ನಾಗಮೋಹನ್‌ದಾಸ್ ಜಾತಿ ಸಮೀಕ್ಷೆ ವರದಿ ಅವೈಜ್ಞಾನಿಕ

KannadaprabhaNewsNetwork |  
Published : Aug 12, 2025, 12:30 AM IST
ನಾಗಮೋಹನ್‌ದಾಸ್ ಜಾತಿ ಸಮೀಕ್ಷೆ ವರದಿ ಅವೈಜ್ಞಾನಿಕ | Kannada Prabha

ಸಾರಾಂಶ

ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಸೇರಿದ ಪರೈಯ್ಯ, ಪರವನ್ ಜಾತಿಯನ್ನು ಎಡಗೈ ಪಂಗಡಕ್ಕೆ ಸೇರಿಸಿರುವುದಲ್ಲದೇ ಬಲಗೈ ಸಮುದಾಯಕ್ಕೆ ಸೇರಿದ ಇನ್ನೂ ಹಲವು ಜಾತಿಗಳನ್ನು ಹಿಂದುಳಿದ ಜಾತಿಗಳ ಗುಂಪಿಗೆ ಸೇರಿಸಿ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಸಮೂಹಕ್ಕೆ ಶೇ.1ರಷ್ಟು ಮೀಸಲಾತಿ ನಿಗದಿಪಡಿಸಿರುವುದು ಅವೈಜ್ಞಾನಿಕವಾಗಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್ ಅಧ್ಯಕ್ಷತೆಯ ಒಳ ಮೀಸಲಾತಿ ಏಕ ಸದಸ್ಯ ವಿಚಾರಣಾ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಹೊಲಯ ಸಮುದಾಯದವರಿಗೆ ಅನ್ಯಾಯವಾಗಿರುವುದನ್ನು ಪರಿಶೀಲಿಸಿ ನ್ಯಾಯ ಒದಗಿಸುವಂತೆ ಜಿಲ್ಲಾ ಹೊಲಯ (ಬಲಗೈ) ಸಮುದಾಯದ ಮುಖಂಡರಾದ ವಿಜಯಲಕ್ಷ್ಮೀ, ಆನಂದ್‌ಕುಮಾರ್, ಸುರೇಶ್ ಕಂಠಿ, ಕೆ.ಎನ್.ದೀಪಕ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಸೇರಿದ ಪರೈಯ್ಯ, ಪರವನ್ ಜಾತಿಯನ್ನು ಎಡಗೈ ಪಂಗಡಕ್ಕೆ ಸೇರಿಸಿರುವುದಲ್ಲದೇ ಬಲಗೈ ಸಮುದಾಯಕ್ಕೆ ಸೇರಿದ ಇನ್ನೂ ಹಲವು ಜಾತಿಗಳನ್ನು ಹಿಂದುಳಿದ ಜಾತಿಗಳ ಗುಂಪಿಗೆ ಸೇರಿಸಿ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಸಮೂಹಕ್ಕೆ ಶೇ.1ರಷ್ಟು ಮೀಸಲಾತಿ ನಿಗದಿಪಡಿಸಿರುವುದು ಅವೈಜ್ಞಾನಿಕವಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೀಸಲಾತಿಗೆ ಸಂಬಂಧಿಸಿದ ವರದಿ ಸಿದ್ದಪಡಿಸಲು ಮೇ 5 ರಿಂದ ಜು.6ರವರೆಗೆ ನಡೆದ ಸಮೀಕ್ಷೆಯಲ್ಲಿ 27.24 ಲಕ್ಷ ಕುಟುಂಬಗಳ 1.ಕೋಟಿ ಜನರನ್ನು ಸಮೀಕ್ಷೆ ಮಾಡಿದ್ದು, ಪ್ರಸ್ತುತ 5 ಗುಂಪುಗಳಾಗಿ ವಿಂಗಡಿಸಿ ಅತಿ ಹಿಂದುಳಿದ ಗುಂಪಿಗೆ ಶೇ.1, ಎಡಗೈ ಗುಂಪಿಗೆ ಶೇ.6, ಬಲಗೈ ಗುಂಪಿಗೆ ಶೇ.5, ಬಂಜಾರ, ಭೋವಿ, ಕೊರಮ, ಕೊರಚ, ಅಸ್ಪೃಶ್ಯರಲ್ಲದ ಜಾತಿಗಳಿಗೆ ಶೇ.4ರಷ್ಟು ಜಾತಿಯೇ ಅಲ್ಲದೇ ಗುಂಪುಗಳಿಗೆ ಶೇ.1ರಷ್ಟು ಮೀಸಲು ನಿಗದಿಪಡಿಸಿರುವುದು ಸರಿಯಷ್ಟೇ. ಏಕಪಕ್ಷೀಯವಾಗಿ ಒಂದು ಸಮುದಾಯವನ್ನು ಓಲೈಸಲು ಮತ್ತೊಂದು ಸಮುದಾಯಕ್ಕೆ ಅನ್ಯಾಯ ಮಾಡಿರುವ ನಾಗಮೋಹನ್‌ದಾಸ್ ವರದಿ ಪಕ್ಷಪಾತದಿಂದ ಕೂಡಿದೆ ಎಂದು ಆರೋಪಿಸಿದ್ದಾರೆ.

ವರದಿಯ ಪ್ರಕಾರ ಮಾದಿಗರು 27,73,780, ಹೊಲಯ 27,72,103, ಛಲವಾದಿ 3,76,448, ಆದಿ ಕರ್ನಾಟಕ 1,47,199, ಪರೈಯನ್ ಹಾಗೂ ಪರಯ 1,61,164, ಆದಿ ದ್ರಾವಿಡ 3,20,641೧ ಆಗಿದ್ದು, ಆದರೆಹೊಲಯ ಸಮುದಾಯಕ್ಕೆ ಛಲವಾದಿ, ಆದಿ ಕರ್ನಾಟಕ, ಪರೈಯನ್ ಹಾಗೂ ಪರಯ, ಆದಿ ದ್ರಾವಿಡರು ಇವರೆಲ್ಲರೂ ಮೂಲ ಹೊಲಯ ಜಾತಿಗೆ ಸೇರಿದವರಾಗಿರುತ್ತಾರೆ.

ಇನ್ನೂ 9 ಲಕ್ಷ ಜನರನ್ನು ಜಾತಿ ಗಣತಿ ಸಮಯದಲ್ಲಿ ನಮೂದಿಸದೆ ಹೊಲಯ ಜಾತಿಗೆ ಸೇರಿದಿವರನ್ನು ವಿಂಗಡಿಸಿ ಮಾದಿಗರಿಗೆ ಬೇಕಾದ ಸಮುದಾಯವನ್ನು ಸೇರ್ಪಡೆ ಮಾಡಿಕೊಂಡು ಸಂಖ್ಯೆಯ ಬಲವನ್ನು ಹೆಚ್ಚಿಗೆ ತೋರಿಸುತ್ತಿರುವುದನ್ನು ನೋಡಿದರೆ ಮಲತಾಯಿ ಧೋರಣೆ ಇದ್ದಂತಿದೆ ಎಂದು ದೂರಿದ್ದಾರೆ.

ಆದ ಕಾರಣ ನಾಗಮೋಹನ್‌ದಾಸ್‌ರವರು ಸಲ್ಲಿಸಿರುವ ಏಕಪಕ್ಷೀಯ, ಪಕ್ಷಪಾತದಿಂದ ಕೂಡಿರುವ ವರದಿಯನ್ನು ಯಥಾತ್ತಾಗಿ ಒಪ್ಪಿಕೊಳ್ಳದೆ ಸಚಿವ ಸಂಪುಟದ ಉಪಸಮಿತಿ ರಚಿಸಿ ಮಾನವ ಶಾಸ್ತ್ರಜ್ಞರನ್ನು ನೇಮಿಸಿ ಕೂಲಂಕಷ ಪರಿಶೀಲಿಸಿ ನಂತರ ಮೀಸಲಾತಿ ವರ್ಗೀಕರಣ ಮಾಡುವಂತೆ ಮುಖಂಡರಾದ ಎಚ್.ಕೆ.ಲವ, ಜೆ.ಪ್ರಸನ್ನ, ಸಿವೈ.ನಿತ್ಯಾನಂದ ಅವರೂ ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸುದ್ದಿ ಓದದಿದ್ದರೆ ಡಿಜಿಟಲ್‌ ಅರೆಸ್ಟ್‌ ಆಗ್ತಿರಿ!
ರೈತರ ಯೂರಿಯಾ ಕದ್ದು ತಮಿಳ್ನಾಡಿಗೆ ಸಾಗಣೆ ದಂಧೆ ಪತ್ತೆ