ಲಕ್ಷ್ಮೇಶ್ವರ: ಸಹಕಾರಿ ರಂಗದಲ್ಲಿ ಪರಸ್ಪರ ನಂಬಿಕೆ, ವಿಶ್ವಾಸ ಮುಖ್ಯ. ಸಹಕಾರಿ ಸಂಘಗಳು ಸದೃಢವಾದಲ್ಲಿ ಗ್ರಾಮದ ಅಭಿವೃದ್ಧಿ ಸಾಧ್ಯ ಎಂದು ಕೆಸಿಸಿ ಬ್ಯಾಂಕಿನ ನಿರ್ದೇಶಕ ಗೋವಿಂದಗೌಡ ಪಾಟೀಲ ಹೇಳಿದರು. ಸಮೀಪದ ರಾಮಗೇರಿ ಗ್ರಾಮದ ಸಮುದಾಯ ಭವನದಲ್ಲಿ ಮಂಗಳವಾರ ಜರುಗಿದ ೭೧ನೇ ಸಹಕಾರಿ ಸಪ್ತಾಹ ಉದ್ಘಾಟಿಸಿ ಮಾತನಾಡಿದರು.
ಕೆಸಿಸಿ ಬ್ಯಾಂಕಿನ ಮಾಜಿ ನಿರ್ದೇಶಕ ಸುನೀಲ ಮಹಾಂತಶೆಟ್ಟರ್ ಮಾತನಾಡಿ, ಸಹಕಾರಿ ಸಂಘಗಳು ಸದೃಢವಾದಲ್ಲಿ ಗ್ರಾಮದ ಬೆಳವಣಿಗೆಗೆ ಸಾಧ್ಯ.ಸಹಕಾರಿ ಸಪ್ತಾಹ ಆಚರಣೆಗೆ ಮಾತ್ರ ಸೀಮಿತವಾಗಬಾರದು ಆಚಚರಣೆಗೆ ಬರಬೇಕು. ಜಿಲ್ಲೆಯಲ್ಲಿ ಸಹಕಾರ ಇನ್ನಷ್ಟು ಬಲಾಢ್ಯ ಆಗಬೇಕಾಗಿದೆ ಎಂದರು.
ಲಕ್ಷ್ಮೇಶ್ವರ ಎಪಿಎಂಸಿ ಮಾಜಿ ಅಧ್ಯಕ್ಷ ಬಸಣ್ಣ ಬೆಟಗೇರಿ ಮಾತನಾಡಿ, ಆರಂಭದಲ್ಲಿ ಉತ್ತಮ ರೀತಿಯಿಂದ ನಡೆಯುತ್ತಿದ್ದ ಸಹಕಾರ ಸಂಘಗಳು ಇತ್ತಿಚಿನ ದಿನಗಳಲ್ಲಿ ಸರಿಯಾಗಿ ನಡೆಯುತ್ತಿಲ್ಲ. ಸಹಕಾರಿ ಕ್ಷೇತ್ರ ಜಿಲ್ಲೆಯಲ್ಲಿ ಜನ್ಮ ತಾಳಿದ್ದರೂ ಕೂಡ ಹತ್ತು ಹಲವು ಕಾರಣಗಳಿಂದ ಮಹಿಳೆಯರು ಈ ಕ್ಷೇತ್ರಕ್ಕೆ ಬಂದಿರಲಿಲ್ಲ. ಆದರೆ ೧೯೮೪ರಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಅಸ್ತಿತ್ವಕ್ಕೆ ಬಂದ ನಂತರ ಮಹಿಳೆಯರು ಸಹಕಾರಿ ಕ್ಷೇತ್ರಕ್ಕೆ ಬರುವಂತಾಯಿತು. ಇದೀಗ ಸಹಕಾರಿ ಕ್ಷೇತ್ರ ವಿಸ್ತಿರಿಸಿದ್ದು ಅನೇಕ ಮಹಿಳಾ ಸಹಕಾರಿ ಸಂಘಗಳು ಚೆನ್ನಾಗಿ ಕೆಲಸ ಮಾಡುತ್ತಿವೆ ಎಂದು ತಿಳಿಸಿದರು.ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಮಹೇಂದ್ರ ಬೆಟಗೇರಿ ಅಧ್ಯಕ್ಷತೆ ವಹಿಸಿದ್ದರು.
ಚಂದ್ರಶೇಖರ ಕರಿಯಪ್ಪನವರು ಸ್ವಾಗತಿಸಿ, ನಿರೂಪಿಸಿದರು.