ಕ್ಷೇತ್ರ, ದೇವಸ್ಥಾನಗಳ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ

KannadaprabhaNewsNetwork |  
Published : Sep 04, 2024, 01:50 AM ISTUpdated : Sep 04, 2024, 01:51 AM IST
10 | Kannada Prabha

ಸಾರಾಂಶ

ಹಿಂದೆಯೂ ದೇವಸ್ಥಾ ನಿರ್ವಹಣಾ ಸಮಿತಿ ಇತ್ತು. ಆದರೆ ಪ್ರಾಧಿಕಾರ ರಚನೆಯಿಂದಾಗಿ ಅಭಿವೃದ್ಧಿಗೆ ಹೆಚ್ಚಿನ ಅಧಿಕಾರ ಮತ್ತು ಅವಕಾಶ ಒದಗಿದಂತಾಗಿದೆ

ಕನ್ನಡಪ್ರಭ ವಾರ್ತೆ ಮೈಸೂರುಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ಮಂಗಶವಾರ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲೇ ನಡೆಸಿ ಮಾತನಾಡಿ, ಹಿಂದೆಯೂ ದೇವಸ್ಥಾ ನಿರ್ವಹಣಾ ಸಮಿತಿ ಇತ್ತು. ಆದರೆ ಪ್ರಾಧಿಕಾರ ರಚನೆಯಿಂದಾಗಿ ಅಭಿವೃದ್ಧಿಗೆ ಹೆಚ್ಚಿನ ಅಧಿಕಾರ ಮತ್ತು ಅವಕಾಶ ಒದಗಿದಂತಾಗಿದೆ ಎಂದರು. ಇಲ್ಲಿಗೆ ಬರುವ ಭಕ್ತರಿಗೆ ಹೆಚ್ಚಿನ ಮತ್ತು ಉನ್ನತ ಮಟ್ಟದ ಆರೋಗ್ಯಕರ ಸವಲತ್ತು ಹಾಗೂ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಗುರಿಯಾಗಿದೆ. ಶ್ರೀ ಕ್ಷೇತ್ರ ಹಾಗೂ ದೇವಸ್ಥಾನದ ಸಂಪ್ರದಾಯ ಮತ್ತು ಚರಿತ್ರೆ, ಘನತೆಯನ್ನು ಕಾಪಾಡುವ ಜೊತೆಗೆ ಉನ್ನತೀಕರಿಸಬೇಕು ಎಂದರು. ಪ್ರಾಧಿಕಾರ ವ್ಯವಸ್ಥಿತವಾಗಿ ನಡೆಯಬೇಕು. ಕಾಲ ಕಾಲಕ್ಕೆ ಸಭೆಗಳು ನಡೆದು ಹೆಚ್ಚಿನ ಶ್ರಮ ಶುಚಿತ್ವಕ್ಕೆ ಹಾಕಬೇಕು. ಕಸವನ್ನು ಆಗ್ಗಿಂದಾಗೇ ತೆರವುಗೊಳಿಸಬೇಕು. ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ. ವಾಹನ ನಿಲುಗಡೆಗೆ ಇನ್ನಷ್ಟು ಸುಸಜ್ಜಿತ ವ್ಯವಸ್ಥೆ ಕಲ್ಪಿಸಬೇಕಿದೆ. ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಹಣಕ್ಕೆ ತೊಂದರೆ ಇಲ್ಲ. ಕೇಳಿದಷ್ಟು ಹಣವನ್ನು ಕೇಳಿದಾಗಲೆಲ್ಲಾ ಒದಗಿಸಲಾಗುತ್ತಿದ್ದರೂ ಕೆಲಸಗಳು ಮಾತ್ರ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಇದನ್ನು ನಾನು ಸಹಿಸಲ್ಲ. ಸಮಯಕ್ಕೆ ಸರಿಯಾಗಿ ಕೆಲಸ ಮಾಡದಿದ್ದರೆ ನಾನು ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಎಚ್ಚರಿಸಿದರು.ತಾಯಿ, ಶಕ್ತಿ ದೇವತೆ ಚಾಮುಂಡಿ ದೇವಿ ಬಗ್ಗೆ ಕೋಟ್ಯಂತರ ಮಂದಿಗೆ ಅಪಾರ ಭಕ್ತಿ, ಶ್ರದ್ಧೆ, ನಂಬಿಕೆ ಇದೆ. ದೇಶದ ಮೂಲೆ ಮೂಲೆಗಳಿಂದ ಭಕ್ತರು ಬರುತ್ತಾರೆ. ಇವರೆಲ್ಲರಿಗೂ ಅಗತ್ಯ ಸವಲತ್ತುಗಳನ್ನು ಒದಗಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು. ಕೊಪ್ಪಳ ಹುಲಿಗಮ್ಮ ದೇವಸ್ಥಾನ ಮತ್ತು ಘಾಟಿ ಸುಬ್ರಮಣ್ಯ ದೇವಸ್ಥಾನಗಳ ಹೆಚ್ಚಿನ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಬಗ್ಗೆಯೂ ಹೆಚ್ಚಿನ ಬೇಡಿಕೆ ಇದೆ. ಈ ಬಗ್ಗೆಯೂ ಮುಂದುವರೆಯುವ ಅಗತ್ಯವಿದೆ ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಪಶು ಸಂಗೋಪನಾ ಹಾಗೂ ರೇಷ್ಮೆ ಸಚಿವ ಕೆ.ವೆಂಕಟೇಶ್, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಜಿ.ಟಿ. ದೇವೇಗೌಡ, ಯತೀಂದ್ರ ಸಿದ್ದರಾಮಯ್ಯ, ಡಿ. ರವಿಶಂಕರ್, ಡಾ.ಡಿ.ತಿಮ್ಮಯ್ಯ, ಕೆ. ಹರೀಶ್ ಗೌಡ, ಕೆ. ವಿವೇಕಾನಂದ, ಕಂದಾಯ ಇಲಾಖೆ ಕಾರ್ಯದರ್ಶಿ ರಾಜಕ್ಕುಮಾರ್ ಕಟಾರಿಯಾ, ಡಿಐಜಿ ಎನ್. ಬೋರಲಿಂಗಯ್ಯ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ. ಜಿಪಂ ಸಿಇಒ ಕೆ.ಎಂ. ಗಾಯತ್ರಿ, ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ, ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ಮೊದಲಾದವರು ಇದ್ದರು.

PREV

Recommended Stories

ಗ್ರಾಮೀಣ ಭಜನಾ ಮಂಡಳಿಗಳಲ್ಲಿ ತತ್ವಪದಗಳು ಜೀವಂತ
ರಾಮದುರ್ಗ ಧನಲಕ್ಷ್ಮೀ ಶುಗರ್ ಚುನಾವಣೆ: ಸತತ 4ನೇ ಬಾರಿಗೆ ಯಾದವಾಡರ ನೇತೃತ್ವಕ್ಕೆ ಜಯ