ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರಲು ಮುಸ್ಲಿಂ ಸಮುದಾಯ ಕಾರಣವಾಗಿದೆ. ದಾವಣಗೆರೆ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯ ಅಭ್ಯರ್ಥಿಗೆ ಟಿಕೇಟ್ ನೀಡುವಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ಕಾಂಗ್ರೆಸ್ ಮುಖಂಡರನ್ನು ಒತ್ತಾಯಿಸಿದರು. ಅಲ್ಲದೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಮತಗಳು ಕೂಡ ಹೆಚ್ಚಾಗಿದ್ದವು, ಆದರೂ ಮುಸ್ಲಿಮರಿಗೆ ಟಿಕೆಟ್ ನೀಡದೆ ಪುನಃ ಶಾಮಮನೂರು ಶಿವಶಂಕರಪ್ಪ ಕುಟುಂಬಕ್ಕೆ ಟಿಕೆಟ್ ನೀಡಿ ಇಡೀ ಮುಸ್ಲಿಂ ಸಮುದಾಯವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದರು.
ಇಷ್ಟಲ್ಲದೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಮತ್ತು ಕಾಂಗ್ರೆಸ್‌ನ ಸುರ್ಜೇವಾಲ ಅವರು ಜಮೀರ್ ಅಹಮ್ಮದ್ ಖಾನ್ ಮತ್ತು ನಮ್ಮ ಉಲೇಮಗಳಿಗೆ ಅವಮಾನಿಸಿದ್ದಾರೆ. ಇದು ಇಡೀ ಮುಸ್ಲಿಂ ಸಮುದಾಯವನ್ನೇ ಅವಮಾನ ಮಾಡಿದಂತೆ. ಕೂಡಲೇ ಅವರು ನಮ್ಮ ನಾಯಕ ಜಮೀರ್ ಅಹಮ್ಮದ್ ಖಾನ್ ಅವರಲ್ಲಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.ಉಪ ಚುನಾವಣೆಯ ಎರಡು ಕ್ಷೇತ್ರಗಳ ಫಲಿತಾಂಶ ಏನೇ ಬಂದರು. ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ತೊಂದರೆ ಇಲ್ಲ ಎಂಬುದು ನಮಗು ಗೊತ್ತು. ಆದರೂ ಕೂಡ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲೇಬೇಕಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವರು ನಾಯಕರು ನಮ್ಮನ್ನು ವೋಟ್ ಬ್ಯಾಂಕಿಗಾಗಿಯೇ ಬಳಸಿಕೊಳ್ಳತ್ತಾರೆಯೇ ವಿನಹ ಯಾವುದೇ ಸೌಲಭ್ಯಗಳನ್ನು ನೀಡುವುದಿಲ್ಲ. ಇವೆಲ್ಲವೂ ತೋರಿಕೆಗೆ ಮಾತ್ರ ಹಾಗಾಗಿ ಈ ಬಾರಿಯ ಚುನಾವಣೆಯಲ್ಲಿ ತಕ್ಕ ಪಾಠ ಮುಸ್ಲಿಮರು ಕಲಿಸಲೇಬೇಕಾಗಿದೆ ಎಂದರು.
ಗೋಷ್ಠಿಯಲ್ಲಿ ವೇದಿಕೆಯ ಪ್ರಮುಖರಾದ ಮೊಹಮ್ಮದ್ ಸಾದತ್‌ವುಲ್ಲ, ಎಂ.ಡಿ.ಇರ್ಷದ್, ಮಹಮ್ಮದ್ ಗೌಸ್, ನೂರುಲ್ಲಾ, ಎಂ.ಡಿ.ದಸ್ತಗಿರ್, ಮುಕ್ತಿಯಾರ್ ಅಹಮ್ಮದ್, ಸುಲೇಮಾನ ಶರೀಫ್, ಫಾರೂಕ್ ಸಾಬ್, ರಿಯಾಜ್, ಅನ್ವರ್ ಸೇರಿದಂತೆ ಹಲವರು ಇದ್ದರು.