ಬಾಗೇಪಲ್ಲಿ: ಶುದ್ಧ ಕುಡಿಯುವ ನೀರು, ರಸ್ತೆ, ಚರಂಡಿ, ಬೀದಿ ದೀಪ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳನ್ನು ಜನತೆಗೆ ಒದಗಿಸುವುದೇ ನನ್ನ ಮುಖ್ಯ ಗುರಿ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು.
ಉಳಿದ ರಸ್ತೆಗಳ ಅಭಿವೃದ್ಧಿ ಕೆಲಸವನ್ನು ಅತೀ ಶೀಘ್ರದಲ್ಲಿಯೇ ಪೂರ್ಣಗೊಳಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಪಟ್ಟಣದಲ್ಲಿ ನಿವೇಶನ ಮತ್ತು ಸೂರು ಇಲ್ಲದೆ ಹಲವಾರು ವರ್ಷಗಳಿಂದ ಜೀವನ ನಡೆಸುತ್ತಿರುವ ಬಡವರಿಗೆ ನಿವೇಶನ ಮತ್ತು ಮನೆ ಒದಗಿಸುವುದು ನನ್ನ ಕರ್ತವ್ಯವಾಗಿದೆ. ಈಗಾಗಲೇ 1 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಶೀಘ್ರದಲ್ಲಿಯೇ ಜಮೀನು ಗುರುತಿಸಿ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವುದಾಗಿ ತಿಳಿಸಿದರು.
ಪುರಸಭೆ ಸದಸ್ಯರಾದ ಶ್ರೀನಿವಾಸರೆಡ್ಡಿ, ಎ.ನಂಜುಂಡಪ್ಪ, ಶಭಾನಾ, ಪುರಸಭೆ ಮಾಜಿ ಸದಸ್ಯರಾದ ಮಹಮ್ಮದ್ ನೂರುಲ್ಲಾ, ಮಹಮ್ಮದ್ ಆರೀಫ್, ಜಬೀವುಲ್ಲಾ, ಘಂಟಂವಾರಿಪಲ್ಲಿ ಗ್ರಾಪಂ ಅಧ್ಯಕ್ಷ ನವೀನ್ ಕುಮಾರ್ ಸೇರಿದಂತೆ ಮುಖಂಡರು ಇದ್ದರು.