ಎಐಸಿಸಿಗೆ ಶಿಫಾರಸು ಪಟ್ಟಿಯಲ್ಲಿ ನನ್ನ ಹೆಸರೇ ಮೊದಲು: ದಿನೇಶ್

KannadaprabhaNewsNetwork |  
Published : Feb 06, 2024, 01:32 AM IST
ಪೊಟೊ: 5ಎಸ್‌ಎಂಜಿಕೆಪಿ04ಶಿವಮೊಗ್ಗ ನಗರದಲ್ಲಿ ಸೋಮವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್‌ ಮುಖಂಡ ಎಸ್‌.ಪಿ.ದಿನೇಶ್‌ ಮಾತನಾಡಿದರು. | Kannada Prabha

ಸಾರಾಂಶ

ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಎಐಸಿಸಿಗೆ ಶಿಫಾರಸು ಮಾಡಿರುವ ಪಟ್ಟಿಯಲ್ಲಿ ನನ್ನ ಹೆಸರೇ ಮೊದಲು ಇದೆ. ನನಗೆ ಈಗಾಗಲೇ ಹೈಕಮಾಂಡ್ ಮೌಖಿಕವಾಗಿ ತಿಳಿಸಿ, ಕ್ಷೇತ್ರದಲ್ಲಿ ಓಡಾಡುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ, ನಾನು ಈಗಾಗಲೇ ಚುನಾವಣೆಯ ಕಣದಲ್ಲಿ ಇದ್ದೇನೆ. ಶೇ.100ರಷ್ಟು ಟಿಕೆಟ್ ನನಗೆ ಸಿಗುತ್ತದೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ ಎಸ್.ಪಿ. ದಿನೇಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ: ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಎಐಸಿಸಿಗೆ ಶಿಫಾರಸು ಮಾಡಿರುವ ಪಟ್ಟಿಯಲ್ಲಿ ನನ್ನ ಹೆಸರೇ ಮೊದಲು ಇದೆ ಎಂದು ಜಿಲ್ಲಾ ಕಾಂಗ್ರೆಸ್‌ ಎಸ್.ಪಿ. ದಿನೇಶ್ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನನಗೆ ಈಗಾಗಲೇ ಹೈಕಮಾಂಡ್ ಮೌಖಿಕವಾಗಿ ತಿಳಿಸಿ, ಕ್ಷೇತ್ರದಲ್ಲಿ ಓಡಾಡುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ, ನಾನು ಈಗಾಗಲೇ ಚುನಾವಣೆಯ ಕಣದಲ್ಲಿ ಇದ್ದೇನೆ. ಶೇ.100ರಷ್ಟು ಟಿಕೆಟ್ ನನಗೆ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಅತ್ಯಂತ ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಲಿದೆ. ಜಗದೀಶ್ ಶೆಟ್ಟರ್ ಕಾಂಗ್ರೆಸ್‌ನಿಂದ ಬಿಜೆಪಿಗೆ ಮರಳಿ ಹೋದ ನಂತರ ಬಿಜೆಪಿಯಿಂದ ಕಾಂಗ್ರೆಸ್‌ಗೆ ಬರುವವರ ಬಗ್ಗೆ ಅತ್ಯಂತ ಎಚ್ಚರಿಕೆಯ ನಡೆ ತೆಗೆದುಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ. ಇತ್ತೀಚೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಈ ಬಗ್ಗೆ ತಿಳಿಸಿದ್ದಾರೆ ಎಂದರು.

ಆಯನೂರುಗೆ ತಿರುಗೇಟು:

ಗುರುಬಲ ಮತ್ತು ಕುರುಬಲ ವಿಚಾರಕ್ಕೆ ಪ್ರತಿಕ್ರಿಯಿಸಿ ಕುರು ಏಳುವ ಜಾಗವನ್ನು ಆಯನೂರು ಮಂಜುನಾಥ್ ಅದು ಹೇಗೆ ಬಗ್ಗಿ ನೋಡಿದರು ನನಗೆ ಗೊತ್ತಿಲ್ಲ. ಕೆಪಿಸಿಸಿ ವಕ್ತಾರರಾಗಿ ಅವರು ಏನು ಮಾತನಾಡಬೇಕು ಎಂಬುವುದೇ ಗೊತ್ತಿಲ್ಲ. ಯೋಗೀಶ್ ಯಾರು ಎಂದು ಪ್ರಶ್ನೆ ಮಾಡುತ್ತಾರೆ. ಅವರಿಗೆ 60ರ ಅರಳುಮರಳು ಇರಬಹುದು ಎಂದು ತಿರುಗೇಟು ನೀಡಿದರು.

ತುಮಕೂರಿನ ಸಿದ್ಧಗಂಗಾ ಶ್ರೀಗಳಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ನೀಡಬೇಕು. ಈ ಸಂಬಂಧ ರಾಜ್ಯ ಸರ್ಕಾರ ಕೂಡ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಒತ್ತಾಯಿಸಿದರು.

ಪ್ರಮುಖರಾದ ವಿಶ್ವನಾಥ್ ಕಾಶಿ, ಯು.ಶಿವಾನಂದ್, ಯಮುನಾ ರಂಗೇಗೌಡ, ಕೆ.ರಂಗನಾಥ್, ಎಚ್‌.ಪಿ.ಗಿರೀಶ್, ರಾಜಶೇಖರ್, ಮಧುಸೂದನ್, ಚೇತನ್ ಮತ್ತಿತರರು ಇದ್ದರು.

- - - -5ಎಸ್‌ಎಂಜಿಕೆಪಿ04:

ಶಿವಮೊಗ್ಗ ನಗರದಲ್ಲಿ ಸೋಮವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್‌ ಮುಖಂಡ ಎಸ್‌.ಪಿ.ದಿನೇಶ್‌ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ