ಸುಹಾಸ್ ಶೆಟ್ಟಿ ಮನೆಗೆ ನಳಿನ್ ಕುಮಾರ್ ಕಟೀಲು ಭೇಟಿ: ವೈಯಕ್ತಿಕ ಧನಸಹಾಯ

KannadaprabhaNewsNetwork |  
Published : May 07, 2025, 12:46 AM IST
ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ ಸಾಂತ್ವಾನ  | Kannada Prabha

ಸಾರಾಂಶ

ಬಜ್ಪೆಯಲ್ಲಿ ಹತ್ಯೆಗೊಳಗಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ ನೀಡಿ ವೈಯಕ್ತಿಕ ನೆಲೆಯಲ್ಲಿ ರು. ಒಂದು ಲಕ್ಷ ಅರ್ಥಿಕ ಸಹಾಯ ನೀಡಿದರು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಬಜ್ಪೆಯಲ್ಲಿ ಹತ್ಯೆಗೊಳಗಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ ನೀಡಿ ವೈಯಕ್ತಿಕ ನೆಲೆಯಲ್ಲಿ ರು. ಒಂದು ಲಕ್ಷ ಅರ್ಥಿಕ ಸಹಾಯ ನೀಡಿದರು.

ಅವರು ಸುಹಾಸ್ ಶೆಟ್ಟಿ ಅವರ ತಂದೆ ಹಾಗೂ ತಾಯಿಯ ಜೊತೆ ಕೆಲ ಹೊತ್ತು ಮಾತನಾಡಿದರು. ಕುಟುಂಬಕ್ಕೆ ಸಾಂತ್ವನ ನೀಡಿದ ಜೊತೆಗೆ ಕುಟುಂಬದ ಜೊತೆ ಸದಾಕಾಲವೂ ಇರುವುದಾಗಿ ಭರವಸೆ ನೀಡಿದರು.

ನಮಗೆ ರಾಜ್ಯದ ಸರ್ಕಾರ ಮತ್ತು ಪೋಲೀಸ್ ಇಲಾಖೆ ಮೇಲೆ ಯಾವುದೇ ಭರವಸೆ ಇಲ್ಲ. ಈವರೆಗೆ ಸರ್ಕಾರದ ಕಡೆಯಿಂದ ಯಾವೊಬ್ಬ ವ್ಯಕ್ತಿಯೂ ಮಾತನಾಡಿಲ್ಲ ಎಂದು ಮನೆಯವರು ಬೇಸರ ವ್ಯಕ್ತಪಡಿಸಿದರು. ಪ್ರಕರಣದ ತನಿಖೆಯನ್ನು ಕೇಂದ್ರದ ಎನ್.ಐ.ಎ.ತನಿಖಾ ಸಂಸ್ಥೆಗೆ ವಹಿಸಿ, ಸುಹಾಸ್ ಶೆಟ್ಟಿಯ ಸಾವಿಗೆ ನ್ಯಾಯ ಒದಗಿಸಿ ಕೊಡಿ ಮತ್ತು ಮುಂದೆ ಯಾವೊಬ್ಬ ಹಿಂದೂ‌ ಕಾರ್ಯಕರ್ತನಿಗೆ ಇಂತಹ ಕಷ್ಟ ಬರಬಾರದು ಎಂದು ಕಣ್ಣೀರು ಇಟ್ಟರು.

ಮಾಜಿ ಮೇಯರ್ ಸುದೀರ್ ಶೆಟ್ಟಿ ಕಣ್ಣೂರು, ಮಾಜಿ ಕಾರ್ಪೊರೇಟ್ ರ್ ವಿಜಯಕುಮಾರ್ ಶೆಟ್ಟಿ, ಬಿಜೆಪಿ ಪುತ್ತೂರು ಮಾಜಿ‌ ಮಂಡಲ‌ ಅಧ್ಯಕ್ಷ ಸಹಜ ರಾಧಾಕೃಷ್ಣ ಆಳ್ವ, ಸುಳ್ಯ ‌ಮಂಡಲ ಮಾಜಿ ಅಧ್ಯಕ್ಷ ಹರೀಶ್ ಕಾಂಜಿಪಿಳಿ, ಪ್ರಮುಖರಾದ ರವೀಶ್ ಶೆಟ್ಟಿ, ಸುದರ್ಶನ ಬಜ, ಮಾಧವ ಮಾವೆ, ಸಚ್ಚಿದಾನಂದ ಶೆಟ್ಟಿ ಮುನ್ನಲಾಯಿ ಗುತ್ತು, ಪುರುಷೋತ್ತಮ ಶೆಟ್ಟಿ ವಾಮದಪದವು, ಗಣೇಶ್ ರೈ ಮಾಣಿ, ದಿನೇಶ್ ಶೆಟ್ಟಿ ದಂಬೆದಾರ್, ಅಜಿತ್ ಶೆಟ್ಟಿ ಕಾರಿಂಜ, ಹರೀಶ್ ಕುತ್ತಾರ್,ರವಿರಾಮ ರೈ, ನಾಗೇಶ್ ಶೆಟ್ಟಿ ಕೊಡಂಗಾಯಿ, ಸತೀಶ್ ಶೆಟ್ಟಿ ಮದ್ವ ಅಜಿತ್ ಪುತ್ತೂರು, ರಂಜಿತ್, ಸುಕೇಶ್ ಚೌಟ, ಕಾರ್ತಿಕ್ ಬಲ್ಲಾಳ್, ಶ್ಯಾಮಣ್ಣ ಶೆಟ್ಟಿ, ಹರೀಶ್ ರಾಯಿ,ಅರುಣ್ ಕುವೆಲ್ಲೋ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾ.1ರಿಂದ ಸೇವೆ ಬಂದ್‌ ಸರ್ಕಾರಿ ವೈದ್ಯರಿಂದ ಎಚ್ಚರಿಕೆ
ಚರಿತ್ರೆ ತಿಳಿದಿದ್ದರಷ್ಟೇ ಚರಿತ್ರೆ ಸೃಷ್ಟಿಸಲು ಸಾಧ್ಯ: ಸಿಎಂ