ಬಕ್ರೀದ್‌ ಹಬ್ಬದ ಹಿನ್ನೆಲೆ ಮುಸ್ಲಿಮರ ಸಾಮೂಹಿಕ ಪ್ರಾರ್ಥನೆ

KannadaprabhaNewsNetwork |  
Published : May 29, 2026, 01:45 AM IST
28ಎಚ್ಎಸ್ಎನ್16 : ಹೊಸಲೈನ್‌ ರಸ್ತೆಯ ಹಳೇ ಈದ್ಗಾದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.. | Kannada Prabha

ಸಾರಾಂಶ

ಬಕ್ರೀದ್ ಹಬ್ಬ ಎಂದರೇ ತ್ಯಾಗ ಬಲಿದಾನದ ಸಂಕೇತ. ಪ್ರವಾದಿ ಇಬ್ರಾಹಿಂರು ತನ್ನ ಸ್ವಂತ ಮಗ ಪ್ರವಾದಿ ಇಸ್ಮಾಯಿಲ್ ಅವರನ್ನು ಬಲಿ ಕೊಡುವ ಸಂದರ್ಭ ಒದಗಿ ಬರುತ್ತದೆ. ಇಬ್ರಾಹಿಂರನ್ನು ಪರೀಕ್ಷೆಗೆ ಒಳಪಡಿಸುವಂತಹ ಒಂದು ಸನ್ನಿವೇಶ. ಆ ಒಂದು ಪರೀಕ್ಷೆಯಲ್ಲಿ ಪ್ರವಾದಿ ಇಬ್ರಾಹಿಂರು ಉತ್ತೀರ್ಣರಾಗುತ್ತಾರೆ. ಆ ನೆನಪಿಗಾಗಿ ಪ್ರಾಣಿಯನ್ನು ಬಲಿ ಕೊಡುತ್ತೇವೆ ಎಂದರು. ಹಬ್ಬದ ವೇಳೆ ಹಜ್‌ ಯಾತ್ರೆಯನ್ನು ಕೈಗೊಳ್ಳುತ್ತಾರೆ. ಬಲಿ ಕೊಡುವ ಪ್ರಾಣಿಯ ಮಾಂಸವನ್ನು ಎಲ್ಲಾ ಬಡ ಜನರಿಗೆ ಆಹಾರವನ್ನು ಕೊಡುವುದು ಈ ಬಕ್ರೀದ್ ಹಬ್ಬದ ವೇಳೆ ನೆಡಯುತ್ತದೆ. ಈ ದೇಶದ ಪ್ರಗತಿಗಾಗಿ ಸೌಹಾರ್ದತೆಗಾಗಿ, ಸಹೋದರತ್ವಕ್ಕಾಗಿ ಪ್ರಾರ್ಥನೆ ಸಲ್ಲಿಸುವುದಾಗಿ ಹೇಳಿದರು.

ಕನ್ನಡಪ್ರಭ ವಾರ್ತೆ ಹಾಸನ

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬಕ್ರೀದ್ ಹಬ್ಬದ ಅಂಗವಾಗಿ ಗುರುವಾರ ನಗರದ ಹೊಸಲೈನ್ ರಸ್ತೆ ಬಳಿ ಇರುವ ಹಳೆ ಈದ್ಗಾ ಮೈದಾನ ಮತ್ತು ಅಬ್ದುಲ್ ಕಲಾಂ ರಸ್ತೆ ಬಳಿ ಇರುವ ಹೊಸ ಈದ್ಗಾ ಮೈದಾನ ಸೇರಿದಂತೆ ಇತರೆ ಭಾಗಗಳಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.ಹೊಸಲೈನ್ ರಸ್ತೆ ಬಳಿ ಇರುವ ಹಳೆ ಈದ್ಗಾ ಮೈದಾನದಲ್ಲಿ ಸರಿಯಾಗಿ ಬೆಳಿಗ್ಗೆ ೮ ಗಂಟೆಗೆ ಮುಸ್ಲಿಂ ಬಾಂಧವರು ಒಂದೆಡೆ ಸೇರಿ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಿದರು. ಇದಾದ ಬಳಿಕ ಬೆಳಿಗ್ಗೆ ೯:೧೫ಕ್ಕೆ ನಗರದ ೮೦ ಪೀಟ್ ರಸ್ತೆ ಬಳಿ ಇರುವ ಹೊಸ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಹಜರತ್ ಗುಜರಾತಿ ದರ್ಗಾ ಕಮಿಟಿ ಹಾಗೂ ಈದ್ಗಾ ಕಮಿಟಿ ಅಧ್ಯಕ್ಷ ಸಮೀರ್ ಖಾನ್ ಮಾಧ್ಯಮದೊಂದಿಗೆ ಮಾತನಾಡಿ, ಮೊದಲು ಸಮಸ್ತ ನಾಗರೀಕ ಬಂಧುಗಳಿಗೆ ಬಕ್ರೀದ್ ಹಬ್ಬದ ಅಂಗವಾಗಿ ತುಂಬು ಹೃದಯದ ಶುಭಾಶಯಗಳನ್ನು ಹೇಳಿದರು.

ಬಕ್ರೀದ್ ಹಬ್ಬ ಎಂದರೇ ತ್ಯಾಗ ಬಲಿದಾನದ ಸಂಕೇತ. ಪ್ರವಾದಿ ಇಬ್ರಾಹಿಂರು ತನ್ನ ಸ್ವಂತ ಮಗ ಪ್ರವಾದಿ ಇಸ್ಮಾಯಿಲ್ ಅವರನ್ನು ಬಲಿ ಕೊಡುವ ಸಂದರ್ಭ ಒದಗಿ ಬರುತ್ತದೆ. ಇಬ್ರಾಹಿಂರನ್ನು ಪರೀಕ್ಷೆಗೆ ಒಳಪಡಿಸುವಂತಹ ಒಂದು ಸನ್ನಿವೇಶ. ಆ ಒಂದು ಪರೀಕ್ಷೆಯಲ್ಲಿ ಪ್ರವಾದಿ ಇಬ್ರಾಹಿಂರು ಉತ್ತೀರ್ಣರಾಗುತ್ತಾರೆ. ಆ ನೆನಪಿಗಾಗಿ ಪ್ರಾಣಿಯನ್ನು ಬಲಿ ಕೊಡುತ್ತೇವೆ ಎಂದರು. ಪ್ರಪಂಚದ ನಾನಾ ಮೂಲೆಗಳಿಂದ ಬಕ್ರಿದ್ ಹಬ್ಬದ ವೇಳೆ ಹಜ್‌ ಯಾತ್ರೆಯನ್ನು ಕೈಗೊಳ್ಳುತ್ತಾರೆ. ನಾವೆಲ್ಲಾ ಸಮುದಾಯ ಸೇರಿ ಸಮಾಜದ ಶಾಂತಿಗಾಗಿ ವಿಶೇಷ ಪ್ರಾರ್ಥನೆಯನ್ನು ಮಾಡಿದ್ದೇವೆ. ಬಲಿ ಕೊಡುವ ಪ್ರಾಣಿಯ ಮಾಂಸವನ್ನು ಎಲ್ಲಾ ಬಡ ಜನರಿಗೆ ಆಹಾರವನ್ನು ಕೊಡುವುದು ಈ ಬಕ್ರೀದ್ ಹಬ್ಬದ ವೇಳೆ ನೆಡಯುತ್ತದೆ. ಈ ದೇಶದ ಪ್ರಗತಿಗಾಗಿ ಸೌಹಾರ್ದತೆಗಾಗಿ, ಸಹೋದರತ್ವಕ್ಕಾಗಿ ಪ್ರಾರ್ಥನೆ ಸಲ್ಲಿಸುವುದಾಗಿ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಲ್ಲಟ ಜೆಸ್ಕಾಂ ಉಪ ಕಚೇರಿಗೆ ಬೆಂಕಿ: ಸಿಬ್ಬಂದಿಗೆ ಹಲ್ಲೆ, ದೂರು
3 ರಾಜ್ಯ ಸಿಎಂಗಳೆದುರು ಇಂದು ಟಿಬಿ ಡ್ಯಾಂ ಗೇಟ್‌ ಉದ್ಘಾಟನೆ