ಗೋವು ರಾಷ್ಟ್ರೀಯ ಪ್ರಾಣಿ ಘೋಷಣೆಗೆ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

KannadaprabhaNewsNetwork |  
Published : Jun 10, 2026, 02:30 AM IST
09ವೇದಿಕೆ | Kannada Prabha

ಸಾರಾಂಶ

ಗೋವು ರಾಷ್ಟ್ರೀಯ ಪ್ರಾಣಿ ಘೋಷಣೆಗೆ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

​ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು ಹಾಗೂ ದೇಶಾದ್ಯಂತ ಗೋಹತ್ಯೆ ಮತ್ತು ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಟ್ಟುನಿಟ್ಟಿನ ಕಾನೂನನ್ನು ಜಾರಿಗೊಳಿಸಬೇಕು ಎಂದು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಇದರ ವಕ್ತಾರ ಮುಸ್ತಾಕ್ ಹೆನ್ನಾಬೈಲು ಒತ್ತಾಯಿಸಿದ್ದಾರೆ.​

ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕಾರ್ಯಾಚರಿಸುತ್ತಿರುವ ಕಸಾಯಿಖಾನೆಗಳನ್ನು ಸಂಪೂರ್ಣವಾಗಿ ಮುಚ್ಚಬೇಕು. ಹಾಗೆಯೇ ಗೋವುಗಳ ರಕ್ಷಣೆಗಾಗಿರುವ ಗೋಶಾಲೆಗಳಿಗೆ ಅಗತ್ಯವಿರುವ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನು ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇತಿಹಾಸ ಕಾಲದಲ್ಲಿ ಮೊಘಲರೇ ಭಾರತದಲ್ಲಿ ಗೋಹತ್ಯೆ ನಿಷೇಧಿಸಿದ್ದರು ಮತ್ತು ಆಗೀನ ಮುಸ್ಲಿಮರೂ ಅದನ್ನು ಒಪ್ಪಿಕೊಂಡು ಪಾಲಿಸುತಿದ್ದರು. ಇಂದು ನಮ್ಮ ಪಕ್ಕದ ಪುಟ್ಟ ದೇಶ ನೇಪಾಳವೇ ಗೋಹತ್ಯೆಯನ್ನು ನಿಷೇಧಿಸಿದೆ. ಆದರೆ ಗೋವನ್ನು ಮಾತೆ ಎಂದು ಪೂಜಿಸುವವವರ ಆಡಳಿತ ನಡೆಸುತ್ತಿರುವ ದೇಶದಲ್ಲಿ ಗೋಹತ್ಯೆ ಇನ್ನೂ ಜಾರಿಯಲ್ಲಿದೆ ಎಂದು ವಿಷಾದಿಸಿದರು. ದೇಶದಲ್ಲಿ ಗೋಹತ್ಯೆ ನಿಷೇಧಿಸುವ ಮತ್ತು ಗೋ ಸಂರಕ್ಷಣೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸರ್ಕಾರಗಳು ಕೇವಲ ಪ್ರಚಾರಕ್ಕೆ ಸೀಮಿತವಾಗಿವೆ. ದೇಶಾದ್ಯಂತ ಗೋಮಾಂಸ ರಫ್ತು ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿರುವುದನ್ನು ತಡೆಯುವ ನಿಟ್ಟಿನಲ್ಲಿ ಇನ್ನು ಕೂಡ ದೃಢವಾದ ಹೆಜ್ಜೆಗಳನ್ನಿಟ್ಟಿಲ್ಲ. ರಾಜಕೀಯಕ್ಕಾಗಿ ಈ ವಿವಾದವನ್ನು ಮುಂದುವರಿಸಲಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ಇನ್ನಾದರೂ ಕೇಂದ್ರ ಸರ್ಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ದೇಶಾದ್ಯಂತ ಏಕ ರೂಪದ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಬೇಕು. ಈ ಮೂಲಕ ಗೋ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಒಂದು ವೇಳೆ ಈ ಕುರಿತು ಸರ್ಕಾರಗಳು ತಕ್ಷಣದ ಕ್ರಮಗಳನ್ನು ಕೈಗೊಳ್ಳದಿದ್ದರೆ ಸಂವಿಧಾನಾತ್ಮಕ ಹಕ್ಕುಗಳ ಅಡಿಯಲ್ಲಿ ಶಾಂತಿಯುತ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.​ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಪ್ರಮುಖರಾದ ಅಬ್ದುಲ್ ಹಫೀಝ್ ಖಾಸಿಮಿ, ಝಾಕೀರ್ ಹುಸೈನ್ ಉಚ್ಚಿಲ, ಇಬ್ರಾಹಿಂ ನಡುಪದವು ಹಾಗೂ ಕೋಟ ಇಬ್ರಾಹಿಂ ಸಾಹೇಬ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಟೇಶ್ವರ: ಸರ್ವೀಸ್ ರಸ್ತೆ ಅಗಲೀಕರಣಕ್ಕೆ ಅಶೋಕ್ ಪೂಜಾರಿ ಒತ್ತಾಯ
ಪ್ರಕೃತಿ ವಿಕೋಪ ನಿರ್ವಹಣೆ: ಡಾ. ಮಂತರ್‌ ಗೌಡ ಸೂಚನೆ