ಜಿಲ್ಲಾ ಯೋಜನಾ ವರದಿ ಡಿ.15ರ ಒಳಗೆ ಸಿದ್ಧಪಡಿಸಿ

KannadaprabhaNewsNetwork |  
Published : Nov 28, 2025, 01:06 AM IST
3 | Kannada Prabha

ಸಾರಾಂಶ

ಜಿಲ್ಲಾ ಮಟ್ಟದಲ್ಲಿ ಯೋಜನೆ ತಯಾರಿಸುವಾಗ ಕೂಲಂಕುಷವಾಗಿ ಪರಿಶೀಲಿಸಿ, ಜಿಲ್ಲೆಯಲ್ಲಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಹೆಚ್ಚಿನ ಆದ್ಯತೆ ನೀಡಿ.

ಕನ್ನಡಪ್ರಭ ವಾರ್ತೆ ಮೈಸೂರು

ಜಿಲ್ಲಾ ಯೋಜನಾ ವರದಿಗಳನ್ನು ಆಯವ್ಯಯ ಸಿದ್ಧಪಡಿಸುವ ಮೊದಲು ಸಮಿತಿಗೆ ಸಲ್ಲಿಸಬೇಕು. ಮೈಸೂರು ವಿಭಾಗದ ಎಲ್ಲಾ ಜಿಲ್ಲೆಗಳು ವರದಿಯನ್ನು ಡಿ.15ರ ಒಳಗೆ ಸಲ್ಲಿಸುವಂತೆ ಕರ್ನಾಟಕ ರಾಜ್ಯ ನೀತಿ ಮತ್ತು ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ್ ತಿಳಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ನಡೆದ ಮೈಸೂರು ವಿಭಾಗದ 8 ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ‌ ಮಾತನಾಡಿದ ಅವರು, ವಿಕೇಂದ್ರೀಕರಣ ವ್ಯವಸ್ಥೆಯನ್ನು ಸೈದ್ಧಾಂತಿಕವಾಗಿ ನಾವು ಒಪ್ಪಿಕೊಂಡಿದ್ದರು, ಜಿಲ್ಲಾ ಯೋಜನಾ ವರದಿ ತಯಾರಿಕೆ ಸಮಿತಿ‌ ಸಭೆಗಳು ನಿಗದಿತವಾಗಿ ನಡೆಯಬೇಕು. ವರದಿಯಲ್ಲಿ ಸುಸ್ಥಿರ ಅಭಿವೃದ್ಧಿ, ಜಿಡಿಪಿ, ಮಾನವ ಅಭಿವೃದ್ಧಿ ಸೂಚ್ಯಂಕಕ್ಕೆ ಆದ್ಯತೆ ನೀಡಬೇಕು ಎಂದರು.

ಜಿಲ್ಲಾ ಮಟ್ಟದಲ್ಲಿ ಯೋಜನೆ ತಯಾರಿಸುವಾಗ ಕೂಲಂಕುಷವಾಗಿ ಪರಿಶೀಲಿಸಿ, ಜಿಲ್ಲೆಯಲ್ಲಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಹೆಚ್ಚಿನ ಆದ್ಯತೆ ನೀಡಿ. ಯಾವುದೇ ಯೋಜನೆಗಳು ಒವರ್ ಲ್ಯಾಪ್ ಆಗದಂತೆ ನೋಡಿಕೊಳ್ಳಿ. ಮಾನವ ಅಭಿವೃದ್ಧಿ ಸೂಚ್ಯಂಕ ಹೆಚ್ಚಳ ಮಾಡಲು ಹಾಗೂ ಲಭ್ಯವಿರುವ ಅನುದಾನದ ಆಧಾರದ ಮೇಲೆ ಯೋಜನೆ ರೂಪಿಸಿ ಅನುಷ್ಠಾನದ ನಂತರ ಉಂಟಾಗುವ ಉತ್ತಮ ಬೆಳವಣಿಗೆಯ ಬಗ್ಗೆ ಅರ್ಥ ಮಾಡಿಕೊಂಡು ಯೋಜನೆ ರೂಪಿಸಬೇಕು ಎಂದು ಅವರು ಹೇಳಿದರು.

ಮೈಸೂರು ಜಿಪಂ ಸಿಇಒ ಎಸ್. ಯುಕೇಶ್ ಕುಮಾರ್ ಮಾತನಾಡಿ, ಜಿಲ್ಲೆಯ 9 ತಾಲೂಕುಗಳಲ್ಲಿ ಆಯಾ ತಾಲೂಕು ‌ಶಾಸಕರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಯೋಜನಾ ಸಮಿತಿ ಸಭೆಯನ್ನು ನಡೆಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಿ ವರದಿ ನೀಡಲಾಗುವುದು ಎಂದರು.

ಮಂಡ್ಯ ಜಿಪಂ ಸಿಇಒ ಕೆ.ಆರ್. ನಂದಿನಿ ಮಾತನಾಡಿ, ಸುಸ್ಥಿರ ಅಭಿವೃದ್ಧಿಯಲ್ಲಿ ಮುಖ್ಯವಾಗಿ ಶಿಕ್ಷಣ, ಕೃಷಿ, ಪೌಷ್ಟಿಕ ಆಹಾರ ಸೇರಿದಂತೆ ಹಲವಾರು ವಿಷಯವನ್ನು ಮುಖ್ಯವಾಗಿ ಇರಿಸಿಕೊಂಡು ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಯೋಜನೆ ಇಲಾಖೆ ಹಿರಿಯ ನಿರ್ದೇಶಕ ಎಸ್. ಬಸವರಾಜು ಮಾತನಾಡಿ, ಮಾನವ ಅಭಿವೃದ್ಧಿ, ಸುಸ್ಥಿರ ಅಭಿವೃದ್ಧಿಯನ್ನು ಹೇಗೆ ಸಾಧಿಸಬೇಕು, ಯಾವ ಯಾವ ಜಿಲ್ಲೆಗಳು ಹೆಚ್ಚು ಪ್ರಗತಿ ಸಾಧಿಸಿದೆ. ಯಾವ ಕ್ಷೇತ್ರ ಹಿಂದೆ ಉಳಿದೆ. ಹೇಗೆ ಅಭಿವೃದ್ಧಿ ಸಾಧಿಸಬೇಕು. ಯೋಜನೆಗಳನ್ನು ಯಾವ ರೀತಿಯಲ್ಲಿ ಅಳವಡಿಸಿಕೊಂಡು ಪ್ರಗತಿ ಸಾಧಿಸಬೇಕು ಎಂಬುದರ ಬಗ್ಗೆ ವಿಷಯ ಮಂಡಿಸಿದರು.

ಸರ್ಕಾರದ ಕಾರ್ಯದರ್ಶಿ ರಮಣ್ ದೀಪ್ ಚೌದರಿ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಮಂಗಳೂರು ಜಿಪಂ ಸಿಇಒಗಳು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುಸ್ತಕಗಳಲ್ಲಿ ಬೆಂಗಳೂರು ನಗರಕ್ಕೆ ಬರೋಬ್ಬರಿ ₹38 ಕೋಟಿ ಡ್ರಗ್ಸ್‌ ಸಾಗಾಟ
ಸರ್ಕಾರದಿಂದ ಗೋಬ್ಯಾಕ್‌ ಗೌರ್ನರ್‌ ಅಭಿಯಾನ ಚಿಂತನೆ