ಮೈಸೂರು ರಾಜ್ಯ ಕರ್ನಾಟಕವಾಗಿ ಇಂದಿಗೆ 50 ವರ್ಷ

KannadaprabhaNewsNetwork | Published : Nov 1, 2023 1:00 AM

ಸಾರಾಂಶ

ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ ನವೆಂಬರ್ 1ಕ್ಕೆ 50 ವರ್ಷ ಪೂರ್ಣಗೊಂಡ ಹಿನ್ನೆಲೆ ಕೋಟೆ ನಾಡು ಚಿತ್ರದುರ್ಗ ರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾಗಿದೆ. ವಿಜೃಂಭಣೆ ಹಾಗೂ ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆಗಳು ನಡೆದಿದೆ. ನಗರದ ಪೊಲೀಸ್ ಕವಾಯತು ಮೈದಾನ ಸಿಂಗಾರಗೊಂಡಿದೆ. ವೇದಿಕೆಯು ಹಳದಿ ಮತ್ತು ಕೆಂಪು ಬಣ್ಣದ ಬಗೆ ಬಗೆಯ ವಿನ್ಯಾಸದಿಂದ ಅಲಂಕೃತಗೊಂಡಿದ್ದು, ಇಡೀ ಮೈದಾನದಲ್ಲಿ ಕನ್ನಡ ಬಾವುಟ, ಕನ್ನಡ ನಾಡು ನುಡಿ ಬಿಂಬಿಸುವ ರೀತಿ ಸಜ್ಜುಗೊಂಡಿದ್ದು ಹಬ್ಬದ ವಾತಾವರಣ ನಿರ್ಮಾಣಗೊಂಡಿದೆ.
ಚಿತ್ರದುರ್ಗದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆಗೆ ಕ್ಷಣಗಣನೆ । ಸಿಂಗಾರಗೊಂಡ ಪೊಲೀಸ್ ಕವಾಯತು ಮೈದಾನ ಕನ್ನಡಪ್ರಭ ವಾರ್ತೆ ಚಿತ್ರದುರ್ಗ ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ ನವೆಂಬರ್ 1ಕ್ಕೆ 50 ವರ್ಷ ಪೂರ್ಣಗೊಂಡ ಹಿನ್ನೆಲೆ ಕೋಟೆ ನಾಡು ಚಿತ್ರದುರ್ಗ ರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾಗಿದೆ. ವಿಜೃಂಭಣೆ ಹಾಗೂ ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆಗಳು ನಡೆದಿದೆ. ನಗರದ ಪೊಲೀಸ್ ಕವಾಯತು ಮೈದಾನ ಸಿಂಗಾರಗೊಂಡಿದೆ. ವೇದಿಕೆಯು ಹಳದಿ ಮತ್ತು ಕೆಂಪು ಬಣ್ಣದ ಬಗೆ ಬಗೆಯ ವಿನ್ಯಾಸದಿಂದ ಅಲಂಕೃತಗೊಂಡಿದ್ದು, ಇಡೀ ಮೈದಾನದಲ್ಲಿ ಕನ್ನಡ ಬಾವುಟ, ಕನ್ನಡ ನಾಡು ನುಡಿ ಬಿಂಬಿಸುವ ರೀತಿ ಸಜ್ಜುಗೊಂಡಿದ್ದು ಹಬ್ಬದ ವಾತಾವರಣ ನಿರ್ಮಾಣಗೊಂಡಿದೆ. ಬುಧವಾರ ಬೆಳಗ್ಗೆ 7.30 ಕ್ಕೆ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆಯು ನಗರದ ನೀಲಕಂಠೇಶ್ವರ ದೇಗುಲದಿಂದ ಪ್ರಾರಂಭವಾಗಲಿದೆ. ಮೆರವಣಿಗೆಯಲ್ಲಿ ನಮ್ಮ ನಾಡು, ನುಡಿ, ಸಂಸ್ಕೃತಿ ಬಿಂಬಿಸುವ ವಿವಿಧ ವೈವಿಧ್ಯಮಯ ಜಾನಪದ ಕಲಾತಂಡಗಳು ಪಾಲ್ಗೊಳ್ಳಲಿದ್ದು, ಸಾರ್ವಜನಿಕರು, ಅಧಿಕಾರಿಗಳು, ಶಾಲೆ-ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ಪಾಲ್ಗೊಳ್ಳಲಿವೆ. ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಪಂಚಾಯಿತಿ, ಭದ್ರಾ ಮೇಲ್ದಂಡೆ ಯೋಜನೆ, ಸರ್ಕಾರದ ಗ್ಯಾರಂಟಿ ಯೋಜನೆಗಳ ಸ್ತಬ್ಧಚಿತ್ರಗಳು, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸ್ತಬ್ಧಚಿತ್ರಗಳು ಗಮನ ಸೆಳೆಯಲಿವೆ. ಬೆಳಗ್ಗೆ 9ಕ್ಕೆ ಪೊಲೀಸ್ ಕವಾಯತು ಮೈದಾನದಲ್ಲಿ ರಾಜ್ಯೋತ್ಸವ ಸಮಾರಂಭದ ಅಂಗವಾಗಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ, ರಾಷ್ಟ್ರಧ್ವಜಾರೋಹಣ, ರಾಷ್ಟ್ರಗೀತೆ ಮತ್ತು ನಾಡಗೀತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ರಾಜ್ಯೋತ್ಸವ ಸಂದೇಶ ನೀಡುವರು. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಘನ ಉಪಸ್ಥಿತಿ ವಹಿಸುವವರು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ರಾಷ್ಟ್ರ ಧ್ವಜಾರೋಹಣ ಮತ್ತು ರಾಜ್ಯೋತ್ಸವ ಸಂದೇಶ ನೀಡುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಆಹ್ವಾನಿತರಾಗಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಕೆ. ಅನ್ವರ್ ಭಾಷಾ, ಮುಖ್ಯ ಅತಿಥಿಗಳಾಗಿ ಶಾಸಕರಾದ ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ಡಾ.ಎಂ.ಚಂದ್ರಪ್ಪ, ಬಿ.ಜಿ. ಗೋವಿಂದಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ.ನಾರಾಯಣಸ್ವಾಮಿ, ಚಿದಾನಂದ ಎಂ. ಗೌಡ, ಕೆ.ಎಸ್. ನವೀನ್ ಪಾಲ್ಗೊಳ್ಳಲಿದ್ದಾರೆ. ಜಿಲ್ಲಾಡಳಿತ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಅಂದು ಸಂಜೆ 6ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದ್ದು, ಸಾರ್ವಜನಿಕರು ಮನೆಗಳ ಮುಂದೆ ರಂಗೋಲಿ ಹಾಕಿ, ಗಾಳಿಪಟಗಳನ್ನು ಹಾರಿಸಿ, ಹಣತೆ ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗಿಸುವುದರೊಂದಿಗೆ ರಾಜ್ಯೋತ್ಸವ ಸಂಭ್ರಮ ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ. ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಳಿಗ್ಗೆ 9 ಗಂಟೆಗೆ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜರುಗುವ ಕಾರ್ಯಕ್ರಮ ಹಾಗೂ ಸಂಜೆ 5 ಗಂಟೆಗೆ ತರಾಸು ರಂಗಮಂದಿರದಲ್ಲಿ ಜರುಗುವ ಕಾರ್ಯಕ್ರಮಗಳಲ್ಲಿ ಎಲ್ಲ ಸರ್ಕಾರಿ ಅಧಿಕಾರಿಗಳು, ನೌಕರರು ಗೈರು ಹಾಜರಾಗದಂತೆ ತಪ್ಪದೇ ಭಾಗವಹಿಸಬೇಕು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. -------------------------- ಸಾಧಕರಿಗೆ ರಾಜ್ಯೋತ್ಸವ ಸನ್ಮಾನ ಕರ್ನಾಟಕಕ್ಕೆ 50ರ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಈ ಬಾರಿ ವಿಶೇಷವಾಗಿ ಈ ನಾಡಿನ ಹೆಸರಾಂತ 5 ಕವಿಗಳು ರಚಿಸಿರುವ ಗೀತೆಗಳನ್ನು ರಾಜ್ಯೋತ್ಸವ ಸಮಾರಂಭದಲ್ಲಿ ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ ಸಲ್ಲಿಸಲು ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ. ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸಮಾರಂಭದಲ್ಲಿ ಸಾಹಿತ್ಯ, ಸಂಗೀತ, ಕಲೆ (ರಂಗಭೂಮಿ), ಜಾನಪದ, ಸಮಾಜ ಸೇವೆ, ಪರಿಸರ ಸಂರಕ್ಷಣೆ, ಕೃಷಿ, ಕ್ರೀಡೆ, ವಿಜ್ಞಾನ ತಂತ್ರಜ್ಞಾನ ಸಂಶೋಧನೆ, ವೈದ್ಯಕೀಯ, ವಿಶೇಷಚೇತನರ ಕ್ರೀಡೆ, ಚಿತ್ರಕಲೆ, ಪತ್ರಿಕೋದ್ಯಮ, ಛಾಯಾಗ್ರಹಣ ಕ್ಷೇತ್ರಗಳಲ್ಲಿ ಉತ್ತಮ ಹಾಗೂ ಗಣನೀಯ ಸೇವೆ, ಸಾಧನೆಗೈದ ಸಾಧಕರಿಗೆ ಸನ್ಮಾನ ನಡೆಯಲಿದೆ.

Share this article