3 ಕೋಟಿ ವೆಚ್ಚದಲ್ಲಿ ನಾಗರಕೆರೆ ಪುನರುಜ್ಜೀವನ

KannadaprabhaNewsNetwork |  
Published : Feb 07, 2026, 01:30 AM IST
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೆರೆ ಸಂರಕ್ಷಣೆಗೆ ಸಂಬಂಧಿಸಿದ ಏಕಗವಾಕ್ಷಿ ಸಮಿತಿ ಸಭೆಯ ನಡೆಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ನಾಗರಕೆರೆಯನ್ನು ಪುನರುಜ್ಜೀವನಗೊಳಿಸುವ ಸಂಬಂಧ ಫಾಕ್ಸ್ ಕಾನ್ ಸಂಸ್ಥೆಯು ತನ್ನ ಕಾರ್ಪೊರೇಟ್‌ ಪರಿಸರ ಹೊಣೆಗಾರಿಕೆ ನಿಧಿಯಡಿ ₹3 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಮುಂದಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದರು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ನಾಗರಕೆರೆಯನ್ನು ಪುನರುಜ್ಜೀವನಗೊಳಿಸುವ ಸಂಬಂಧ ಫಾಕ್ಸ್ ಕಾನ್ ಸಂಸ್ಥೆಯು ತನ್ನ ಕಾರ್ಪೊರೇಟ್‌ ಪರಿಸರ ಹೊಣೆಗಾರಿಕೆ ನಿಧಿಯಡಿ ₹3 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಮುಂದಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕೆರೆ ಸಂರಕ್ಷಣೆಗೆ ಸಂಬಂಧಿಸಿದ ಏಕಗವಾಕ್ಷಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಫಾಕ್ಸ್ ಕಾನ್ ಸಂಸ್ಥೆ ನಾಗರಕೆರೆ ಪುನರುಜ್ಜೀವನಗೊಳಿಸುವ ಸಂಬಂಧ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿದೆ. ಈ ಕುರಿತು ಸಭೆಯಲ್ಲಿ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಕೂಲಂಕಷವಾಗಿ ಚರ್ಚಿಸಲಾಗಿದೆ. ಕರೆ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೈಗಳ್ಳಲಾಗುತ್ತಿರುವ ಕಾಮಗಾರಿಯ ಸಂಬಂಧ ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ ಸಲಹೆ ಪಡೆಯಲಾಯಿತು ಎಂದು ಹೇಳಿದರು.

ಅಂತಿಮವಾಗಿ ಫಾಕ್ಸ್ ಕಾನ್ ಕಂಪನಿ ಸಿಇಆರ್ ಅನುದಾನದಡಿ ಸಿದ್ಧಪಡಿಸಲಾಗಿರುವ ವಿಸ್ತ್ರತ ಯೋಜನಾ ವರದಿಯನ್ನು ಅನುಮೋದನೆಗಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಕೆರೆ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲು ತೀರ್ಮಾನಿಸಲಾಗಿದೆ. ಅನುಮೋದನೆ ಬಂದ ನಂತರ ನಾಗರಕೆರೆ ಪುನರುಜ್ಜೀವನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಕೈಗಾರಿಕೆಗಳ ವಿಸ್ತೃತ ವರದಿ ನೀಡಲು ಸೂಚನೆ:

ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿನ ಕೈಗಾರಿಕೆಗಳು, ಕಾರ್ಖಾನೆಗಳಿಗೆ ಭೇಟಿ ನೀಡಿ ಅಲ್ಲಿನ ನೀರಿನ ಮೂಲ, ಮಳೆ ನೀರು ಕೊಯ್ಲು ಪದ್ಧತಿ ಅಳವಡಿಕೆ, ತ್ಯಾಜ್ಯ ವಿಲೇವಾರಿ ಘಟಕ ಸೇರಿದಂತೆ ಮಾಲಿನ್ಯ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿ ವರದಿ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ರಮೇಶ್.ಬಿ.ಎಸ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಶ್ರೀಕಾಂತ್, ಸಣ್ಣ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಮಂಜುನಾಥ್,ಅಂತರ್ಜಲ ಇಲಾಖೆ ಹಿರಿಯ ಭೂ ವಿಜ್ಞಾನಿ ಪಲ್ಲವಿ, ಪರಿಸರ ಅಧಿಕಾರಿ ವಿಜಯ, ಫಾಕ್ಸ್‌ಕಾನ್‌ ಸಂಸ್ಥೆ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

6ಕೆಡಿಬಿಪಿ1-

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕೆರೆ ಸಂರಕ್ಷಣೆಗೆ ಸಂಬಂಧಿಸಿದ ಏಕಗವಾಕ್ಷಿ ಸಮಿತಿ ಸಭೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಓದಿನಲ್ಲಿ ತಲ್ಲೀನತೆ ಇದ್ದರೆ ಕೆಟ್ಟ ಆಲೋಚನೆಗಳು ದೂರ: ಓಂಕಾರನಾಯ್ಕ
ರಾಷ್ಟ್ರೀಯ ಹೆದ್ದಾರೀಲಿ ಖಾಸಗಿ ಬಸ್‌ ಭಸ್ಮ