ಗುಣಮಟ್ಟದ ಶಿಕ್ಷಣ ಕೊಡಿಸುವುದೇ ನನ್ನ ಗುರಿ

KannadaprabhaNewsNetwork |  
Published : Oct 27, 2024, 02:35 AM IST
ಪಟ್ಟಣದ ಶ್ರೀ ವಾಲ್ಮೀಕಿ ಸಮುದಾಯ ಭವನದಲ್ಲಿ ಶಿಕ್ಷಣ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಕ್ವಿಜ್ ಲೀ ಟೀಚರ್ ಹ್ಯಾಪ್ ಬಿಡುಗಡೆ ಸಮಾರಂಭದ ಉದ್ಘಾಟನೆಯನ್ನು ನೆವೇರಿಸಿದ ಶಾಸಕ ಬಸವರಾಜ ವಿ.ಶಿವಗಂಗಾ) | Kannada Prabha

ಸಾರಾಂಶ

ಚನ್ನಗಿರಿಯ ವಾಲ್ಮೀಕಿ ಸಮುದಾಯ ಭವನದಲ್ಲಿ ನಡೆದ ಕ್ವಿಜ್ ಲೀ ಟೀಚರ್ ಹ್ಯಾಪ್ ಬಿಡುಗಡೆ ಸಮಾರಂಭದ ಉದ್ಘಾಟನೆಯನ್ನು ಶಾಸಕ ಬಸವರಾಜ ವಿ.ಶಿವಗಂಗಾ ನೆವೇರಿಸಿದರು.

ಕನ್ನಡಪ್ರಭ ವಾರ್ತೆ ಚನ್ನಗಿರಿ

ಸರ್ಕಾರಿ ಶಾಲೆಗಳಲ್ಲಿ ಓದುವಂತಹ ವಿದ್ಯಾರ್ಥಿಗಳು ಆರ್ಥಿಕವಾಗಿ ಹಿಂದುಳಿದ ಮಕ್ಕಳಾಗಿದ್ದು, ಅವರಿಗೆ ಗುಣಮಟ್ಟದ ಶಿಕ್ಷಣ ನೀಡಿ ಈ ದೇಶದ ಆಸ್ತಿಯನ್ನಾಗಿ ಮಾಡುವ ಉದ್ದೇಶ ನನ್ನದಾಗಿದೆ ಎಂದು ಶಾಸಕ ಬಸವರಾಜು.ವಿ.ಶಿವಗಂಗಾ ಹೇಳಿದರು.

ಶನಿವಾರ ಪಟ್ಟಣದ ವಾಲ್ಮೀಕಿ ಸಮುದಾಯ ಭವನದಲ್ಲಿ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಕ್ವಿಜ್ ಲೀ ಟೀಚರ್ ಆ್ಯಪ್‌ ಬಿಡುಗಡೆ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕಳೆದ ಎಸ್ಎಸ್ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ಚನ್ನಗಿರಿ ತಾಲೂಕು ಹಿಂದೆ ಬಿದಿದ್ದು, ಪ್ರಸ್ತುತ ವರ್ಷದಲ್ಲಿ ಫಲಿತಾಂಶವನ್ನು ಸುದಾರಿಸುವ ಉದ್ದೇಶದಿಂದ ಈ ಹ್ಯಾಪ್ ಅನ್ನು ಬಿಡುಗಡೆ ಮಾಡಲಾಗಿದೆ ಎಂದರು.

ಶಿಕ್ಷಕರು ಭೋಧನೆ ಮಾಡುವ ವಿಧಾನ, ಪ್ರಶ್ನೆ ಪತ್ರಿಕೆಗಳ ಮಾದರಿ, ಪ್ರಾಯೋಗಿಕ ಪರೀಕ್ಷೆ ಸೇರಿದಂತೆ ವಿದ್ಯಾರ್ಥಿಗಳಿಗೆ ಕಲಿಕೆಗೆ ಬೇಕಾದ ಎಲ್ಲಾ ರೀತಿಯ ಅಂಶಗಳನ್ನು ಒಳಗೊಂಡಿದ್ದು ಶಿಕ್ಷಕರು ಈ ಹ್ಯಾಪ್‌ನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳನ್ನು ತಯಾರು ಮಾಡಬೇಕು ಎಂದರು.

ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅಧ್ಯತೆ ನೀಡಿದ್ದು, ಕಳೆದ ವರ್ಷ ತಾಲೂಕಿನ 9 ಪ್ರೌಢಶಾಲೆಗಳಲ್ಲಿ ರಾತ್ರಿ ತರಗತಿಗಳನ್ನು ನಡೆಸಿದ್ದರ ಪ್ರತಿಫಲವಾಗಿ ರಾತ್ರಿ ಶಾಲೆಯನ್ನು ನಡೆಸಿದ ಎಲ್ಲಾ ಶಾಲೆಗಳಲ್ಲಿಯೂ ಉತ್ತಮ ಫಲಿತಾಂಶ ಬಂದಿದೆ. ಪ್ರಸ್ತುತ ಶೈಕ್ಷಣಿಕ ವರ್ಷದಿಂದ ತಾಲೂಕಿನ ಎಲ್ಲಾ ಪ್ರೌಢಶಾಲೆಗಳಲ್ಲಿ ರಾತ್ರಿ ಶಾಲೆ ಮತ್ತು ಕ್ವಿಜ್ ಲೀ ಹ್ಯಾಪ್ ಅನ್ನು ಬಳಸಿಕೊಂಡು ಉತ್ತಮ ಫಲಿತಾಂಶವನ್ನು ನೀಡಬೇಕಾದ ಜವಾಬ್ದಾರಿ ಪ್ರತಿಯೊಬ್ಬ ಶಿಕ್ಷಕರ ಮೇಲಿದೆ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ಪ ಮಾತನಾಡಿ, ಕ್ಷೇತ್ರದ ಶಾಸಕರು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆ ನೀಡುತ್ತಾ ಬಂದಿದ್ದು, ಸರ್ಕಾರಿ ಶಾಲೆಗಳಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳನ್ನು ದೊರಕಿಸುವ ಜೊತೆಗೆ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾಗುವ ವಿನೂತನ ಪ್ರಯೋಗಗಳನ್ನು ಮಾಡುತ್ತಾ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ ನೀಡುತ್ತಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಪುರಸಭೆಯ ಸದಸ್ಯ ಬಿ.ಆರ್.ಹಾಲೇಶ್, ಹ್ಯಾಪ್‌ ನ ಸಿಇಒ ದೀಪಕ್ ರಾಮಚಂದ್ರ, ಶ್ರೀಕಾಂತ್, ನಾಗರಾಜ್ ಸೇರಿದಂತೆ ತಾಲೂಕಿನ ಎಲ್ಲಾ ಪ್ರೌಢಶಾಲೆಗಳ ಶಿಕ್ಷಕರು ಹಾಜರಿದ್ದರು.

PREV

Recommended Stories

ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ