ಕಬಕ ಪುತ್ತೂರು ರೈಲು ನಿಲ್ದಾಣಕ್ಕೆ ಮೈಸೂರು ವಿಭಾಗೀಯ ಪ್ರಬಂಧಕ ಭೇಟಿ

KannadaprabhaNewsNetwork |  
Published : Aug 02, 2025, 12:15 AM IST
ಫೋಟೋ: ೩೧ಪಿಟಿಆರ್-ರೈಲ್ವೇ ರೈಲ್ವೇ ಇಲಾಖೆ ಮೈಸೂರು ವಿಭಾಗದ ವಿಭಾಗೀಯ ಪ್ರಬಂಧಕ ಮುದಿತ್ ಮಿತ್ತಲ್ ಅವರು ಕಬಕ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. | Kannada Prabha

ಸಾರಾಂಶ

ಭಾರತೀಯ ರೈಲ್ವೇ ಇಲಾಖೆಯ ಮೈಸೂರು ವಿಭಾಗದ ವಿಭಾಗೀಯ ಪ್ರಬಂಧಕ ಮುದಿತ್ ಮಿತ್ತಲ್ ಗುರುವಾರ ಕಬಕ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ ಇಲ್ಲಿನ ಮೂಲ ಸೌಕರ್ಯಗಳ ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಪುತ್ತೂರು

ರೈಲ್ವೇ ಇಲಾಖೆಯ ಮೈಸೂರು ವಿಭಾಗದ ವಿಭಾಗೀಯ ಪ್ರಬಂಧಕ ಮುದಿತ್ ಮಿತ್ತಲ್ ಗುರುವಾರ ಕಬಕ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ ಇಲ್ಲಿನ ಮೂಲ ಸೌಕರ್ಯಗಳ ಪರಿಶೀಲನೆ ನಡೆಸಿದರು. ಈ ಸಂದರ್ಭ ಸ್ಥಳೀಯರು ವಿವಿಧ ಬೇಡಿಕೆಗಳ ಬಗ್ಗೆ ಅವರಿಗೆ ಮನವಿ ಸಲ್ಲಿಕೆ ಮಾಡಿದರು. ಬಂಟ್ವಾಳ, ನೆಟ್ಟಣದಲ್ಲಿ ಅಮೃತ್ ಭಾರತ್ ಯೋಜನೆಯಡಿಯ ಕಾಮಗಾರಿ ಪ್ರಗತಿ ಪರಿಶೀಲನೆ, ಘಾಟ್ ಮಾರ್ಗದಲ್ಲಿನ ಸ್ಥಿತಿಗತಿ, ಹಳಿ ವಿದ್ಯುದ್ದೀಕರಣ ಕಾಮಗಾರಿ ಪರಿಶೀಲನೆ ನಡೆಸಲು ಆಗಮಿಸಿದ್ದ ಅವರು ಈ ಸಂದರ್ಭದಲ್ಲಿ ನಿಲ್ದಾಣಕ್ಕೆ ಭೇಟಿ ನೀಡಿದರು. ಇಲ್ಲಿನ ಪಾರ್ಕಿಂಗ್ ಸಮಸ್ಯೆ ಸಹಿತ ವಿವಿಧ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲಾಯಿತು. ಭದ್ರತೆ ದೃಷ್ಟಿಯಿಂದ ಸಿಸಿಕೆಮಾರ ಅಳವಡಿಕೆ ಬಗ್ಗೆಯೂ ಗಮನ ಸೆಳೆಯಲಾಯಿತು.ಪುತ್ತೂರು ಹಾಗೂ ಕಾಣಿಯೂರು ಭಾಗದ ರೈಲು ಬಳಕೆದಾರರ ನಿಯೋಗ ಹಾಗು ಪುತ್ತೂರು-ಸುಬ್ರಹ್ಮಣ್ಯ ರೈಲು ಬಳಕೆದಾರರ ಸಮಿತಿಯಿಂದ ಕಾಣಿಯೂರಿನ ಏಲಡ್ಕದಲ್ಲಿ ಹೊಸ ರೈಲು ನಿಲ್ದಾಣದ ನಿರ್ಮಾಣ, ಕಾಣಿಯೂರು ನಿಲ್ದಾಣದಲ್ಲಿ ಮಂಗಳೂರು-ಬೆಂಗಳೂರು ಎಕ್ಸ್ಪ್ರೆಸ್ ರೈಲು ನಿಲುಗಡೆ ಹಾಗೂ ಪಾದಚಾರಿ ಮೇಲ್ಸೇತುವೆ ನಿರ್ಮಾಣ, ನವಯುಗ ಎಕ್ಸ್‌ಪ್ರೆಸ್‌ ರೈಲನ್ನು ಹಾಸನ-ಮೀರಜ್-ಪುಣೆ ಮಾರ್ಗದ ಮೂಲಕ ಪುನರಾರಂಭ, ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲಿನ ಸಮಯವನ್ನು ಸಂಜೆ ೫:೪೫ರಿಂದ ೬ ಗಂಟೆಗೆ ಬದಲಾಯಿಸುವುದು, ಮಡಗಾಂವ್-ಮಂಗಳೂರು ಮೆಮು ಎಕ್ಸ್‌ಪ್ರೆಸ್‌ ರೈಲನ್ನು ಸುಬ್ರಹ್ಮಣ್ಯ ರೋಡ್ ತನಕ ವಿಸ್ತರಣೆ, ಎಂ.ಜಿ.ಆರ್ ಚೆನ್ನೈ ಸೆಂಟ್ರಲ್-ಮಂಗಳೂರು ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್‌ ರೈಲನ್ನು ಸುಬ್ರಹ್ಮಣ್ಯ ರೋಡ್ ತನಕ ವಿಸ್ತರಣೆ, ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್‌ ರೈಲಿನ ವಿಳಂಬ ಓಡಾಟದ ಸಮಸ್ಯೆ ಪರಿಹಾರಕ್ಕೆ ಕ್ರಮ, ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್‌ ರೈಲಿನ ವಿಳಂಬ ಓಡಾಟದ ಸಮಸ್ಯೆ ನಿವಾರಣೆ, ಕಬಕ ಪುತ್ತೂರು ನಿಲ್ದಾಣದಲ್ಲಿ ಶೆಡ್ ನಿರ್ಮಾಣ, ಪಾರ್ಕಿಂಗ್ ವ್ಯವಸ್ಥೆ, ಸಿಸಿಟಿವಿ ಅಳವಡಿಕೆ, ಸುರಕ್ಷತಾ ಕ್ರಮಗಳ ಜಾರಿ, ನೇರಳಕಟ್ಟೆ ನಿಲ್ದಾಣದಲ್ಲಿ ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ನಿಲುಗಡೆಗೆ ಮನವಿ ಸಲ್ಲಿಕೆ ಮಾಡಲಾಯಿತು. ಮನವಿ ಸ್ವೀಕರಿಸಿದ ಮುದಿತ್ ಮಿತ್ತಲ್ ಅವರು ಸ್ಪಂದಿಸುವ ಭರವಸೆ ನೀಡಿದರು.ಸೀನಿಯರ್ ಕಮರ್ಷಿಯಲ್ ಡಿವಿಜನ್ ಮ್ಯಾನೇಜರ್ ಲೋಹಿತೇಶ್ವರ, ಚೀಫ್ ಪ್ರಾಜೆಕ್ಟ್ ಮ್ಯಾನೇಜರ್ ಆನಂದ್ ಭಾರತೀ, ರೈಲ್ವೇ ಹೋರಾಟಗಾರರಾದ ಶಂಕರ್ ಕಲ್ಮಡ್ಕ, ಸುರೇಶ್ ಕಾಣಿಯೂರು, ಬೆಳಂದೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಯಂತ ಅಬೀರ, ಸುದೇಶ್, ಶ್ರೀಕರ,ಪವನ್ ಹಾರಾಡಿ, ಕೌಶಿಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ