ವಿದ್ಯುತ್ ಇಲಾಖೆಯನ್ನು ಖಾಸಗೀಕರಣಕ್ಕೆ ನನ್ನ ವಿರೋಧ

KannadaprabhaNewsNetwork |  
Published : Jun 24, 2026, 01:30 AM IST
ವಿದ್ಯುತ್ ಇಲಾಖೆಯನ್ನು ಖಾಸಗೀಕರಣ ಗೊಳಿಸಲು ವಿರೋದವಿದೆ : ಕೆ. ಷಡಕ್ಷರಿ | Kannada Prabha

ಸಾರಾಂಶ

ವಿದ್ಯುತ್ ನಿಗಮಗಳನ್ನು ಖಾಸಗೀಕರಣಗೊಳಿಸುವ ಉದ್ದೇಶ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಯಾಗಿದೆ. ವಿದ್ಯುತ್ ಇಲಾಖೆಯನ್ನು ಯಾವುದೇ ಕಾರಣಕ್ಕೂ ಖಾಸಗೀಕರಣ ಗೊಳಿಸಲು ಅವಕಾಶ ನೀಡುವುದಿಲ್ಲ ಎಂದರು.

ತಿಪಟೂರು: ತಾಲೂಕಿನಾದ್ಯಂತ ೬೦ ಮೆಗಾ ವ್ಯಾಟ್ ವಿದ್ಯುತ್ತಿನ ಅವಶ್ಯಕತೆ ಇದ್ದು ಈಗಾಗಲೇ ಬಳುವನೇರಲು, ಹಾಲ್ಕುರಿಕೆ ರೇವಣಸಿದ್ದೇಶ್ವರ ಬೆಟ್ಟದ ಬಳಿ ಸೋಲಾರ್ ಪ್ಲಾಂಟ್ ನಿರ್ಮಾಣ ಮಾಡಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ, ನನ್ನ ಅಧಿಕಾರದ ಅವಧಿಯಲ್ಲಿ ತಾಲೂಕಿನಲ್ಲಿ ಹೆಚ್ಚು ವಿದ್ಯುತ್ ವಿತರಣೆಗೆ ಆದ್ಯತೆ ನೀಡಿದ್ದೇನೆ ಎಂದು ಶಾಸಕ ಕೆ. ಷಡಕ್ಷರಿ ಹೇಳಿದರು

ನಗರದ ಬಿ.ಎಚ್. ರಸ್ತೆ ಸೇರಿದಂತೆ ವಿವಿಧ ಹಲೆವೆಡೆ ೨೦ಕೋಟಿ ರು. ವೆಚ್ಚದ ಭೂಮಿಯ ಒಳಗೆ ಯುಜಿ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿಗೆ ಅರಳಿಕಟ್ಟೆ ಬಳಿ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ ಈ ಕ್ಷೇತ್ರದಲ್ಲಿ ಶಾಸಕನಾಗಿ ಆಯ್ಕೆಯಾದ ಸಂದರ್ಭದಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದೇನೆ. ನಗರದ ಕೆರೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿ ಸಾಗುತ್ತಿದ್ದು ಹೆಚ್ಚಿನ ನೀರು ಸಂಗ್ರಹಣೆ ಮೂಲ ಉದ್ದೇಶವಾಗಿದೆ. ನಗರದ ದೊಡ್ಡಪೇಟೆ ರಸ್ತೆ, ರೈಲ್ವೆ ಸ್ಟೇಷನ್ ರಸ್ತೆಯನ್ನು ಸಹ ೪೦ ಅಡಿ ಅಗಲಕ್ಕೆ ವಿಸ್ತರಣೆ ಮಾಡಲಾಗುತ್ತದೆ. ವಿದ್ಯುತ್ ನಿಗಮಗಳನ್ನು ಖಾಸಗೀಕರಣಗೊಳಿಸುವ ಉದ್ದೇಶ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಯಾಗಿದೆ. ವಿದ್ಯುತ್ ಇಲಾಖೆಯನ್ನು ಯಾವುದೇ ಕಾರಣಕ್ಕೂ ಖಾಸಗೀಕರಣ ಗೊಳಿಸಲು ಅವಕಾಶ ನೀಡುವುದಿಲ್ಲ ಎಂದರು.

ಇದೇ ಸಂದರ್ಭದಲ್ಲಿ ಬೆಸ್ಕಾಂ ಅಧೀಕ್ಷಕ ಎಂಜಿನಿಯರ್ ನರಸಿಂಹಮೂರ್ತಿ, ಸೋಮಶೇಖರ ಗೌಡ, ಬೆಸ್ಕಾಂ ಎಇ ಇ ಮನೋಹರ್, ಲೆಕ್ಕಾಧಿಕಾರಿ ಕುಮಾರಸ್ವಾಮಿ, ಸಂಘಟನಾ ಕಾರ್ಯದರ್ಶಿ ನರಸಿಂಹಮೂರ್ತಿ, ಇ ಒ ಸುದರ್ಶನ್, ನಗರಸಭೆ ಆಯುಕ್ತ ವಿಶ್ವೇಶ್ವರ ಬದರಗಡೆ, ಹರಿಹರಪ್ಪ, ಪ್ರದೀಪ್, ಇಲಾಖೆ ಅಧಿಕಾರಿಗಳು ಸಿಬ್ಬಂದಿ ವರ್ಗ ಲೈನ್‌ಮ್ಯಾನ್ ಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾವು ತಿನ್ನಲು ಅಡ್ಡಿಯಾದ ಕಾರು ಜಖಂ ಮಾಡಿದ ಕಾಡಾನೆ
ಪಿಯು ಉಪನ್ಯಾಸಕರು ಪ್ರೌಢಶಾಲೆಗೆ ಬೋಧಿಸಲು ತಿದ್ದುಪಡಿ ವಿರೋಧಿಸಿ ಉಪನ್ಯಾಸಕರ ಪ್ರತಿಭಟನೆ