ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ ಭಾಷಣ
ಸಾಮಗ ಅವರ ದೈತ್ಯ ಪ್ರತಿಭೆ ಅವರ ಮಾನವೀಯತೆಯ ನಡೆ ಅಭಿನಂದನಾರ್ಹ ಕನ್ನಡ ಮತ್ತು ಆಂಗ್ಲ ಭಾಷೆಯ ಅವರ ಪ್ರೌಢಿಮೆ ಅವರು ನಾಡಿಗೆ ಕೊಟ್ಟಂತ ಶ್ರೇಷ್ಠ ಚಿಂತನೆಗಳು ಎಲ್ಲರಿಗೂ ಮಾದರಿಯಾಗಿದೆ, ಕನ್ನಡ ನಮ್ಮ ಸ್ವಾಭಿಮಾನದ ಸಂಕೇತವಾಗಿದೆ ಇದನ್ನು ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದಾಗಿದೆ ಎಂದು ಹೇಳಿದರು.ಈ ಹಿಂದೆ ಸಾಹಿತ್ಯ ಧರ್ಮ ಮತ್ತು ರಾಜಾಶ್ರಯ ಪಡೆದಿತ್ತು ಆದರೆ ಇಂದು ಪ್ರಜಾಪ್ರಭುತ್ವ ಮಾದರಿಯಲ್ಲಿ ಮತ್ತಷ್ಟು ಗಟ್ಟಿಯಾಗಿ ಎತ್ತರಕ್ಕೆ ಏರಿದೆ ಎಂದು ತಿಳಿಸಿದರು.ಈ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಚರ್ಚೆಗಳು ವಿಚಾರಗೋಷ್ಠಿ ಯಕ್ಷ ಕವಿಗೋಷ್ಠಿ ಸೇರಿದಂತೆ ಬಹಳಷ್ಟು ಉತ್ತಮವಾದ ಕಾರ್ಯಕ್ರಮಗಳು ನಡೆದಿದೆ ಎಂದರು.ಸಮ್ಮೇಳನದ ಅಧ್ಯಕ್ಷ ಪ್ರೊ. ಎಂ.ಎಲ್ ಸಾಮಗ ಮಾತನಾಡಿ, ಮಲ್ಪೆ ಎಂದರೆ ಎಲ್ಲರಿಗೂ ನೆನಪಾಗುವುದು ಶಂಕರನಾರಾಯಣ ಸಾಮಗ ಅಂತ ಶ್ರೇಷ್ಠ ವ್ಯಕ್ತಿ ಅವರು ಕೊಟ್ಟಂತಹ ಕೊಡುಗೆಗಳು ನಮ್ಮನ್ನು ಈ ಎತ್ತರಕ್ಕೆ ಏರಿಸುತ್ತಿದೆ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಯಕ್ಷಗಾನದ ಕಲಾವಿದರನ್ನು ಸಮ್ಮೇಳನ ಅಧ್ಯಕ್ಷ ಮಾಡಿರೋದು ಯಕ್ಷಗಾನಕ್ಕೆ ನೀಡಿದ ದೊಡ್ಡ ಅಭಿನಂದನೆಯಾಗಿದೆ ಎಂದರು.ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ತನ್ನ ವೈವಿಧ್ಯಪೂರ್ಣ ಕಾರ್ಯಕ್ರಮಗಳಿಂದ ರಾಜ್ಯದ ಮನೆ ಮಾತಾಗಿದೆ ಈ ರೀತಿಯ ಕಾರ್ಯಕ್ರಮಗಳು ನಿರಂತರವಾಗಿ ಮುಂದುವರಿಯಬೇಕು ಎಂದರು.
ಸಮಾಜದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಮತ್ತು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು ಅಭಿನಂದಿಸಲಾಯಿತು. ಸಮ್ಮೇಳನದ ಅಧ್ಯಕ್ಷ ದಂಪತಿಯನ್ನು ಗೌರವಿಸಲಾಯಿತು. ಪ್ರಭಾಕರ್ ತುಮರಿ ಮತ್ತು ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು. ರಂಜನಿ ವಸಂತ್ ವಂದಿಸಿದರು.ನಂತರ ಯಕ್ಷ ರಂಗಾಯಣ ಇವರಿಂದ ಕುಮಾರವ್ಯಾಸ ಭಾರತ ವಿರಾಟ ಪರ್ವದಿಂದ ಆಯ್ದ ಭಾಗ ‘ಆರೊಡನೆ ಕಾದುವೆನು’ ಕಾರ್ಯಕ್ರಮ ನಡೆಯಿತು.