ನಾರಾಯಣ ಮಾಯಾಚಾರಿ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಂಪುಟ ಸರ್ಜರಿಗೆ ಚಿಂತನೆ ನಡೆಯುತ್ತಿರುವ ನಡುವೆಯೇ ಆಕಾಂಕ್ಷಿಗಳಲ್ಲಿ ಹೊಸ ಭರವಸೆ ಮೂಡಿಸಿದೆ. ಈಗಾಗಲೇ ಇರುವ ಸಚಿವರಲ್ಲಿಯೇ ಕೆಲವರಿಗೆ ಕೊಕ್ ಕೊಟ್ಟು ಕೆಲವರಿಗೆ ಅವಕಾಶ ನೀಡಲು ತೆರೆ ಮರೆಯ ಕಸರತ್ತು ಕೂಡ ನಡೆಯುತ್ತಿದೆ.
ಈ ನಡುವೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ಸರ್ಜರಿಗೆ ವರಿಷ್ಠರೊಂದಿಗೆ ಚರ್ಚಿಸುವೆ. ಅವರು ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿರುವುದು ಕೂಡ ಸಚಿವರ ಬದಲಾವಣೆ ಬಹುತೇಕ ಪಕ್ಕಾ ಎಂದೇ ಹೇಳಲಾಗುತ್ತಿದೆ. ಈ ನಿಟ್ಟಿನಲ್ಲಿ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರು ಸಚಿವ ಸ್ಥಾನದ ಪೈಪೋಟಿಯಲ್ಲಿದ್ದಾರೆ. ಮಾತ್ರವಲ್ಲ, ನಾಡಗೌಡರಿಗೆ ಸಚಿವ ಸ್ಥಾನ ನೀಡಬೇಕೆಂಬ ಕೂಗು ಕೂಡ ಕ್ಷೇತ್ರದಲ್ಲಿ ಮತ್ತು ಜಿಲ್ಲೆಯಲ್ಲಿ ಪ್ರಬಲವಾಗಿ ಕೇಳಿಬರುತ್ತಿದೆ.ಇಲಾಖೆಗಳಲ್ಲಿ ಕಳಪೆ ಸಾಧನೆ ತೋರಿದ ಕ್ರಿಯಾಶೀಲರಲ್ಲದ ಸಚಿವರನ್ನು ಕೈ ಬಿಟ್ಟು, ಕೆಲವೊಂದು ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿರುವ ನಡುವೆಯೇ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರಿಗೆ ಸಚಿವ ಸ್ಥಾನ ನೀಡಬೇಕೆಂಬ ಆಗ್ರಹ ಕೂಡ ಹೆಚ್ಚಾಗುತ್ತಿದೆ.
ಜತೆಗೆ 2014ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಚೇತಕರಾಗಿ, ಸಿಎಲ್‌ಪಿ ಕಾರ್ಯದರ್ಶಿಯಾಗಿ, ಕೆಪಿಸಿಸಿ ಉಪಾಧ್ಯಕ್ಷರಾಗಿ, ದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಈ ನಿಟ್ಟಿನಲ್ಲಿ ಅನುಭವ ಹೊಂದಿರುವ ಸಿ.ಎಸ್.ನಾಡಗೌಡರಿಗೆ ಈ ಬಾರಿ ಸಂಪುಟದಲ್ಲಿ ಅವಕಾಶ ಕಲ್ಪಿಸಬೇಕು ಎಂದು ಅವರು ಅಭಿಮಾನಿಗಳು ನಾಡಗೌಡರ ಈ ಸಾಧನೆಯ ಪಟ್ಟಿಯನ್ನು ವರಿಷ್ಠರ ಮುಂದೆ ತೋರಿಸುತ್ತಿದ್ದಾರೆ.
ಈಗಾಗಲೇ ವಿಜಯಪುರ ಜಿಲ್ಲೆಯಲ್ಲಿ ಎಂ.ಬಿ.ಪಾಟೀಲ ಮತ್ತು ಬ.ಬಾಗೇವಾಡಿ ಮತಕ್ಷೇತ್ರದ ಶಿವಾನಂದ ಪಾಟೀಲರಿಗೆ ಸಚಿವ ಸ್ಥಾನ ನೀಡಲಾಗಿದೆ. ಒಂದು ವೇಳೆ ಇನ್ನೊಂದು ಸಚಿವ ಸ್ಥಾನ ನೀಡುವುದಾದರೆ ಅದನ್ನು ಸಿ.ಎಸ್.ನಾಡಗೌಡರಿಗೆ ನೀಡಬೇಕು ಎನ್ನುವ ಆಗ್ರಹ ಕೇಳಿಬರುತ್ತಿದೆ. ಮಾತ್ರವಲ್ಲ, ಇದಕ್ಕಾಗಿ ತೆರೆಮರೆಯಲ್ಲಿ ಯತ್ನ ಕೂಡ ನಡೆಯುತ್ತಿದೆ ಎಂದು ಹೇಳಲಾಗಿದೆ.
ಕೋಟ್....
- ಬಿ.ಎಂ.ಹಿರೇಮಠ, ಹಿರಿಯ ಸಾಹಿತಿ