ಸರ್ಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾರ್ಯರಂಭಕ್ಕೆ ಮುಸ್ಲಿಂ ಸಂಘಟನೆಯಿಂದ ಆಗ್ರಹ

KannadaprabhaNewsNetwork |  
Published : Aug 14, 2025, 01:00 AM IST
13ಎಚ್ಎಸ್ಎನ್12 :  | Kannada Prabha

ಸಾರಾಂಶ

ಈ ಆಸ್ಪತ್ರೆಯಲ್ಲಿ ಹೃದ್ರೋಗ, ಶಸ್ತ್ರ ಚಿಕಿತ್ಸೆ, ನರರೋಗ, ನರ ರೋಗ ಶಸ್ತ್ರ ಚಿಕಿತ್ಸೆ, ಮೂತ್ರಪಿಂಡ, ಗ್ಯಾಸ್ಟ್ರೋ ಎಂಟಾಲಜಿ, ಕ್ಯಾನ್ಸರ್, ಪ್ಲಾಸ್ಟಿಕ್ ಸರ್ಜರಿ ಸೇರಿದಂತೆ ಮಾರಣಾಂತಿಕ ರೋಗದಂಥ ಹತ್ತು ಹಲವು ಗಂಭೀರ ಸ್ವರೂಪದ ಆರೋಗ್ಯದ ಸಮಸ್ಯೆಗಳಿಗೆ ಚಿಕಿತ್ಸೆ ಒದಗಿಸಲು ಇಲ್ಲಿ ಸಾಧ್ಯ ಇದೆ.

ಕನ್ನಡಪ್ರಭ ವಾರ್ತೆ ಹಾಸನ

ನಗರದ ಸರ್ಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸಾರ್ವಜನಿಕ ಸೇವೆಗೆ ಕಾರ್ಯಾರಂಭ ಮಾಡಲು ಹಾಗೂ ಅಗತ್ಯ ಸಲಕರಣೆಗಳಿಗಾಗಿ ಅನುದಾನ ಬಿಡುಗಡೆಗೊಳಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಮುಸ್ಲಿಂ ಧಾರ್ಮಿಕ ಆಸ್ತಿ ಹಿತಾ ರಕ್ಷಣಾ ವೇದಿಕೆಯಿಂದ ಬುಧವಾರ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಮುಸ್ಲಿಂ ಧಾರ್ಮಿಕ ಆಸ್ತಿ ಹಿತ ರಕ್ಷಣಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಸಮೀರ್ ಅಹಮದ್ ಮಾತನಾಡಿ, ನಗರದಲ್ಲಿ ನೂತನವಾಗಿ ಆರ್.ಸಿ. ರಸ್ತೆ ಗಂಧದಕೋಠಿ ಆವರಣದಲ್ಲಿ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು (ಹಿಮ್ಸ್) ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಿರುವುದು ಸ್ವಾಗತಾರ್ಹ. ಬಹುತೇಕ ಬಡ ರೋಗಿಗಳಿಗೆ ನೂತನವಾಗಿ ನಿರ್ಮಿಸಿರುವ ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಅನುಕೂಲಕರವಾಗಿದೆ, ಇದು ಹಾಸನ ನಗರಕ್ಕೆ ಅತ್ಯಗತ್ಯ. ಹಾಸನ ಜಿಲ್ಲೆಗೆ ಹತ್ತಿರವಿರುವ ಜಿಲ್ಲೆಗಳು ಹಾಗೂ ತಾಲೂಕುಗಳಿಂದ ಬಡ ಹಾಗೂ ಮಧ್ಯಮ ವರ್ಗದ ರೋಗಿಗಳಿಗೆ ಚಿಕಿತ್ಸೆ ಪಡೆದುಕೊಳ್ಳಲು ಸಹಕಾರಿಯಾಗಿದೆ. ಈ ಆಸ್ಪತ್ರೆಯಲ್ಲಿ ಹೃದ್ರೋಗ, ಶಸ್ತ್ರ ಚಿಕಿತ್ಸೆ, ನರರೋಗ, ನರ ರೋಗ ಶಸ್ತ್ರ ಚಿಕಿತ್ಸೆ, ಮೂತ್ರಪಿಂಡ, ಗ್ಯಾಸ್ಟ್ರೋ ಎಂಟಾಲಜಿ, ಕ್ಯಾನ್ಸರ್, ಪ್ಲಾಸ್ಟಿಕ್ ಸರ್ಜರಿ ಸೇರಿದಂತೆ ಮಾರಣಾಂತಿಕ ರೋಗದಂಥ ಹತ್ತು ಹಲವು ಗಂಭೀರ ಸ್ವರೂಪದ ಆರೋಗ್ಯದ ಸಮಸ್ಯೆಗಳಿಗೆ ಚಿಕಿತ್ಸೆ ಒದಗಿಸಲು ಇಲ್ಲಿ ಸಾಧ್ಯ ಇದೆ. ಆದ್ದರಿಂದ ಉಳಿದಿರುವ ಕಾಮಗಾರಿ ತುರ್ತಾಗಿ ಆಗಬೇಕಿದೆ. ಆಸ್ಪತ್ರೆಗೆ ಬೇಕಾಗುವ ವೈದ್ಯಕೀಯ ಯಂತ್ರೋಪಕರಣಗಳು, ವೈದ್ಯ ಮತ್ತು ವೈದ್ಯಕೀಯೇತರ ಸಿಬ್ಬಂದಿಯ ನೇಮಕಾತಿ ಮಾಡಬೇಕು. ಅಗತ್ಯವಿರುವ ಅನುದಾನವನ್ನು ಸರ್ಕಾರ ಕೂಡಲೇ ಬಿಡುಗಡೆಗೊಳಿಸಿ, ಸರ್ಕಾರಿ ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾರ್ಯಾರಂಭಕ್ಕೆ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಕರ್ನಾಟಕ ಸರ್ಕಾರ ತ್ವರಿತಗತಿಯಲ್ಲಿ ಕ್ರಮ ವಹಿಸಬೇಕೆಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಮುಸ್ಲಿಂ ಧಾರ್ಮಿಕ ಆಸ್ತಿ ಹಿತ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಅಮೀರ್ ಜಾನ್ ಸಾಬ್, ಉಪಾಧ್ಯಕ್ಷ ಅಶ್ವಾಕ್ ಅಹಮದ್, ನಿರ್ದೇಶಕ ಯೂನುಸ್ ಪಾಷಾ, ಸಯ್ಯದ್ ಸನಾಉಲ್ಲಾ, ವೀರ ಕನ್ನಡಿಗ ಟಿಪ್ಪು ಸೇನೆ ಸಂಸ್ಥಾಪಕ ಅಕ್ಮಲ್ ಜಾವೀದ್, ಸಿಐಟಿಯು ಕಾರ್ಯದರ್ಶಿ ಅರವಿಂದ್ ಇತರರು ಉಪಸ್ಥಿತರಿದ್ದರು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌