ದೇವನಹಳ್ಳಿ: ನಾನು ನನ್ನ ರಾಜಕೀಯ ಜೀವನದಲ್ಲಿ ಕೇಂದ್ರ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ, ಸಚಿವನಾಗಲು ಅನೇಕ ನಾಯಕರ ಸಹಕಾರ, ಆಶೀರ್ವಾದ ನನ್ನ ಮೇಲಿದ್ದು, ಅವರನ್ನು ನಾನು ಪ್ರತಿದಿನ ಸ್ಮರಿಸತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಶ್ರೀ ನಿರ್ಮಲಾನಂದ ಸ್ವಾಮೀಜಿಯವರು ಸಮಾಜದಲ್ಲಿ ದೊಡ್ಡಹೆಸರು ಪಡೆದವರು. ಆದಿಚುಂಚನಗಿರಿ ಮಠದಲ್ಲಿ ಎಲ್ಲಾ ವರ್ಗದವರಿಗೂ ದಾಸೋಹ, ಶಿಕ್ಷಣ ನೀಡುತ್ತಿದ್ದಾರೆ. ೧.೭೫ ಲಕ್ಷ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ ಬದುಕು ಕಟ್ಟಿಕೊಳ್ಳಲು ನೆರವಾಗಿರುವ ಏಕೈಕ ಸಂಸ್ಥೆ ಆದಿಚುಂಚನಗಿರಿ ಮಠ. ಎಲ್ಲಾ ಸಮಾಜಗಳನ್ನು ಒಗ್ಗೂಡಿಸಿಕೊಂಡು ಬಸವಣ್ಣನವರ ಚಿಂತನೆಯನ್ನು ಪಾಲಿಸುತ್ತಿದ್ದಾರೆ ಎಂದು ಹೇಳಿದರು.
ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಅನೇಕ ಸಚಿವರು ಒಳಗೊಂಡಂತೆ ಒಳಮೀಸಲಾತಿ ನೀಡುವ ನಿರ್ಣಯ ಮಾಡಲಾಗಿದೆ. ಈ ನಿರ್ಣಯಕ್ಕೆ ಎಲ್ಲರು ಒಪ್ಪಿದ್ದಾರೆ. ಶೋಷಿತ ಸಮುದಾಯಗಳಿಗೆ ನ್ಯಾಯ ಕಲ್ಪಿಸಬೇಕೆಂಬುದೇ ಎಲ್ಲರು ತೀರ್ಮಾನ ಮಾಡಿದ್ದಾರೆ. ತಾಂತ್ರಿಕ ಸಮಸ್ಯೆಯಿಂದ ತಡವಾಗಿದೆ. ಸಂವಿಧಾನಬದ್ದವಾಗಿ ಸರ್ವೋಚ್ಚ ನ್ಯಾಯಾಲಯದ ತೀರ್ಪಿನಂತೆ ಆದಷ್ಟು ಬೇಗ ಒಳಮೀಸಲಾತಿ ಸಮಸ್ಯೆ ಬಗೆಹರಿಸುತ್ತೇವೆ. ನನ್ನ ಹುಟ್ಟುಹಬ್ಬಕ್ಕೆ ಆಶೀರ್ವಾದ ಮಾಡಲು ಬೇರೆ ಜಿಲ್ಲೆಗಳಿಂದ ರಾಜ್ಯಗಳಿಂದ ಅನೇಕ ಸ್ವಾಮೀಜಿಗಳು ಬಂದಿದ್ದು, ಅವರೆಲ್ಲರಿಗೂ ಕೋಟಿಕೋಟಿ ನಮನಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಆಕಾಶ್ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ನೆಚ್ಚಿನ ನಾಯಕನ ಮೇಲೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಹೂವಿನ ಹಾರ, ಉಡುಗೊರೆ ನೀಡಿ ಹೂವಿನ ಸುರಿಮಳೆ ಸುರಿಸಿ ಶುಭ ಹಾರೈಸಿದರು. ಕಾರ್ಯಕ್ರಮಕ್ಕೆ ಆಗಮಿಸಿದವರೆಲ್ಲರಿಗೂ ಊಟದ ವ್ಯವಸ್ಥೆ ಮತ್ತು ಮಜ್ಜಿಗೆ ವಿಶೇಷವಾಗಿ ಮಹಿಳೆಯರಿಗೆ ಬಾಗಿನ ನೀಡಲಾಯಿತು.
೦೭ ದೇವನಹಳ್ಳಿ ಚಿತ್ರಸುದ್ದಿ:೦೧
ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರ ಹುಟ್ಟುಹಬ್ಬದಲ್ಲಿ ಅನೇಕ ಸ್ವಾಮೀಜಿಗಳು, ಸಚಿವರು, ಶಾಸಕರು, ಜನಪ್ರತಿನಿಧಿಗಳು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.