ನಾಗರಪಂಚಮಿ ಹಬ್ಬವನ್ನು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನಲ್ಲಿ ಶ್ರದ್ಧಾ-ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಕುಂದಾಪುರ: ನಾಗರಪಂಚಮಿ ಹಬ್ಬವನ್ನು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನಲ್ಲಿ ಶ್ರದ್ಧಾ-ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಹಬ್ಬದ ಅಂಗವಾಗಿ ಕಾಲೇಜು ಆವರಣದಲ್ಲಿರುವ ನಾಗಬನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದವು. ಸುಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ವಿದ್ಯಾರಣ್ಯ ಆಂಗ್ಲಮಾಧ್ಯಮ ಮತ್ತು ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್ ನ ವಿದ್ಯಾರ್ಥಿಗಳು ಪಾಲ್ಗೊಂಡರು.
ಮನೆಯಿಂದ ದೂರವಿದ್ದು ಹಾಸ್ಟೆಲ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಹಬ್ಬದ ಆಚರಣೆಯು ಕರಾವಳಿಯ ಕೌಟುಂಬಿಕ ಸೌಹಾರ್ದತೆ ಮತ್ತು ಹಬ್ಬದ ವಾತಾವರಣವನ್ನು ಸೃಷ್ಟಿಸಿಕೊಟ್ಟಿತು.
ಸಂಸ್ಥೆಯ ಅಧ್ಯಕ್ಷ ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲ ರಂಜನ್ ಬಿ. ಶೆಟ್ಟಿ, ಹಾಸ್ಟೆಲ್ ವಾರ್ಡನ್‌ಗಳು, ಉಪನ್ಯಾಸಕ ವೃಂದದವರು ಹಾಗೂ ಹಾಸ್ಟೆಲ್ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.