ಕನ್ನಡಪ್ರಭ ವಾರ್ತೆ ಕಾಪು
ಕಾಪುವಿನ ಪ್ರಸಿದ್ಧ ನಾದಸ್ವರ ವಾದಕ ಶೇಖ್ ಜಲೀಲ್ ಸಾಹೇಬ್ (56) ಅವರು ಸೋಮವಾರ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು, ಪತ್ನಿ, ಮಗಳು, ಸಹೋದರ ಸಹಿತ ಅಪಾರ ಬಂಧು ಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ.ಜಲೀಲ್ ಸಾಹೇಬ್ ಶನಿವಾರ ಕೊಪ್ಪಲಂಗಡಿಯಲ್ಲಿ ನಡೆದ ಮುಳ್ಳಮುಟ್ಟೆ, ಭಾನುವಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ದೀಪಾವಳಿ ಸಂಭ್ರಮ ಮತ್ತು ಬಲಿ ಹೊರಡುವ ಸಂದರ್ಭದಲ್ಲೂ ನಾದಸ್ವರ ಸೇವೆ ನೀಡಿದ್ದರು. ಸೋಮವಾರ ಮುಂಜಾನೆ ನಾದಸ್ವರ ಹೆಗಲಿಗೇರಿಸಿಕೊಂಡು ಮನೆಯಿಂದ ಹೊರಗೆ ಹೋಗಿದ್ದು, ಹಟೇಲ್‌ನಲ್ಲಿ ಚಹಾ ಕುಡಿಯಲು ಕುಳಿತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿದ್ದರು. ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲೇ ಮೃತಪಟ್ಟಿರುವುದಾಗಿ ತಿಳಿಯಲಾಗಿದೆ.
ಕಾಪು ಸಾವಿರ ಸೀಮೆಯ ಒಡೆಯ ಮಹತೋಭಾರ ಶ್ರೀ ಲಕ್ಷ್ಮೀ ಜನಾರ್ದನ ದೇವರ ಸನ್ನಿಧಿ, ಕಾಪು ಮೂರನೇ ಮಾರಿಗುಡಿ ಸಹಿತ ಕಾಪು ಮಾರಿಯಮ್ಮ ದೇವಿ ಸನ್ನಿಧಿ ಹಾಗೂ ಕಾಪು ಸಾವಿರ ಸೀಮೆಯ ಹೆಚ್ಚಿನ ದೇವಸ್ಥಾನ, ಗರಡಿ, ದೇವಸ್ಥಾನಗಳಲ್ಲಿ ಪಾರಂಪರಿಕ ನಾಗಸ್ವರ ವಾದಕರಾಗಿ ದಶಕಗಳಿಂದ ಸೇವೆ ನೀಡುತ್ತಿದ್ದರು.ಅಜ್ಜ ಇಮಾಮ್ ಸಾಹೇಬ್, ತಂದೆ ಬಾಬನ್ ಸಾಹೇಬ್ ಅವರಿಂದ ಬಳುವಳಿಯಾಗಿ ಬಂದ ನಾದಸ್ವರ ವಾದನವನ್ನು ಕಳೆದ 40 ವರ್ಷಗಳಿಂದ ವೃತ್ತಿಯನ್ನಾಗಿಸಿಕೊಂಡು ಬಂದಿದ್ದ ಜಲೀಲ್ ಸಾಹೇಬ್ಮು ಸ್ಲಿಂ ದರ್ಮಿಷ್ಟರಾಗಿದ್ದರೂ, ಹಿಂದೂ ಧರ್ಮ, ಸಂಪ್ರದಾಯ, ಸಂಸ್ಕೃತಿಯನ್ನು ಗೌರವಿಸುತ್ತಿದ್ದರು. ಈ ಮೂಲಕ ಅವರು ಸೌಹಾರ್ದಕ್ಕೆ ಉದಾಹರಣೆಯಾಗಿ, ಜನಾನುರಾಗಿಯಾಗಿದ್ದರು.