ಸ್ತ್ರೀ ವಿನೂತನ ಪರಿಕಲ್ಪನೆ ವಿಶಿಷ್ಟ ಸಂಗೀತ ಕಾರ್ಯಕ್ರಮ

KannadaprabhaNewsNetwork |  
Published : Feb 25, 2026, 03:00 AM IST
ಸಂಗೀತ ಉತ್ಸವಕ್ಕೆ ಚಾಲನೆ ನೀಡುತ್ತಿರುವುದು | Kannada Prabha

ಸಾರಾಂಶ

ಮಂಗಳೂರಿನ ಸಂಗೀತ ಭಾರತಿ ಫೌಂಡೇಶನ್ ಆಶ್ರಯದಲ್ಲಿ ಉರ್ವ ಅಂಬೇಡ್ಕರ್ ಸಭಾಂಗಣದಲ್ಲಿ ಭಾನುವಾರ ನಡೆದ ಸ್ತ್ರೀ ವಿಶಿಷ್ಟ ಪರಿಕಲ್ಪನೆಯ ಸಂಗೀತ ಕಾರ್ಯಕ್ರಮವನ್ನು ಗುರುಗಳಾದ ಬಸ್ತಿ ಕವಿತಾ ಶೆಣೈ, ವಿಭಾ ನಾಯಕ್, ಶ್ರೀಲತಾ ಪ್ರಭು ದೀಪ ಬೆಳಗಿಸಿ ಉದ್ಘಾಟಿಸಿದರು.

ಮಂಗಳೂರು: ಮಂಗಳೂರಿನ ಸಂಗೀತ ಭಾರತಿ ಫೌಂಡೇಶನ್ ಆಶ್ರಯದಲ್ಲಿ ಉರ್ವ ಅಂಬೇಡ್ಕರ್ ಸಭಾಂಗಣದಲ್ಲಿ ಭಾನುವಾರ ನಡೆದ ಸ್ತ್ರೀ ವಿಶಿಷ್ಟ ಪರಿಕಲ್ಪನೆಯ ಸಂಗೀತ ಕಾರ್ಯಕ್ರಮವನ್ನು ಗುರುಗಳಾದ ಬಸ್ತಿ ಕವಿತಾ ಶೆಣೈ, ವಿಭಾ ನಾಯಕ್, ಶ್ರೀಲತಾ ಪ್ರಭು ದೀಪ ಬೆಳಗಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಸಂಗೀತ ಭಾರತಿ ಫೌಂಡೇಶನ್ ಅಧ್ಯಕ್ಷ ಉಸ್ತಾದ್ ರಫೀಕ್ ಖಾನ್, ಉಪಾಧ್ಯಕ್ಷ ನರೇಂದ್ರ ಎಲ್. ನಾಯಕ್, ಕಾರ್ಯದರ್ಶಿ ಡಾ. ಉಷಾಪ್ರಭಾ ಎನ್. ನಾಯಕ್, ಟ್ರಸ್ಟಿ ರಮೇಶ್ ಕೆಜಿ, ಖಚಾಂಚಿ ಕರುಣಾಕರ ಬಳ್ಕೂರು, ಸದಸ್ಯೆ ಸೌಮ್ಯ ಕಾಮತ್ ಇದ್ದರು.ಪೂರ್ವಾರ್ಧದಲ್ಲಿ ವಿಭಾ ಹೆಗ್ಡೆ ಮತ್ತು ಶಿವಾನಿ ಮಿರಾಜ್ ಕರ್ ಇವರಿಂದ ಶಾಸ್ತ್ರೀಯ ಜುಗಲ್ ಬಂದಿ ಕಾರ್ಯಕ್ರಮ ನಡೆಯಿತು. ಇವರಿಗೆ ಹಾರ್ಮೋನಿಯಂ ನಲ್ಲಿ ಮೇಧಾ ಭಟ್, ತಬ್ಲದಲ್ಲಿ ವಿಜೇತಾ ಹೆಗ್ಡೆ, ತಂಬೂರದಲ್ಲಿ ಪ್ರತೀಕ್ಷ ಪ್ರಭು, ಶಾವರಿ ಸಾಥ್ ನೀಡಿದರು. ಉತ್ತರಾರ್ಧದಲ್ಲಿ ವಯೋಲಿನ್ ಟ್ರಯೋ ಕಾರ್ಯಕ್ರಮವನ್ನು ಸಂಗೀತಾ ಶಂಕರ್ ಮತ್ತು ನಂದಿನಿ ಶಂಕರ್ , ರಾಗಿಣಿ ಶಂಕರ್ ನಡೆಸಿಕೊಟ್ಟರು. ಇವರಿಗೆ ತಬ್ಲದಲ್ಲಿ ಅನುರಾಧ ಪಾಲ್ ಸಾಥ್ ನೀಡಿದರು. ಈ ಕಾರ್ಯಕ್ರಮಕ್ಕೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಪ್ರವಾಸೋದ್ಯಮ ಇಲಾಖೆ, ಕೆನರಾ ಬ್ಯಾಂಕ್, ಡಾ. ದಯಾನಂದ ಪೈ, ಕರ್ಣಾಟಕ ಬ್ಯಾಂಕ್, ಮುದ್ರಾ ಪ್ರಿಂರ್ಟಸ್ ಸಹ ಪ್ರಾಯೋಜಕತ್ವವನ್ನು ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

2 ವರ್ಷದೊಳಗೆ ಪುತ್ತೂರು ದೇವಳ ಬ್ರಹ್ಮಕಲಶ ಗುರಿ: ಅಶೋಕ್‌ ರೈ
ದೇಶಕ್ಕಾಗಿ ರಕ್ತ ಬಲಿದಾನ ನೀಡಿದವರು ಬಿಗ್‌ ಬಾಸ್‌: ದೋ. ಕೇಶವಮೂರ್ತಿ