ಕನ್ನಡಪ್ರಭ ವಾರ್ತೆ ಮೈಸೂರು
ಮೈಸೂರು ತಾಲೂಕಿನ ಗುಜ್ಜೇಗೌಡನಪುರ ಗ್ರಾಮದಲ್ಲಿನ ವೈದ್ಯಕೀಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಎಂಡಿಎಂಎ ಮತ್ತು ಗಾಂಜಾವನ್ನು ನಾಶಪಡಿಸಲಾಯಿತು.
ನಗರದಲ್ಲಿ ಮಾದಕ ವಸ್ತು ವಿರುದ್ಧ ಕಾರ್ಯಾಚರಣೆ ನಡೆಸಿದ್ದ ಪೊಲೀಸರು, 23 ಪ್ರಕರಣಗಳನ್ನು ದಾಖಲಿಸಿದ್ದು. ಈ ವೇಳೆ 43 ಕೆ.ಜಿ. 308 ಗ್ರಾಂ ತೂಕದ ಗಾಂಜಾ ಮತ್ತು 3 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದರು.ಮಾದಕ ವಸ್ತು ವಿಲೇವಾರಿ ಸಮಿತಿಯ ಅಧ್ಯಕ್ಷರಾದ ಡಿಸಿಪಿ ಕೆ.ಎಸ್. ಸುಂದರ್ ರಾಜ್, ಸದಸ್ಯ ಕಾರ್ಯದರ್ಶಿ ಮಹಮ್ಮದ್ ಶರೀಫ್ ರಾವೂತರ್, ಇನ್ಸ್ ಪೆಕ್ಟರ್ ಮುಸ್ತಾಕ್ ಪಾಷ ಹಾಗೂ ಸಿಬ್ಬಂದಿ ಇದ್ದರು.