ನಾಗಮಂಗಲ ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಚಿಕ್ಕಮ್ಮ ಅವಿರೋಧ ಆಯ್ಕೆ

KannadaprabhaNewsNetwork |  
Published : Jun 01, 2025, 01:56 AM IST
31ಕೆಎಂಎನ್ ಡಿ13 | Kannada Prabha

ಸಾರಾಂಶ

ಹಿಂದಿನ ಅಧ್ಯಕ್ಷ ಎಚ್.ಎನ್.ಗಿರೀಶ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಚಿಕ್ಕಮ್ಮ ಹೊರತು ಪಡಿಸಿ ಬೇರ್‍ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಅಧ್ಯಕ್ಷೆರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.

ಕನ್ನಡಪ್ರಭ ವಾರ್ತೆ ನಾಗಮಂಗಲ

ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ತುಪ್ಪದಮಡು ಗ್ರಾಮದ ಚಿಕ್ಕಮ್ಮ ಅವಿರೋಧವಾಗಿ ಆಯ್ಕೆಯಾದರು.

ಹಿಂದಿನ ಅಧ್ಯಕ್ಷ ಎಚ್.ಎನ್.ಗಿರೀಶ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಚಿಕ್ಕಮ್ಮ ಹೊರತು ಪಡಿಸಿ ಬೇರ್‍ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಅಧ್ಯಕ್ಷೆರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಸಹಕಾರ ಇಲಾಖೆ ಕೆ.ಆರ್.ಪೇಟೆ ಸಿಡಿಒ ಹಾಗೂ ಚುನಾವಣಾಧಿಕಾರಿ ಭರತ್‌ಕುಮಾರ್ ಪ್ರಕಟಿಸಿದರು.

ನೂತನ ಅಧ್ಯಕ್ಷೆ ಚಿಕ್ಕಮ್ಮ ಅವರಿಗೆ ಉಪಾಧ್ಯಕ್ಷೆ ಆರ್.ಎ.ಗೀತಾ ಅಧಿಕಾರ ಹಸ್ತಾಂತರಿಸಿದರು. ಸಂಘದ ಕಾರ್ಯದರ್ಶಿ ಎಂ.ಕೆ.ಮೋಹನ್‌ರಾಜ್ ಪ್ರಾಸ್ತಾವಿಕ ನುಡಿಯೊಂದಿಗೆ ಸ್ವಾಗತಿಸಿದರು. ಅವಿರೋಧ ಆಯ್ಕೆಯಾಗುತ್ತಿದ್ದಂತೆ ಸಂಘದ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸುವ ಮೂಲಕ ವಿಜಯೋತ್ಸವ ಆಚರಿಸಿದರು.

ಈ ವೇಳೆ ಎಂಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಚ್.ಎಸ್.ನರಸಿಂಹಯ್ಯ, ಕೆ.ವಿ.ದಿನೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ಯುವ ಮುಖಂಡ ಸುನಿಲ್‌ ಲಕ್ಷ್ಮೀಕಾಂತ್, ಸಂಸ್ಥೆ ಮಾಜಿ ಅಧ್ಯಕ್ಷರಾದ ಎಚ್.ಎನ್.ಗಿರೀಶ್, ತಿಮ್ಮಪ್ಪ, ಎಸ್.ಸಿ.ಚೇತನ್‌ಕುಮಾರ್, ಉಪಾಧ್ಯಕ್ಷೆ ಆರ್.ಎ.ಗೀತಾ, ನಿರ್ದೇಶಕರಾದ ಡಿ.ಬಿ.ರಾಜಯ್ಯ, ಸವಿತಾ ರಾಮು, ಆಶಾ, ಯತೀಶ್, ಸರ್ಕಾರಿ ನಾಮನಿರ್ದೇಶಿತ ಸದಸ್ಯ ಮೋಹನ್‌ಕುಮಾರ್, ಮಹಿಳಾ ಕಾಂಗ್ರೆಸ್ ಘಟಕದ ಮುಖಂಡರಾದ ಗೀತಾ ದಾಸೇಗೌಡ, ಪುಟ್ಟಮ್ಮ ಮಾಯಣ್ಣಗೌಡ, ಎನ್.ಕೆ.ವಸಂತಮಣಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

ತರಗತಿಗಳಿಗೆ ಪ್ರವೇಶ ಆನ್ ಲೈನ್ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಅವಕಾಶ

ಮಳವಳ್ಳಿ: ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ 5 ರಿಂದ 10ನೇ ತರಗತಿಗಳಿಗೆ ಹೊಸ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ಬಗ್ಗೆ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ರಾಜ್ಯಾದ್ಯಾಂತ ಪ್ರಾಥಮಿಕ-ಪ್ರೌಢಶಾಲೆಗಳ ತರಗತಿಗಳು ಪ್ರಾರಂಭವಾಗಿವೆ. 2025-26ನೇ ಸಾಲಿನಲ್ಲಿ ಹೊಸ ವಿದ್ಯಾರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಿ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆದುಕೊಳ್ಳಬಹುದು ಎಂದು ಇಲಾಖೆ ಸಹಾಯಕ ನಿರ್ದೇಶಕ ಸಂತೋಷ್ ಕುಮಾರ್ ತಿಳಿಸಿದ್ದಾರೆ.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ