ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಮಸ್ಕಿ ಬಂದ್ ಯಶಸ್ವಿ

KannadaprabhaNewsNetwork |  
Published : Oct 04, 2024, 01:11 AM IST
03-ಎಂಎಸ್ಕೆ-002 | Kannada Prabha

ಸಾರಾಂಶ

ಮಸ್ಕಿಯಲ್ಲಿ ಒಳಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಪ್ರತಿಭಟನೆ ನಡೆಸಿದರು.

ಟೈರ್‌ ಬೆಂಕಿ ಹಚ್ಚಿ ಆಕ್ರೋಶ । ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕನ್ನಡಪ್ರಭ ವಾರ್ತೆ ಮಸ್ಕಿ

ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಸದಾಶಿವ ಅಯೋಗದ ವರದಿ ಜಾರಿ ಮಾಡಲು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಮೀಸಲಾತಿ ಐಕ್ಯ ಹೋರಾಟ ಸಮಿತಿಯ ವತಿಯಿಂದ ಗುರುವಾರ ಕರೆ ನೀಡಿದ್ದ ಮಸ್ಕಿ ಬಂದ್ ಯಶಸ್ವಿಯಾಗಿ ನಡೆಯಿತು.

ಪಟ್ಟಣದಲ್ಲಿ ಬೆಳಗ್ಗೆ ಅಲ್ಲಲ್ಲಿ ಕೆಲವು ಹೊಟೇಲ್‌ಗಳು ತೆರೆದಿದ್ದವು. ಪ್ರತಿಭಟನಕಾರರು ತೆರಳಿ ಅಂಗಡಿಗಳನ್ನು ಮುಚ್ಚಿ ಸಹಕರಿಸುವಂತೆ ಮನವಿ ಮಾಡುತ್ತಿದ್ದ ದೃಶ್ಯ ಕಂಡು ಬಂತು. ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಕುಳಿತು ಪ್ರತಿಭಟನಕಾರರು ಪ್ರತಿಭಟಿಸಿದರು.

ಅಶೋಕ ವೃತ್ತದಲ್ಲಿ ಪ್ರತಿಭಟನಾಕಾರರು ಟೈರ್‌ಗೆ ಬೆಂಕಿ ಹಚ್ಚಿ ಒಳ ಮೀಸಲಾತಿ ಜಾರಿ ಗೊಳಿಸುವಂತೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಸದಾಶಿವ ವರದಿ ಜಾರಿಗೆ ಆಗ್ರಹಿಸಿದರು.

ಶೋಕ ವೃತ್ತದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಸಾಹಿತಿ ಸಿ.ದಾನಪ್ಪ, ದೊಡ್ಡಪ್ಪ ಮುರಾರಿ, ಹನುಮಂತಪ್ಪ ವೆಂಕಟಾಪೂರ, ಮಲ್ಲಯ್ಯ ಬಳ್ಳಾ, ಮೌನೇಶ ಮುರಾರಿ ಸೇರಿ ಹಲವಾರು ಮುಖಂಡರು ಮಾತನಾಡಿ, ಒಳ ಮೀಸಲಾತಿ ಜಾರಿ ಆಗುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.

ನಂತರ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ನೂರಾರು ಜನರು ಪ್ರಭಟನೆಯಲ್ಲಿ ಭಾಗಿಯಾಗಿದ್ದರು. ಮಸ್ಕಿ ಪಟ್ಟಣ ಬಂದ್ ಹಿನ್ನೆಲೆ ಸಿಪಿಐ ಬಾಲಚಂದ್ರ ಡಿ.ಲಕ್ಕಂ.ಪಿಎಸ್ಐ ತಾರಾಭಾಯಿ ನೇತೃತ್ವದಲ್ಲಿ ಬೀಗಿ ಪೋಲಿಸ ಬಂದೋಬಸ್ತ್ ಮಾಡಲಾಗಿತ್ತು.

ಪ್ರತಿಭಟನಾಕಾರರಿಂದ ಶಾಸಕರ ಕಾರ್ ತಡೆ

ಗುರುವಾರ ಒಳ ಮೀಸಲಾತಿ ಜಾರಿಗಾಗಿ ಮಸ್ಕಿ ತಾಲೂಕು ಬಂದ್‌ಗೆ ಕರೆ ನೀಡಿ ಪ್ರತಿಭಟನೆ ನಡೆಸುವ ವೇಳೆ ರಸ್ತೆ ಮೂಲಕ ಸಂಚರಿಸುತ್ತಿದ್ದ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರ ಕಾರನ್ನು ತಡೆದ ಪ್ರತಿಭಟನಕಾರರು ಒಳ ಮೀಸಲಾತಿ ಜಾರಿ ಮಾಡಲು ವಿಳಂಭ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಕಾರಿನಿಂದ ಇಳಿದ ಶಾಸಕರು ಹೋರಾಟ ಸಮಿತಿಯ ಸದಸ್ಯರೊಂದಿಗೆ ಮೀಸಲಾತಿ ಕುರಿತು ಚರ್ಚಿಸಿದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ