ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡುವಂತೆ ನಾಗರಾಜ್ ಆಗ್ರಹ

KannadaprabhaNewsNetwork |  
Published : Jun 02, 2026, 02:00 AM IST
1ಎಚ್ಎಸ್ಎನ್19 :  | Kannada Prabha

ಸಾರಾಂಶ

ರಾಜ್ಯದಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿಯ ವಿರುದ್ಧ ಕಾಂಗ್ರೆಸ್ ಪಕ್ಷದ ಹೋರಾಟಕ್ಕೆ ಹೆಚ್ಚಿನ ಶಕ್ತಿ ತುಂಬುವ ನಿಟ್ಟಿನಲ್ಲಿ ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡುವುದು ಸೂಕ್ತ ಕ್ರಮವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದ್ದು, ಅವುಗಳಿಗೆ ಇನ್ನಷ್ಟು ವೇಗ ನೀಡಲು ಜಿಲ್ಲೆಯ ಪ್ರತಿನಿಧಿಗೆ ಸಚಿವ ಸ್ಥಾನ ದೊರಕುವುದು ಅಗತ್ಯವಾಗಿದೆ ಎಂದು ಹೇಳಿದ್ದಾರೆ. ಇದೇ ವೇಳೆ, ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾಗೂ ಕರಡಿ ದಾಳಿಗಳಂತಹ ಸಮಸ್ಯೆಗಳು ದಿನೇದಿನೇ ಹೆಚ್ಚಾಗುತ್ತಿದ್ದು, ಅವುಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಚಿವ ಸ್ಥಾನ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ಅರಸೀಕೆರೆ: ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕ ಕೆ. ಎಂ. ಶಿವಲಿಂಗೇಗೌಡರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಒಬಿಸಿ ಘಟಕದ ಅಧ್ಯಕ್ಷ ಮಂಗಳಾಪುರ ನಾಗರಾಜ್ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿಯ ವಿರುದ್ಧ ಕಾಂಗ್ರೆಸ್ ಪಕ್ಷದ ಹೋರಾಟಕ್ಕೆ ಹೆಚ್ಚಿನ ಶಕ್ತಿ ತುಂಬುವ ನಿಟ್ಟಿನಲ್ಲಿ ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡುವುದು ಸೂಕ್ತ ಕ್ರಮವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದ್ದು, ಅವುಗಳಿಗೆ ಇನ್ನಷ್ಟು ವೇಗ ನೀಡಲು ಜಿಲ್ಲೆಯ ಪ್ರತಿನಿಧಿಗೆ ಸಚಿವ ಸ್ಥಾನ ದೊರಕುವುದು ಅಗತ್ಯವಾಗಿದೆ ಎಂದು ಹೇಳಿದ್ದಾರೆ. ಇದೇ ವೇಳೆ, ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾಗೂ ಕರಡಿ ದಾಳಿಗಳಂತಹ ಸಮಸ್ಯೆಗಳು ದಿನೇದಿನೇ ಹೆಚ್ಚಾಗುತ್ತಿದ್ದು, ಅವುಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಚಿವ ಸ್ಥಾನ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ಈ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಾಜಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿಂದು ಮೇಲೆ ಎಲ್ಲೇ ಹಲ್ಲೆ ಆದ್ರೂ ಧರಣಿ: ಬಿವೈವಿ
ವೈದ್ಯ ಡಾ.ಚಂದ್ರಶೇಖರ್ ಅವರ ’ಹೆಜ್ಜೆಗುರುತು’ ಕವನ ಸಂಕಲನ ಬಿಡುಗಡೆ