ನಾಡಿದ್ದು ಮಲಪ್ರಭಾ ಮಲ್ಟಿಸ್ಪೆಷಾಲಿಟಿ ಲೋಕಾರ್ಪಣೆ

KannadaprabhaNewsNetwork |  
Published : Jun 20, 2025, 12:34 AM IST
ಬೈಲಹೊಂಗಲ | Kannada Prabha

ಸಾರಾಂಶ

ಈ ಭಾಗದ ಜನತೆಯ ಅನುಕೂಲಕ್ಕಾಗಿ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಮತ್ತು ಅತ್ಯಾಧುನಿಕ ಸೌಲಭ್ಯದೊಂದಿಗೆ ಸುಸಜ್ಜಿತ ಮಲಪ್ರಭಾ ಮಲ್ಟಿಸ್ಪೆಷಾಲಿಟಿ ಹಾಸ್ಪಿಟಲ್‌ನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಜೂ.22 ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ಸೋಮವಾರ ಪೇಟೆಯ ಶ್ರೀ ದಾನಮ್ಮದೇವಿ ದೇವಸ್ಥಾನದ ಹತ್ತಿರ ಅದ್ಧೂರಿಯಾಗಿ ಜರುಗಲಿದೆ ಎಂದು ಎಲುಬು, ಕೀಲು ರೋಗ ಶಾಸ್ತ್ರಜ್ಞ ಡಾ.ಮಂಜುನಾಥ ಮುದಕನಗೌಡರ ಹೇಳಿದರು.

ಕನ್ನಡಪ್ರಭ ವಾರ್ತೆ ಬೈಲಹೊಂಗಲ

ಈ ಭಾಗದ ಜನತೆಯ ಅನುಕೂಲಕ್ಕಾಗಿ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಮತ್ತು ಅತ್ಯಾಧುನಿಕ ಸೌಲಭ್ಯದೊಂದಿಗೆ ಸುಸಜ್ಜಿತ ಮಲಪ್ರಭಾ ಮಲ್ಟಿಸ್ಪೆಷಾಲಿಟಿ ಹಾಸ್ಪಿಟಲ್‌ನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಜೂ.22 ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ಸೋಮವಾರ ಪೇಟೆಯ ಶ್ರೀ ದಾನಮ್ಮದೇವಿ ದೇವಸ್ಥಾನದ ಹತ್ತಿರ ಅದ್ಧೂರಿಯಾಗಿ ಜರುಗಲಿದೆ ಎಂದು ಎಲುಬು, ಕೀಲು ರೋಗ ಶಾಸ್ತ್ರಜ್ಞ ಡಾ.ಮಂಜುನಾಥ ಮುದಕನಗೌಡರ ಹೇಳಿದರು.

ಪಟ್ಟಣದ ನೂತನ ಮಲಪ್ರಭಾ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಪಟ್ಟಣದಲ್ಲಿ ಕಳೆದ 13 ವರ್ಷಗಳಿಂದ ಆಸ್ಪತ್ರೆ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದೆ. ಅಲ್ಲದೇ ನಮ್ಮ ನೂತನ 12 ಗುಂಟೆ ಜಾಗದಲ್ಲಿ 100 ಹಾಸಿಗೆಯುಳ್ಳ ಸುಸಜ್ಜಿತವಾದ ಆಸ್ಪತ್ರೆಯ ನಿರ್ಮಾಣವಾಗಿದೆ. ಇಲ್ಲಿ ಎಲ್ಲ ತರಹದ ಚಿಕಿತ್ಸೆಗೆ ಸಕಲ ಸೌಲಭ್ಯಗಳನ್ನು ನೀಡಲು ಸಿದ್ಧತೆ ಕೈಗೊಳ್ಳಲಾಗಿದೆ ಎಂದರು.ಸುಸಜ್ಜಿತವಾದ ಹೆರಿಗೆ, ಹೈಟೆಕ್ ಶಸ್ತ್ರಚಿಕಿತ್ಸಾ ನಿಗಾ ಘಟಕ, 24*7 ತುರ್ತು ನಿಗಾ ಸೇವೆ ಇನ್ನಿತರೆ ಸೌಲಭ್ಯ ದೊರಕಲಿವೆ. ಜತೆಗೆ ಸರ್ಕಾರದ ಆರೋಗ್ಯ ಯೋಜನೆಗಳು ಕೂಡ ಪಡೆದುಕೊಳ್ಳಬಹುದಾಗಿದೆ. ಈ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ವಿವರಿಸಿದರು.ಉದ್ಘಾಟನಾ ಸಮಾರಂಭದ ಸಾನ್ನಿಧ್ಯವನ್ನು ಸುಕ್ಷೇತ್ರ ಇಂಚಲದ ಡಾ.ಶಿವಾನಂದ ಭಾರತಿ ಸ್ವಾಮೀಜಿ, ಮುರಗೋಡದ ನೀಲಕಂಠ ಸ್ವಾಮೀಜಿ, ಮೂರುಸಾವಿರಮಠದ ಪ್ರಭು ನೀಲಕಂಠ ಸ್ವಾಮೀಜಿ, ನಯಾನಗರದ ಅಭಿನವ ಸಿದ್ದಲಿಂಗ ಸ್ವಾಮೀಜಿ, ಧಾರ್ಮಿಕ ದತ್ತಿ ಇಲಾಖೆ ನಿರ್ದೇಶಕ ಮಹಾಂತಯ್ಯ ಶಾಸ್ತ್ರಿ ಆರಾದ್ರಿಮಠ, ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ರಾಜಯೋಗಿನಿ ಬಿ.ಕೆ.ಪ್ರಭಾ ಅಕ್ಕಾ, ಮುಸ್ಲಿಂ ಧರ್ಮಗುರು ಮೌಲಾನಾ ಶೌಕತಅಲಿ ಬಾದಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.ಶಾಸಕ ಮಹಾಂತೇಶ ಕೌಜಲಗಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಆಸ್ಪತ್ರೆ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಸಂಸದರಾದ ಜಗದೀಶ ಶೆಟ್ಟರ, ಈರಣ್ಣ ಕಡಾಡಿ, ಕೆಎಲ್ಇ ನಿರ್ದೇಶಕ ಡಾ.ಪ್ರಭಾಕರ ಕೋರೆ ಹಾಗೂ ಅತಿಥಿಗಳಾಗಿ ಶಾಸಕರಾದ ಬಾಬಾಸಾಹೇಬ ಪಾಟೀಲ, ವಿಶ್ವಾಸ ವೈದ್ಯ, ಮಾಜಿ ಶಾಸಕರಾದ ಡಾ.ವಿಶ್ವನಾಥ ಪಾಟೀಲ, ಜಗದೀಶ ಮೆಟಗುಡ್ಡ, ಮಹಾಂತೇಶ ದೊಡಗೌಡ್ರ, ಜಿಪಂ ಮಾಜಿ ಸದಸ್ಯ ಶಂಕರ ಮಾಡಲಗಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಈಶ್ವರಪ್ಪ ಗಡಾದ, ತಾಲೂಕು ಆರೋಗ್ಯಾಧಿಕಾರಿ ಡಾ.ಸಂಜಯ ಸಿದ್ದನ್ನವರ, ಪುರಸಭೆ ಅಧ್ಯಕ್ಷ ವಿಜಯ ಬೋಳನ್ನವರ, ವಿಶೇಷ ಸನ್ಮಾನಿತರಾಗಿ ಡಾ.ಬಿ.ಎಸ್.ಮಹಾಂತಶೆಟ್ಟಿ, ಹಿರಿಯ ವೈದ್ಯ ಡಾ.ಎ.ಎನ್.ಬಾಳಿ ಆಗಮಿಸಲಿದ್ದಾರೆ ಎಂದರು.ಚಿಕ್ಕಮಕ್ಕಳ ತಜ್ಞ ಡಾ.ಶರಣಕುಮಾರ ಅಂಗಡಿ, ಸ್ತ್ರೀರೋಗ ತಜ್ಞ ಡಾ.ಅಶೋಕ ದೊಡವಾಡ ಮಾತನಾಡಿ, ಈ ಭಾಗದ ಜನತೆಯ ಅನುಕೂಲಕ್ಕಾಗಿ ಒಂದೇ ಸೂರಿನಡಿಯಲ್ಲಿ ನೂತನವಾದ ಸುಸಜ್ಜಿತವಾದ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.ಗೋಷ್ಠಿಯಲ್ಲಿ ಡಾ.ರವೀಂದ್ರಕುಮಾರ ಜಕನೂರ ಹಾಗೂ ಸಿಬ್ಬಂದಿ ಇದ್ದರು. ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಮತ್ತು ಅತ್ಯಾಧುನಿಕ ಸೌಲಭ್ಯದೊಂದಿಗೆ ಸುಸಜ್ಜಿತ ಮಲಪ್ರಭಾ ಮಲ್ಟಿಸ್ಪೆಷಾಲಿಟಿ ಹಾಸ್ಪಿಟಲ್‌ನ ನೂತನ ಕಟ್ಟಡದ ಉದ್ಘಾಟನೆ ಜೂ.22 ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ಸೋಮವಾರ ಪೇಟೆಯ ಶ್ರೀ ದಾನಮ್ಮದೇವಿ ದೇವಸ್ಥಾನದ ಹತ್ತಿರ ಜರುಗಲಿದೆ. ನಾನಾ ಗಣ್ಯರು ಈ ವೇಳೆ ಆಗಮಿಸಲಿದ್ದು, 100 ಹಾಸಿಗೆಯುಳ್ಳ ಸುಸಜ್ಜಿತವಾದ ಆಸ್ಪತ್ರೆಯ ನಿರ್ಮಾಣವಾಗಿದೆ. ಇಲ್ಲಿ ಎಲ್ಲ ತರಹದ ಚಿಕಿತ್ಸೆಗೆ ಸಕಲ ಸೌಲಭ್ಯಗಳನ್ನು ನೀಡಲು ಸಿದ್ಧತೆ ಕೈಗೊಳ್ಳಲಾಗಿದೆ.

- ಡಾ.ಮಂಜುನಾಥ ಮುದಕನಗೌಡರ, ಎಲುಬು, ಕೀಲು ರೋಗ ತಜ್ಞವೈದ್ಯ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!