ಉಪಾಧ್ಯಕ್ಷ ಟಿ.ಕೆ. ಸುಧೀರ್, ಮೂರ್ನಾಡು

ಹಿಂದೂ ಮಲಯಾಳಿ ಸಂಘದ ಪ್ರದಾನ ಕಾರ್ಯದರ್ಶಿ ಟಿ. ಸಂತೋಷ್ ಕುಮಾರ್, ಉಪಾಧ್ಯಕ್ಷ ಕೆ.ಎ. ಸುಬ್ರಮಣಿ, ಖಜಾಂಚಿ ಎನ್.ಕೆ. ಮುರಳಿ ಇದ್ದರು.

ಮೂರ್ನಾಡು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ. ಬಾಬು

ಅಧ್ಯಕ್ಷತೆ ವಹಿಸಿದ್ದರು. ೧೦ನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ

ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.

ಬಲಮುರಿಯಲ್ಲಿ ಇತ್ತೀಚಿಗೆ ನದಿಗೆ ಬಿದ್ದ ವ್ಯಕ್ತಿಯನ್ನು ಸಂರಕ್ಷಿಸಿದ ಈಜುಗಾರ ಹಾಗೂ ಸಂಘದ ಸದಸ್ಯ ಎಂ.ಆರ್. ಬಿಪಿನ್ ಅವರನ್ನು ಸಂಘದ ವತಿಯಿoದ ಸನ್ಮಾನಿಸಲಾಯಿತು.

ರಂಗೋಲಿ (ಪೂಕಳಂ) ಸ್ಪರ್ಧೆಯಲ್ಲಿ ಮೂರ್ನಾಡಿನ ಕಿಶೋರ್ ಚಿನ್ನ ಪ್ರಥಮ ಸ್ಥಾನ ಗಳಿಸಿದರು. ಕಬಡಕೇರಿಯ ಜಿತಿನ್ ದ್ವಿತೀಯ ಹಾಗೂ ಪಾಲೆಮಾಡಿನ ಸುನೀತಾ ರಾಜನ್‌ ತೃತೀಯ ಬಹುಮಾನ ಪಡೆದರು.

ಸಮಾರಂಭಕ್ಕೂ ಮುಂಚೆ ಮೂರ್ನಾಡಿನ ಮುಖ್ಯ ಬೀದಿಯಲ್ಲಿ ನಡೆದ ಮೆರವಣಿಗೆಯಲ್ಲಿ ಕೇರಳದ ಸಾಂಪ್ರಾಯಿಕ ಉಡುಪಿನಲ್ಲಿ ಮಹಿಳೆಯರು, ಮಕ್ಕಳು ಮತ್ತು ಮಹನೀಯರು, ಚೆಂಡೆ ಮೇಳದವರು, ಮಾವೇಲಿ ಪಾತ್ರಧಾರಿಗಳು, ಶ್ರೀಕೃಷ್ಣ ವೇಷಧಾರಿಗಳು ಪಾಲ್ಗೊಂಡರು.

ಮೂರ್ನಾಡು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ. ಬಾಬು ರಂಗೋಲಿ

ಸ್ಪರ್ಧೆ ಉದ್ಘಾಟಿಸಿದರು. ಓಣಂ ಭಕ್ಷ್ಯ ಭೋಜನದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಗೋಪಿ, ಸುಜಾತಾ ಗೋಪಿ ಪ್ರಾರ್ಥಿಸಿದರು. ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿ ಉಪಾಧ್ಯಕ್ಷ ಟಿ.ಕೆ. ಸುಧೀರ್ ಸ್ವಾಗತಿಸಿದರು. ಸಜೀವ ನಿರೂಪಿಸಿದರು. ಟಿ. ಸಂತೋಷ್ ಕುಮಾರ್ ವಂದಿಸಿದರು.

Share this article