ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ನಾಡಗೌಡ

KannadaprabhaNewsNetwork |  
Published : Jan 12, 2025, 01:17 AM IST
ಚಾಲನೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಟ್ಟಣದ ಹುಡ್ಕೋ ಬಡಾವಣೆಯಲ್ಲಿನ ಮಿನಿ ವಿಧಾನಸೌಧದಲ್ಲಿ ಸರ್ವೇ ಮತ್ತು ನೋಂದಣಿ ಇಲಾಖೆಗಳ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣ, ಭೂ ಸುರಕ್ಷಾ ಇ-ಖಜಾನೆಯನ್ನು ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಶನಿವಾರ ಸಂಜೆ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ

ಪಟ್ಟಣದ ಹುಡ್ಕೋ ಬಡಾವಣೆಯಲ್ಲಿನ ಮಿನಿ ವಿಧಾನಸೌಧದಲ್ಲಿ ಸರ್ವೇ ಮತ್ತು ನೋಂದಣಿ ಇಲಾಖೆಗಳ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣ, ಭೂ ಸುರಕ್ಷಾ ಇ-ಖಜಾನೆಯನ್ನು ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಶನಿವಾರ ಸಂಜೆ ಉದ್ಘಾಟಿಸಿದರು.ಈ ವೇಳೆ ಶಾಸಕ ಸಿ.ಎಸ್.ನಾಡಗೌಡ ಸುದ್ದಿಗಾರರೊಂದಿಗೆ ಮಾತನಾಡಿ, ಭೂ ಸುರಕ್ಷಾ ಇ-ಖಜಾನೆ ತಾಲ್ಲೂಕು ಕಚೇರಿ, ಸರ್ವೆ ಮತ್ತು ನೋಂದಣಿ ಇಲಾಖೆಗಳ ಎಲ್ಲ ಭೂ ದಾಖಲೆಗಳ ಡಿಜಟಲೀಕರಣ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಈ ಕಾರ್ಯಕ್ರಮ ಆರಂಭಿಸಿದೆ. ಹಳೆಯ, ದುಸ್ಥಿತಿಯಲ್ಲಿರುವ ಭೂ ದಾಖಲೆಗಳನ್ನು ಶಾಶ್ವತ ಡಿಜಿ ದಾಖಲೆಗಳಾಗಿ ಪರಿವರ್ತಿಸುವುದು. ರೆಕಾರ್ಡ್ ರೂಂಗಳಿಂದ ದಾಖಲೆ ಪಡೆದುಕೊಳ್ಳಲು ಇರುವ ತೊಂದರೆಗಳ ನಿವಾರಣೆ, ಹಳೆಯ ದಾಖಲೆಗಳ ಸಂರಕ್ಷಣೆ ಹಾಗೂ ಕಳವು, ತಿದ್ದುಪಡಿ ನಿಯಂತ್ರಣ ಮಾಡುವುದು ಸೇರಿದಂತೆ ಹಲವು ಪ್ರಯೋಜನಗಳನ್ನು ಸಾರ್ವಜನಿಕರು ಪಡೆಯಬಹುದು. ನಮ್ಮ ಸರಕಾರ ಈ ಯೋಜನೆ ಕೈಗೊಂಡಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಕಾರಣ ಇದರಿಂದ ಸಾರ್ವಜನಿಕರಿಗೆ ತುಂಬ ಅನುಕೂಲವಾಗಲಿದೆ ಎಂದರು.ಈ ವೇಳೆ ತಹಸೀಲ್ದಾರ್‌ ಬಲರಾಮ ಕಟ್ಟಿಮನಿ, ಪುರಸಭೆ ಅಧ್ಯಕ್ಷ ಮೈಬೂಬ ಗೊಳಸಂಗಿ, ಮುಖಂಡರಾದ ಸಿ.ಬಿ.ಅಸ್ಕಿ, ವೈ.ಎಚ್.ವಿಜಯಕರ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲಪ್ಪ ನಾಯಕಮಕ್ಕಳ, ಶಿರಸ್ತೇದಾರ ಎ.ಎಂ.ಬಾಗೇವಾಡಿ, ಎಂ.ಎಚ್.ಮಾಗಿ, ಮಹೇಶ ಪಾಟೀಲ, ಎಸ್.ಎಂ.ಸಜ್ಜನ, ಗ್ರಾಮ ಲೆಕ್ಕಾಧಿಕಾರಿ ಹಷೀತ.ಎಚ್ ಸೇರಿ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5-6 ತಿಂಗಳಿಂದ ನೀರು ಪೋಲು: ಕ್ರಮಕೈಗೊಳ್ಳದ ಅಧಿಕಾರಿಗಳು
ತಮ್ಮ ಮೇಲಿನ ಆರೋಪ ಸುಳ್ಳು, ಆಧಾರ ರಹಿತ : ಮುನೀಶ್‌ ಮೌದ್ಗಿಲ್‌