ಕನ್ನಡ ಪ್ರಭ ವಾರ್ತೆ ಮದ್ದೂರು
ಪಟ್ಟಣದ ಮಿನಿ ವಿಧಾನಸೌಧದ ಬಳಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಪರ ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಜಿ.ಮಾದೇಗೌಡ ಹಾಗೂ ಪಕ್ಷದ ಮುಖಂಡರೊಂದಿಗೆ ಮತಯಾಚನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.
ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಪ್ರಭಾವಿತರಾದ ಕ್ಷೇತ್ರದ ಮತದಾರರು ಚುನಾವಣೆಯಲ್ಲಿ ನನ್ನನ್ನು ಸಂಪೂರ್ಣ ಬೆಂಬಲಿಸಿದ್ದಾರೆ. ಹೀಗಾಗಿ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಜಿಲ್ಲೆಯ ಜನರ ವಿಶ್ವಾಸ ಮತ್ತು ನಂಬಿಕೆಗೆ ಲೋಪವಾಗದಂತೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಶಾಸಕರ ಸಹಕಾರದೊಂದಿಗೆ ಮುಂದಿನ ದಿನಗಳಲ್ಲಿ ಮಂಡ್ಯ ಜಿಲ್ಲೆಯನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವ ಗುರಿ ಹೊಂದಿದ್ದೇನೆ ಎಂದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಭಾರತಿ ನಗರ ಬ್ಲಾಕ್ ಅಧ್ಯಕ್ಷ ಶಿವಲಿಂಗೇಗೌಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಸಿ.ಜೋಗೀಗೌಡ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎ.ಎಸ್.ರಾಮಕೃಷ್ಣ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ನಾಗೇಗೌಡ, ಪುರಸಭೆ ಮಾಜಿ ಅಧ್ಯಕ್ಷ ಎಂ.ಸಿ. ಬಸವರಾಜು, ಸದಸ್ಯ ಸಚಿನ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಇದ್ದರು.
ಒಟ್ಟು ಮತದಾರರು ಚಲಾವಣೆಗೊಂಡ ಮತ ಶೇಕಡಾವಾರು ಮತದಾನತಾಲೂಕು ಗಂಡು ಹೆಣ್ಣು ಒಟ್ಟು ಗಂಡು ಹೆಣ್ಣು ಒಟ್ಟು ಗಂಡು ಹೆಣ್ಣು ಒಟ್ಟು
ಪಾಂಡವಪುರ ೨೬೦ ೧೮೬ ೪೪೬ ೨೫೧ ೧೬೪ ೪೧೫ ೯೬.೫೪ ೮೮.೧೭ ೯೩.೦೫ಮಂಡ್ಯ (ತಾ.ಕಚೇರಿ) ೩೧೧ ೩೧೯ ೬೩೦ ೩೦೬ ೨೮೧ ೫೮೭ ೯೮.೩೯ ೮೮.೦೯ ೯೩.೧೭
ಮದ್ದೂರು ೫೫೪ ೪೧೩ ೯೬೭ ೫೩೨ ೩೭೦ ೯೦೨ ೯೬.೦೩ ೮೯.೫೯ ೯೩.೨೮ಶ್ರೀರಂಗಪಟ್ಟಣ ೨೦೭ ೨೨೪ ೪೩೧ ೧೭೯ ೧೭೬ ೩೫೫ ೮೬.೪೭ ೭೮.೫೭ ೮೨.೩೭