ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಒಡ್ಡೂರು ಪಾರ್ಮ್‌ನಲ್ಲಿ ನಡೆದ ಎರಡು ದಿನಗಳ ಪಂ.ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ-2026 ವರ್ಗ ಸಮಾಪ್ತಿಗೊಂಡಿತು.
ಮಂಗಳೂರು: ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಒಡ್ಡೂರು ಪಾರ್ಮ್‌ನಲ್ಲಿ ನಡೆದ ಎರಡು ದಿನಗಳ ಪಂ.ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ-2026 ವರ್ಗ ಸಮಾಪ್ತಿಗೊಂಡಿತು.
ಸಮಾರೋಪ ಸಮಾರಂಭದಲ್ಲಿ ಪ್ರಶಿಕ್ಷಣಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಅಭ್ಯಾಸ ವರ್ಗ, ಕಾರ್ಯಕಾರಿಣಿ ಸಭೆ, ಪದಾಧಿಕಾರಿಗಳ ಸಭೆ, ಪ್ರಶಿಕ್ಷಣ, ಹೀಗೆ ನಿರಂತರ ಕಾರ್ಯ ಚಟುವಟಿಕೆಗಳೇ ಬಿಜೆಪಿ ಜಗತ್ತಿನ ಅತ್ಯಂತ ದೊಡ್ಡ ರಾಜಕೀಯ ಪಕ್ಷವಾಗಿ ಬೆಳೆಯಲು ಕಾರಣ. ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ ಎಂಬ ಸಿದ್ಧಾಂತದ ಭಾರತೀಯ ಜನತಾ ಪಾರ್ಟಿ ಪ್ರತಿಯೊಬ್ಬ ಕಾರ್ಯಕರ್ತರನ್ನು ಗುರುತಿಸಿ ಜವಾಬ್ದಾರಿ ನೀಡಿ ರಾಷ್ಟ್ರ ಕಾರ್ಯಕ್ಕೆ ಅಣಿಯಾಗಿಸುತ್ತದೆ. ಭಾರತವನ್ನು ಪರಮ ವೈಭವದೆಡೆಗೆ ಕೊಂಡೊಯ್ಯುವುದೇ ನಮ್ಮೆಲ್ಲರ ಗುರಿಯಾಗಿದ್ದು, ಆ ನಿಟ್ಟಿನಲ್ಲಿ ಜೊತೆಯಾಗಿ ಸಾಗೋಣ ಎಂದರು.ಶಾಸಕರಾದ ಡಿ.ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಕಿಶೋರ್ ಕುಮಾರ್ ಪುತ್ತೂರು, ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಮತ್ತಿತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.