ಕನ್ನಡಪ್ರಭ ವಾರ್ತೆ ಚಿತ್ರದುರ್ಗ
18, 19ರಂದು ಎರಡು ದಿನ ಅನುಭವ ಮಂಟಪದಲ್ಲಿ ಸಮ್ಮೇಳನ ಆಯೋಜಿಸಲಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಹತ್ತು ಸಾವಿರಕ್ಕೂ ಅಧಿಕ ಪ್ರತಿನಿಧಿಗಳು ಆಗಮಿಸುವ ನಿರೀಕ್ಷೆ ಇದೆ. ಸಮ್ಮೇಳನ ಅಚ್ಚುಕಟ್ಟಾಗಿ ನಿರ್ವಹಿಸಲು ಸಿದ್ಧತೆಗಳು ಪೂರ್ಣಗೊಂಡಿವೆ. ಹೊರಗಡೆಯಿಂದ ಆಗಮಿಸುವವರಿಗೆ ಮುರುಘಾಮಠದಲ್ಲಿ ವಾಸ್ತವ್ಯಕ್ಕೆ ವ್ಯವಸ್ತೆ ಮಾಡಲಾಗಿದೆ.
ಸಮ್ಮೇಳನಾ ಅಧ್ಯಕ್ಷರಾಗಿ ಬಸವಶ್ರೀ ಪ್ರಶಸ್ತಿ ಪುರಸ್ಕೃತ ಸಿದ್ದರಾಮ ಶರಣ ಬೆಲ್ದಾಣ ಅವರನ್ನು ನಿಯೋಜಿಸಲಾಗಿದ್ದು ಶನಿವಾರ ಬೆಳಗ್ಗೆ ಧ್ವಜಾರೋಹಣ ನಂತರ ಮುರುಘಾಮಠದ ಆವರಣದಲ್ಲಿಯೇ ಅಧ್ಯಕ್ಷರ ಮೆರವಣಿಗೆ ನಡೆಯಲಿದೆ. ಎರಡು ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ಧ್ವಜಾರೋಹಣ, ಸಮ್ಮೇಳನಾಧ್ಯಕ್ಷರ ಮೆರವಣಿಗೆ, ನಾನಾ ವಿಷಯಗಳ ಕುರಿತು ಚಿಂತನಗೋಷ್ಠಿಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ವಚನ ಗಮಕ ಸೌರಭ, ಸಮ್ಮೇಳಾಧ್ಯಕ್ಷರೊಂದಿಗೆ ಸಂವಾದ, ಬಹಿರಂಗ ಅವೇಶನ, ಸನ್ಮಾನ ಕಾರ್ಯಕ್ರಮಗಳು ಜರುಗಲಿವೆ ಎಂದರು.ಶನಿವಾರ ಬೆಳಗ್ಗೆ 8-30ಕ್ಕೆ ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಕಳಸದ ರಾಷ್ಟ್ರಧ್ವಜಾರೋಹಣ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಸಿ.ಸೋಮಶೇಖರ ಪರಿಷತ್ತಿನ ಧ್ವಜಾರೋಹಣ ನೆರವೇರಿಸುವರು. ಸುತ್ತೂರು ಕ್ಷೇತ್ರದ ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಗದಗ ಡಂಬಳದ ಶ್ರೀ ತೋಂಟದಾರ್ಯ ಸಂಸ್ಥಾನ ಮಠದ ಶ್ರೀ ತೋಂಟದ ಸಿದ್ಧರಾಮ ಸ್ವಾಮೀಜಿಯವರು ಗೌರವ ಸಾನ್ನಿಧ್ಯವಹಿಸುವರು.
ಮಧ್ಯಾಹ್ನ 2 ಕ್ಕೆ ಸಾಂಸ್ಕೃತಿಕ ನಾಯಕ ಬಸವಣ್ಣ ವಿಷಯ ಕುರಿತು, ಸಂಜೆ 4 ಕ್ಕೆ ಶರಣ ಸಾಹಿತ್ಯದಲ್ಲಿ ಮಹಿಳಾ ಸಂವೇದನೆ,ಸಂಜೆ 5.30 ಕ್ಕೆ ಶರಣ ಸಾಹಿತ್ಯದತ್ತ ಯುವಜನತೆ ವಿಷಯ ಕುರಿತು ಚಿಂತನ ಗೋಷ್ಠಿ ನಡೆಯಲಿದೆ. ಸಂಜೆ 7ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ಕನ್ನಡ ಅಭಿವೃದ್ಧಿ ಪ್ರಾಧಿಕಾರಕದ ಮಾಜಿ ಅಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಉದ್ಘಾಟಿಸುವರು.
ಮುಖ್ಯಮಂತ್ರಿಗಳು ಸೇರಿ ಹಲವರು ಭಾಗಿ