ಚಳ್ಳಕೆರೆ: ತಾಲೂಕಿನ ನನ್ನಿವಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಡೆಹಟ್ಟಿ ಗ್ರಾಮದ ಸೋಮಲಬಂಡೆ ಕಲ್ಲಿನ ಕ್ವಾರೆಯಲ್ಲಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಸೊಂಟಕ್ಕೆ ಹಗ್ಗ ಸಡಿಲಗೊಂಡು ಕೆಳಗೆ ಬಿದ್ದು ಗಾಯಗೊಂಡ ಪರಿಣಾಮ ನಾಗೇಂದ್ರ(೩೮) ಎಂಬಾತನನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮೃತನ ಪತ್ನಿ ಪಿ.ಅನಿತಮ್ಮ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಪಿಎಸ್‌ಐ ಧರೆಪ್ಪಬಾಳಪ್ಪದೊಡ್ಡಮನಿ ಯುಡಿಆರ್ ಪ್ರಕರಣ ದಾಖಲಿಸಿದ್ಧಾರೆ.