)
ಕನ್ನಡಪ್ರಭ ವಾರ್ತೆ ಯಾದಗಿರಿ
ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ್ ಅವರು ಅಧ್ಯಕ್ಷತೆ ವಹಿಸುವರು. ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಇಲಾಖೆಯ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.
ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ಟಿ.ನಾರಾಯಣಸ್ವಾಮಿ, ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು, ರಾಯಚೂರು ಸಂಸದ ಜಿ.ಕುಮಾರ ನಾಯಕ, ಗುಲಬರ್ಗಾ ಸಂಸದ ರಾಧಾಕೃಷ್ಣ ದೊಡ್ಡಮನಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರಾದ ಶರಣಪ್ಪ ಸಲಾದಪೂರ, ಶಹಾಪುರ ಶಾಸಕ ಶರಣಬಸ್ಸಪ್ಪಗೌಡ ದರ್ಶನಾಪೂರ, ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ, ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಸಹಿತ ಮುಂತಾದ ಗಣ್ಯರು ಉಪಸ್ಥಿತರಿರುವರು.ಯಾದಗಿರಿಗಿಂದು ಸಚಿವ ಪ್ರಿಯಾಂಕ್ ಖರ್ಗೆ: ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ ಖರ್ಗೆ ನ.13ರಂದು ಯಾದಗಿರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು. ಬೆಳಗ್ಗೆ 7.30ಕ್ಕೆ ಬೆಂಗಳೂರಿನಿಂದ ಯಾದಗಿರಿಗೆ ಆಗಮಿಸಲಿದ್ದು, 11ಕ್ಕೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ಜಿಲ್ಲಾಡಳಿತ ಯಾದಗಿರಿ ವತಿಯಿಂದ ಆಯೋಜಿಸಲಾಗಿರುವ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಮಂಜೂರಾದ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಅಭಿವೃದ್ಧಿ ಕಾಮಗಾರಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 2.30ಕ್ಕೆ ರಸ್ತೆ ಮೂಲಕ ಯಾದಗಿರಿಯಿಂದ ಕಲಬುರಗಿಗೆ ಪ್ರಯಾಣಿಸಲಿದ್ದಾರೆಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.