- ಹಿರೇಕೋಗಲೂರಲ್ಲಿ ಇಂದಿರಾ ಗಾಂಧಿ ವಸತಿ ಶಾಲೆಗೆ ಗುದ್ದಲಿ ಪೂಜೆ
ಚನ್ನಗಿರಿ: ಬಡವರ್ಗದ ವಿದ್ಯಾರ್ಥಿಗಳಿಗೆ ವಸತಿ ಶಾಲೆಗಳು ವರದಾನವಾಗಿವೆ. ವಸತಿ ಶಾಲೆಗಳು ಹೆಚ್ಚಾದಂತೆ ಶೈಕ್ಷಣಿಕ ಪ್ರಗತಿಯು ಹೆಚ್ಚಾಗುತ್ತಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದರು.
ತಾಲೂಕಿನ ಹಿರೇಕೋಗಲೂರು ಗ್ರಾಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ₹22 ಕೋಟಿ ವೆಚ್ಚದಲ್ಲಿ ಇಂದಿರಾ ಗಾಂಧಿ ವಸತಿ ಶಾಲೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.ಚನ್ನಗಿರಿ ಕ್ಷೇತ್ರದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ಕೊಡಿಸಬೇಕು ಎನ್ನುವುದು ನನ್ನ ಮುಖ್ಯ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಒಂದು ಕಾಮಗಾರಿಯ ಕೆಲಸ ಕಡಿಮೆಯಾದರೂ ಪರವಾಗಿಲ್ಲ, ಶಿಕ್ಷಣ ಕ್ಷೇತ್ರಕ್ಕೆ ಎಲ್ಲ ರೀತಿಯ ಸೌಲಭ್ಯಗಳನ್ನು ಕೊಡಿಸಲು ಬದ್ಧನಾಗಿದ್ದೇನೆ. ಬಡ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂದರು.
ಗ್ರಾಮದ ಸರ್ವೇ ನಂಬರ್ 46ರಲ್ಲಿ 9 ಎಕರೆ 20 ಗುಂಟೆ ಜಾಗದಲ್ಲಿ ಈ ವಸತಿ ಶಾಲೆ ನಿರ್ಮಾಣ ವಾಗುತ್ತಿದೆ. ಈ ಶಾಲೆಯಲ್ಲಿ 250 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುವಷ್ಠು ಅವಕಾಶ ವಿದೆ ಎಂದು ವಿವರಿಸಿದರು.
- - -
ಹಿರೇಕೋಗಲೂರಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ₹22 ಕೋಟಿ ವೆಚ್ಚದಲ್ಲಿ ಇಂದಿರಾ ಗಾಂಧಿ ವಸತಿ ಶಾಲೆ ನಿರ್ಮಾಣಕ್ಕೆ ಶಾಸಕ ಬಸವರಾಜು ವಿ.ಶಿವಗಂಗಾ ಗುದ್ದಲಿ ಪೂಜೆ ನೆರವೇರಿಸಿದರು.