ನಾಡಪ್ರಭು ಕೆಂಪೇಗೌಡರು ಎಲ್ಲರಿಗೂ ಆದರ್ಶ: ತಹಸೀಲ್ದಾರ್‌ ಘಂಟಿ

KannadaprabhaNewsNetwork |  
Published : Jun 28, 2024, 12:56 AM IST
27ಕೆಪಿಡಿವಿಡಿ01:  | Kannada Prabha

ಸಾರಾಂಶ

ಕೆಂಪೇಗೌಡರು ಬೆಂಗಳೂರು ನಿರ್ಮಾಣ ಮಾಡಿರುವುದಲ್ಲದೇ, ಇವರ ಅವಧಿಯಲ್ಲಿ ನಾಡಿನಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಯಾರೂ ಮರೆಯುವಂತಿಲ್ಲ ಎಂದು ತಹಸೀಲ್ದಾರ್‌ ಚನ್ನಮಲ್ಲಪ್ಪ ಘಂಟಿ ತಿಳಿಸಿದರು.

ದೇವದುರ್ಗ: ಶೈಕ್ಷಣಿಕ, ಧಾರ್ಮಿಕ, ಕೈಗಾರಿಕೆ, ನೀರಾವರಿ, ಕೃಷಿ ಸೇರಿದಂತೆ ಹಲವಾರು ರಂಗಗಳಲ್ಲಿ ಕ್ರಾಂತಿ ಮಾಡಿರುವ ನಾಡಪ್ರಭು ಕೆಂಪೇಗೌಡರು ನಮಗೆಲ್ಲರಿಗು ಆದರ್ಶಪ್ರಾಯರಾಗಿದ್ದಾರೆ ಎಂದು ತಹಸೀಲ್ದಾರ್‌ ಚನ್ನಮಲ್ಲಪ್ಪ ಘಂಟಿ ತಿಳಿಸಿದರು.

ಪಟ್ಟಣದ ಮಿನಿವಿಧಾನಸೌಧ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವದ ಅಂಗವಾಗಿ ಭಾವಚಿತ್ರಕ್ಕೆ ಗುರುವಾರ ಮಾಲಾರ್ಪಣೆ ಮಾಡಿ, ಬಳಿಕ ಮಾತನಾಡಿದ ಅವರು, ಬೆಂಗಳೂರು ನಿರ್ಮಾಣ ಮಾಡಿರುವುದಲ್ಲದೇ, ಇವರ ಅವಧಿಯಲ್ಲಿ ನಾಡಿನಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಯಾರೂ ಮರೆಯುವಂತಿಲ್ಲ. ಇಂತಹ ಮಹನೀಯರ ಸಂದೇಶ, ಕಾರ್ಯಗಳು ಸರ್ವ ಕಾಲಿಕ ಪ್ರಸ್ತುತ ಎಂದು ತಹಸೀಲ್ದಾರ್‌ ಚನಮಲ್ಲಪ್ಪ ಘಂಟಿ ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಕಸಾಪ ಅಧ್ಯಕ್ಷ ಎಚ್.ಶಿವರಾಜ, ಶಿಕ್ಷಕ ಯಲ್ಲಪ್ಪ ಹಂದ್ರಾಳ ಮಾತನಾಡಿದರು.

ಶಾಲಾ, ಕಾಲೇಜುಗಳಲ್ಲಿ ಏರ್ಪಡಿಸಲಾಗಿದ್ದ ವಿವಿಶ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರೇಡ್-2 ತಹಸೀಲ್ದಾರ್‌ ವೆಂಕಟೇಶ ಕುಲಕರ್ಣಿ, ತಾಪಂ ಇಒ ಬಸವರಾಜ ಹಟ್ಟಿ, ಪುರಸಭೆ ಮುಖ್ಯಾಧಿಕಾರಿ ಹಂಪಯ್ಯ ಕೆ., ಜಿಲ್ಲಾ ಕನ್ನಡ ಸೇನೆ ಅಧ್ಯಕ್ಷ ರಾಮಣ್ಣ ಕರಡಿಗುಡ್ಡ, ದೈಹಿಕ ಶಿಕ್ಷಣಾಧಿಕಾರಿ ಎಂ.ವಿ.ಕವಡಿಮಠ, ಶಿರಸ್ತೇದಾರರಾದ ಗೋವಿಂದನಾಯಕ, ಭೀಮರಾಯ ನಾಯಕ ಗೊವಿಂದಪಲ್ಲಿ, ಉಪನ್ಯಾಸಕ ಶರಣಪ್ಪ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು, ಇತರೆ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!