ದೊಡ್ಡಬಳ್ಳಾಪುರ: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದಿರುವ ಗಲಭೆ ಅತ್ಯಂತ ಖಂಡನಾರ್ಹವಾಗಿದ್ದು, ಕೂಡಲೇ ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಇಲ್ಲಿನ ಸಾರ್ವಜನಿಕ ಗಣೇಶೋತ್ಸವ ಮಂಡಲಿಗಳ ಒಕ್ಕೂಟದ ನೇತೃತ್ವದಲ್ಲಿ ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಲಾಯಿತು.
ರಾಜ್ಯದಲ್ಲಿ ಈ ಬಗೆಯ ಕುಕೃತ್ಯಗಳನ್ನು ಸರ್ಕಾರ ನಿಗ್ರಹಿಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಯಾವುದೇ ಪ್ರಯತ್ನಗಳನ್ನು ಹತ್ತಿಕ್ಕುವುದು ಸರ್ಕಾರದ ಕರ್ತವ್ಯವಾಗಬೇಕು. ಈ ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಕೂಡಲೇ ಬಂಧಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಇಂತಹ ದುಷ್ಕೃತ್ಯಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಅಗ್ರಹಿಸಿದರು. ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.
ಫೋಟೋ-12ಕೆಡಿಬಿಪಿ3-ನಾಗಮಂಗಲದಲ್ಲಿ ನಡೆದ ಗಲಭೆ ಪ್ರಕರಣ ಖಂಡಿಸಿ, ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ದೊಡ್ಡಬಳ್ಳಾಪುರದಲ್ಲಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.