26 ರಂದು ನಾಡಪ್ರಭು ಕೆಂಪೇಗೌಡರ ಸಂಸ್ಮರಣೋತ್ಸವ

KannadaprabhaNewsNetwork |  
Published : Jul 24, 2025, 12:58 AM IST
54 | Kannada Prabha

ಸಾರಾಂಶ

ಸಾಕಷ್ಟು ಶಾಲೆಗಳನ್ನು ದತ್ತು ಪಡೆದು ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸ ನೀಡಿ ಉನ್ನತ ಅಧಿಕಾರಿಗಳಾಗಿಸುವ ನಿಟ್ಟಿನಲ್ಲಿ ಶಿಕ್ಷಣಕ್ಕೆ ಒತ್ತು ನೀಡಿದ್ದೇವೆ,

ಕನ್ನಡಪ್ರಭ ವಾರ್ತೆ ಪಿರಿಯಾಪಟ್ಟಣಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ಜು. 26 ರಂದು ಪಟ್ಟಣದ ಡಿ. ದೇವರಾಜ ಅರಸು ಭವನದಲ್ಲಿ ನಾಡಪ್ರಭು ಕೆಂಪೇಗೌಡರ ಸಂಸ್ಮರಣೋತ್ಸವ ಮತ್ತು ಪ್ರಗತಿಪರ ರೈತರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕಲಿಗ ಯುವ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ನಂಜೇಗೌಡ ನಂಜುಂಡ ಹೇಳಿದರು.ಒಕ್ಕಲಿಗ ಯುವ ಬ್ರಿಗೇಡ್ ಪ್ರತಿಯೊಬ್ಬರಿಗೂ ಅನ್ನ, ಅಕ್ಷರ ಮತ್ತು ಅವಕಾಶ ಕಲ್ಪಿಸುವ ಅನೇಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ರೈತರಿಗೆ, ಯುವ ಜನತೆಗೆ ಮತ್ತು ಮಹಿಳೆಯರಿಗೆ ಬೆನ್ನೆಲುಬಾಗಿ ನಿಂತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.ಸಾಕಷ್ಟು ಶಾಲೆಗಳನ್ನು ದತ್ತು ಪಡೆದು ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸ ನೀಡಿ ಉನ್ನತ ಅಧಿಕಾರಿಗಳಾಗಿಸುವ ನಿಟ್ಟಿನಲ್ಲಿ ಶಿಕ್ಷಣಕ್ಕೆ ಒತ್ತು ನೀಡಿದ್ದೇವೆ, ಇದಕ್ಕಾಗಿ ಸ್ಪರ್ಧಾತ್ಮಕ ತರಬೇತಿ ಕೂಡ ನೀಡುತ್ತಿದ್ದೇವೆ. ಈ ಕಾರಣಕ್ಕಾಗಿ ರಾಜ್ಯಾದ್ಯಂತ ವಿವಿಧ ಭಾಗಗಳಲ್ಲಿ ಉದ್ಯೋಗ ಮೇಳ, ಶಿಕ್ಷಣ ಮೇಳ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ನೀಡಿ ಪ್ರತಿಯೊಬ್ಬರಲ್ಲಿಯೂ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.ಕಾರ್ಯಕ್ರಮದಲ್ಲಿ ಬೆಂಗಳೂರಿನ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ, ತುಮಕೂರಿನ ಕುಂಚಟಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಹನುಮಂತನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಮಾಜಿ ಉಪ ಮುಖ್ಯಮಂತ್ರಿ ಸಿ.ಎನ್. ಅಶ್ವತ್ಥ್‌ ನಾರಾಯಣ್ ಉದ್ಘಾಟಿಸುವರು. ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಎಸ್‌.ವಿ. ಸುರೇಶ್ ಅಧ್ಯಕ್ಷತೆ ವಹಿಸುವರು.ಮುಖ್ಯಅತಿಥಿಗಳಾಗಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನ್ ಗೌಡ, ಹಿರಿಯ ಪತ್ರಕರ್ತ ಎಂ.ಆರ್. ಸತ್ಯನಾರಾಯಣ, ಕೆಎನ್.ಸಿ ಇಂಟರ್‌ ನ್ಯಾಷನಲ್ ಗ್ಲೋಬಲ್ ಸ್ಕೂಲ್ ನ ಅಧ್ಯಕ್ಷ . ಕೆ.ಎನ್. ಚಂದ್ರಶೇಖರ್, ಸ್ಮಾರ್ಟ್ ಕ್ವಿಕ್ ವ್ಯವಸ್ಥಾಪಕ ನಿರ್ದೇಶಕ ದೀಪುಗೌಡ, ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ, ಬಿ.ಸಿ. ನವೀನ್, ಮೈಸೂರು ವಿಶ್ವ ವಿದ್ಯಾ ನಿಲಯದ ಅರ್ಥಶಾಸ್ತ್ರ ಮತ್ತು ಸಹಕಾರ ವಿಭಾಗದ ಮುಖ್ಯಸ್ಥ ಡಾ. ನವಿತಾ ತಿಮ್ಮಯ್ಯ, ವೈದ್ಯಕೀಯ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ಡಾ. ಸೋಮಶೇಖರ್ ಭಾಗವಹಿಸಲಿದ್ದಾರೆ.ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದರು.ಜಿಲ್ಲಾ ಒಕ್ಕಲಿಗರ ಸಂಘದ ಉಪಾಧ್ಯಕ್ಷ ನಾಗಣ್ಣ ಗೌಡ, ಮುಖಂಡರಾದ ಮಲ್ಲೇಶ್, ಮಾದೇಗೌಡ, ಹನುಮಂತ, ರಾಜೇಗೌಡ ಇದ್ದರು.

PREV

Recommended Stories

ಡಿಕೆ ಮಹದಾಯಿ ಹೇಳಿಕೆಗೆ ಗೋವಾ ಸಿಎಂ ಆಕ್ರೋಶ
ಎಸ್ಸೆಸ್ಸೆಲ್ಸಿ ಪಾಸ್‌ಗೆ 33% ಅಂಕ: ಮಿಶ್ರ ಪ್ರತಿಕ್ರಿಯೆ