ಕೈಗಾರಿಕಾ ಕ್ರಾಂತಿಗೆ ಮುನ್ನುಡಿ ಬರೆದ ರಾಜೀವ್ ಗಾಂಧಿ

KannadaprabhaNewsNetwork | Published : May 22, 2025 12:58 AM
ನಮ್ಮ ಸಂಘಟನೆಯು ಕಾರ್ಮಿಕರ ಹಕ್ಕುಗಳ ಹೋರಾಟದ ಪರವಾಗಿ ರಚನೆಗೊಂಡಿದೆ. ಕಾರ್ಮಿಕ ವಿಭಾಗ ತುಂಬ ಗಟ್ಟಿಯಾಗಿದೆ.
Follow Us

ಕನ್ನಡಪ್ರಭ ವಾರ್ತೆ ಮೈಸೂರುನಗರ ಹಾಗೂ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 34ನೇ ಪುಣ್ಯಸ್ಮರಣೆ ಕಾರ್ಯಕ್ರಮ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಐ.ಎನ್.ಟಿ.ಯು.ಸಿ ವಿಭಾಗದ ವಿಶೇಷ ಸಭೆ ಆಯೋಜಿಸಲಾಗಿತ್ತು.ಕೆಪಿಸಿಸಿ ಐ.ಎನ್.ಟಿ.ಯು.ಸಿ ರಾಜ್ಯ ಸಮಿತಿ ಅಧ್ಯಕ್ಷ ಲಕ್ಷ್ಮಿವೆಂಕಟೇಶ್ ಮಾತನಾಡಿ, ದೇಶದಲ್ಲಿ ಕೈಗಾರಿಕಾ ಕ್ರಾಂತಿಗೆ ಮುನ್ನುಡಿ ಬರೆದು, ದೇಶದ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಗೆ ಹಲವು ಹಳೆ ಕಾರ್ಮಿಕ ಕಾಯಿದೆಗೆ ತಿದ್ದುಪಡಿ ತಂದ ಹೆಗ್ಗಳಿಕೆ ಇತಿಹಾಸ ರಾಜೀವ್ ಗಾಂಧಿ ಅವರಿಗೆ ಸಲ್ಲುತ್ತದೆ ಎಂದರು.ಈ ಕಾರ್ಯಕ್ರಮಕ್ಕೆ ರಾಷ್ಟ್ರಾಧ್ಯಕ್ಷ ಸಂಜೀವ್ ರೆಡ್ಡಿ ಅವರು ಬರಬೇಕಾಗಿತ್ತು. ಆದರೆ ಅನಾರೋಗ್ಯದ ಕಾರಣ ಅವರು ಬರಲಾಗಲಿಲ್ಲ. ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯಲ್ಲಿ ಸುಮಾರು 12,000 ಕೋಟಿ ಹಣ ಇದೆ. ಇದನ್ನು ನಮ್ಮ ಸರ್ಕಾರ ಸಮರ್ಥವಾಗಿ ಬಳಸುತ್ತಿದೆ ಎಂದು ಹೇಳಿದರು.ನಮ್ಮ ಸಂಘಟನೆಯು ಕಾರ್ಮಿಕರ ಹಕ್ಕುಗಳ ಹೋರಾಟದ ಪರವಾಗಿ ರಚನೆಗೊಂಡಿದೆ. ಕಾರ್ಮಿಕ ವಿಭಾಗ ತುಂಬ ಗಟ್ಟಿಯಾಗಿದೆ. ಕಾರ್ಮಿಕ ಇಲಾಖೆಯಿಂದ ಪ್ರತಿಯೊಂದು ಸವಲತ್ತು ನೀಡಲಾಗುತ್ತಿದೆ. ಅದನ್ನು ಸಮರ್ಪಕವಾಗಿ ಉಪಯೋಗಿಸಿಕೊಳ್ಳುವ ಅರಿವು ಕಾರ್ಮಿಕರಲ್ಲಿ ಮೂಡಿಸುವುದು ನಮ್ಮ ಆದ್ಯ ಕರ್ತವ್ಯ ಎಂದರು.ಈ ವರ್ಷ ಸರ್ಕಾರದ ಕಾರ್ಮಿಕ ಇಲಾಖೆಯು 3.80 ಕೋಟಿ ಕಾರ್ಮಿಕರನ್ನು ನೋಂದಣಿ ಮಾಡಿಕೊಂಡಿದ್ದು ದೇಶದಲ್ಲೇ ಅತಿ ಹೆಚ್ಚು ಕಾರ್ಮಿಕರನ್ನು ನೋಂದಾಯಿಸಿಕೊಂಡ ಹೆಗ್ಗಳಿಕೆ ಕರ್ನಾಟಕಕ್ಕೆ ಸಲ್ಲುತ್ತದೆ ಎಂದು ಹೇಳಿದರು.ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್, ರಾಜೀವ್ ಗಾಂಧಿ ಅವರು ದೇಶಕ್ಕೆ ಹೊಸ ದೊರವಾಣಿಯ ಹೊಸ ತಂತ್ರಜ್ಞಾನವನ್ನು ಪರಿಚಯಿಸಿ ಸಂಪರ್ಕ ಕ್ರಾಂತಿ ಮಾಡಿದ ಮಹಾನ್ ದೂರದೃಷ್ಟಿ ವಾದಿ. ತಮ್ಮ ದಿಟ್ಟ ಆಲೋಚನೆ ಮೂಲಕ ಭವಿಷ್ಯದ ಭಾರತವನ್ನು ಉತ್ತುಂಗಕ್ಕೆ ಕೊಂಡೊಯ್ಯುವಲ್ಲಿ ಶ್ರಮಿಸಿದವರಲ್ಲಿ ರಾಜೀವ್ ಅವರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್. ಮೂರ್ತಿ, ಐ.ಎನ್‌.ಟಿ.ಯು.ಸಿ ರಾಜ್ಯ ಸಮಿತಿ ಉಪಾಧ್ಯಕ್ಷ ನಾಗರಾಜ್, ಪುಟ್ಟಯ್ಯ, ಐ.ಎನ್.ಟಿ.ಯು.ಸಿನಗರ ಅಧ್ಯಕ್ಷ ಮದನ್, ಗ್ರಾಮಾಂತರ ಅಧ್ಯಕ್ಷ ಚೇತನ್ ಗೌಡ,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮಪ್ಪ, ಉಪಾಧ್ಯಕ್ಷ ಹೆಡತಲೆ ಮಂಜುನಾಥ್, ಪ್ರೊ. ಶಿವಕುಮಾರ್, ಹುಣಸೂರು ಬಸವಣ್ಣ, ಮೋದಾಮಣಿ, ಪುಷ್ಪಲತಾ ಚಿಕ್ಕಣ್ಣ, ಚಿಕ್ಕಣ್ಣ, ಈಶ್ವರ್ ಚಕ್ಕಡಿ, ಎಂ. ಶಿವಪ್ರಸಾದ್, ತಲಕಾಡು ಮಂಜುನಾಥ್, ರಮೇಶ್, ಸುನಂದ್‌ಕುಮಾರ್, ಶಾಮ್. ಯೋಗೇಶ್ ಹಾಗೂ ರಾಜ್ಯ ಸಮಿತಿಯ ಪದಾಧಿಕಾರಿಗಳು ಇದ್ದರು.----------------------eom/mys/dnm/