ನಾಗಮೋಹನದಾಸ್‌ ಅಯೋಗದ ವರದಿ ಅವೈಜ್ಞಾನಿಕ: ಬಸವ ನಾಗಿದೇವ ಶ್ರೀ

KannadaprabhaNewsNetwork |  
Published : Mar 29, 2026, 02:45 AM IST
ಛಲವಾದಿ ಗುರುಪೀಠದ ಬಸವ ನಾಗಿದೇವ ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ರಾಜ್ಯದಲ್ಲಿ ಒಳಮೀಸಲಾತಿಗೆ ಸಂಬಂಧಿಸಿದಂತೆ ನ್ಯಾ.ನಾಗಮೋಹದಾಸ್ ಆಯೋಗ ನೀಡಿರುವ ವರದಿ ಅವೈಜ್ಞಾನಿಕವಾಗಿದ್ದು, ದಲಿತ ಸಮುದಾಯದ ಬಲಗೈ ಬಣಗಳಿಗೆ ಗಂಭೀರ ಅನ್ಯಾಯವಾಗಿದೆ ಎಂದು ಚಿತ್ರದುರ್ಗದ ಛಲವಾದಿ ಗುರುಪೀಠದ ಬಸವ ನಾಗಿದೇವ ಸ್ವಾಮೀಜಿ ಕಿಡಿಕಾರಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ರಾಜ್ಯದಲ್ಲಿ ಒಳಮೀಸಲಾತಿಗೆ ಸಂಬಂಧಿಸಿದಂತೆ ನ್ಯಾ.ನಾಗಮೋಹದಾಸ್ ಆಯೋಗ ನೀಡಿರುವ ವರದಿ ಅವೈಜ್ಞಾನಿಕವಾಗಿದ್ದು, ದಲಿತ ಸಮುದಾಯದ ಬಲಗೈ ಬಣಗಳಿಗೆ ಗಂಭೀರ ಅನ್ಯಾಯವಾಗಿದೆ ಎಂದು ಚಿತ್ರದುರ್ಗದ ಛಲವಾದಿ ಗುರುಪೀಠದ ಬಸವ ನಾಗಿದೇವ ಸ್ವಾಮೀಜಿ ಕಿಡಿಕಾರಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳಮೀಸಲಾತಿ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಣ್ಣ ಸಮಸ್ಯೆಯನ್ನು ದೊಡ್ಡದಾಗಿಸಿ ಬಲಗೈ ಸೇರಿ ಹಲವು ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.

ನಾಗಮೋಹದಾಸ್ ಆಯೋಗದ ವರದಿಯಲ್ಲಿ ಉದ್ದೇಶಪೂರ್ವಕವಾಗಿ ಬಲಗೈ ಸಮುದಾಯದ ಜನಸಂಖ್ಯೆಯನ್ನು ಕಡಿಮೆ ತೋರಿಸಲಾಗಿದ್ದು, ಈ ವರದಿಯನ್ನು ತಕ್ಷಣ ಮರುಪರಿಶೀಲನೆಗೆ ಒಳಪಡಿಸಬೇಕು. ಸರ್ಕಾರವೇ ದೌರ್ಜನ್ಯ ನಡೆಸುತ್ತಿರುವಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಅವೈಜ್ಞಾನಿಕ ಒಳಮೀಸಲಾತಿ ಹಂಚಿಕೆಯನ್ನು ಮಾನ್ಯ ಮಾಡಬಾರದು. ತಪ್ಪಿದ್ದಲ್ಲಿ ಕಾನೂನು ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಮಾ.27ರಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಕುರಿತು ನಿರ್ಣಯ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದರು. ಆದರೆ, ಇದುವರೆಗೆ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ವಿಧಾನಸಭೆ ಉಪಚುನಾವಣೆ ಬಳಿಕ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿಂದೂ ಎನ್ನುವುದು ಜೀವನ ಸ್ವಭಾವ, ಆಚರಣೆಯಲ್ಲ
ಬಂಟ್ವಾಳ ಶಾಸಕರು ಮಂಡಿಸಿದ ಹಕ್ಕುಚ್ಯುತಿಯಿಂದ ನೋವಾಗಿದೆ: ರಮಾನಾಥ ರೈ