ನಾಳೆ ತರೀಕೆರೆಯಲ್ಲಿ ಗೀತ ಗಾಯನ

KannadaprabhaNewsNetwork |  
Published : Nov 18, 2026, 01:30 AM IST
01 ದೇವನಹಳ್ಳಿ 01 | Kannada Prabha

ಸಾರಾಂಶ

Musical performance in Tarikere tomorrow

ತರೀಕೆರೆ: ಕನ್ನಡ ಪುಸ್ತಕ ಪ್ರಾಧಿಕಾರ, ಜಿಲ್ಲಾ ಜಾಗೃತ ಸಮಿತಿ, ಚಿಕ್ಕಮಗಳೂರು ಹಾಗೂ ಶರಣ ಸಾಹಿತ್ಯ ಪರಿಷತ್ತು ತರೀಕೆರೆ ಸಹಕಾರದಲ್ಲಿ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನ.19ರಂದು ಗುರುವಾರ ಸಂಜೆ 5 ಘಂಟೆಗೆ ರಾಷ್ಟ್ರಕವಿ ಕುವೆಂಪುರವರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಮಹಾಕಾವ್ಯ ಶ್ರೀ ರಾಮಾಯಣ ದರ್ಶನಂ ಪುಸ್ತಕ ಓದು ಮತ್ತು ಚಿಂತನ ಹಾಗೂ ಗೀತ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪುಸ್ತಕ ಪ್ರಾಧಿಕಾರ ಜಿಲ್ಲಾ ಜಾಗೃತ ಸಮಿತಿ ಸದಸ್ಯ ಹಾಗೂ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಟಿ ದಾದಾಪೀರ್ ಅವರು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಕೊಪ್ಪ ತಾಲೂಕಿನ ವಕೀಲ ಹಾಗೂ ಚಿಂತಕ ಸುಧೀರ್ ಕುಮಾರ್ ಮುರೋಳ್ಳಿ ಕೃತಿ ಕುರಿತು ಮಾತನಾಡಲಿದ್ದಾರೆ. ಸಾಹಿತ್ಯ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇನ್ನರ್ ವ್ಹೀಲ್ ಕ್ಲಬ್ ಹೆಣ್ಣುಮಕ್ಕಳ ಆರೋಗ್ಯ ಅರಿವು ಕಾರ್ಯಕ್ರಮ
ಸಿದ್ದಾಪುರ: ಗುಂಡಿ ಮುಚ್ಚದಿದ್ದರೆ ಉಗ್ರ ಹೋರಾಟ ಎಚ್ಚರಿಕೆ